ETV Bharat / state

ಸಿದ್ದರಾಮಯ್ಯ ಬಜೆಟ್: 'ತೋಟಗಾರಿಕಾ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್ ಮತ್ತು ರಫ್ತಿಗೆ ಹೆಚ್ಚಿನ ಒತ್ತು'

author img

By

Published : Jul 7, 2023, 5:15 PM IST

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಕ್ಷೇತ್ರದ ಪ್ರಾಯೋಗಿಕ ಅರಿವು ಮೂಡಿಸಲು ʻವಿದ್ಯಾರ್ಥಿಗಳಿಗಾಗಿ ತೋಟಗಾರಿಕೆʼ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

cm-siddaramaiah-budget-announcement-on-horticulture-and-silk-production
ತೋಟಗಾರಿಕಾ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್ ಮತ್ತು ರಫ್ತಿಗೆ ಹೆಚ್ಚಿನ ಒತ್ತು: ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ಅಭಿವೃದ್ಧಿ

ಬೆಂಗಳೂರು: ತೋಟಗಾರಿಕೆ ರೈತರ ಆದಾಯವನ್ನು ಹೆಚ್ಚಿಸುವುದರಲ್ಲಿ ತೋಟಗಾರಿಕಾ ಬೆಳೆಗಳು ಪ್ರಮುಖ ಪಾತ್ರ ವಹಿಸುತ್ತವೆ. ತೋಟಗಾರಿಕಾ ವಲಯದಲ್ಲಿನ ರಾಜ್ಯದ ಸಾಮರ್ಥ್ಯ ಹೆಚ್ಚಿಸಲು ತೆಂಗು, ಅಡಕೆ, ದ್ರಾಕ್ಷಿ, ದಾಳಿಂಬೆ, ಮಾವು ಮತ್ತಿತರ ಹಣ್ಣು, ತರಕಾರಿ, ಹೂವುಗಳು ಸೇರಿದಂತೆ ತೋಟಗಾರಿಕಾ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್ ಮತ್ತು ರಫ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಆಯವ್ಯಯ ಮಂಡನೆಯ ವೇಳೆ ತಿಳಿಸಿದರು.

2023-24ನೇ ಸಾಲಿನಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು. ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣೆಗಾಗಿ ಎಂಟು ಶೀತಲ ಘಟಕಗಳನ್ನು ನಿರ್ಮಾಣ ಮಾಡಲಾಗುವುದು. ಅನನ್ಯವಾದ ರುಚಿ ಮತ್ತು ಕಂಪು ಹೊಂದಿರುವ ಚಿಕ್ಕಮಗಳೂರು, ಕೊಡಗು ಮತ್ತು ಬಾಬಾ ಬುಡನಗಿರಿಯ ಅರೇಬಿಕಾ ಕಾಫಿ ವೈವಿಧ್ಯಗಳು GI Tag ಹೊಂದಿವೆ. ರಾಜ್ಯದ ಕಾಫಿಯನ್ನು ಇನ್ನಷ್ಟು ಪ್ರಚುರಪಡಿಸಿ ಜನಪ್ರಿಯಗೊಳಿಸಲು ಮತ್ತು ಕಾಫಿ ಎಕೋ ಟೂರಿಸಂ ಅನ್ನು ಉತ್ತೇಜಿಸಲು ಕರ್ನಾಟಕದ ಕಾಫಿಗೆ ಬ್ರಾಂಡಿಂಗ್‌ ಮಾಡಲು ಕ್ರಮ ವಹಿಸಲಾಗುವುದು ಎಂದರು.

ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳು GI Tag ಗಳನ್ನು ಪಡೆದಿವೆ. ಇವುಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್‌ ಉತ್ತೇಜಿಸಲು ನೂತನ ಕಾರ್ಯಕ್ರಮವನ್ನು ರೂಪಿಸಲಾಗುವುದು. ವಾಣಿಜ್ಯ ಹೂವಿನ ರಫ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ ಹೊಂದುವ ಸಾಮರ್ಥ್ಯ ಹೊಂದಿದ್ದು, ಇವುಗಳ ತಳಿಗಳ ಕೊರತೆ ನಿವಾರಿಸಲು ಅಂತಹ ತಳಿಗಳನ್ನು ಆಮದು ಮಾಡಿಕೊಂಡು ರೈತರಿಗೆ ಕೈಗೆಟಕುವ ದರದಲ್ಲಿ ಒದಗಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಕ್ಷೇತ್ರದ ಪ್ರಾಯೋಗಿಕ ಅರಿವು ಮೂಡಿಸಲು ʻವಿದ್ಯಾರ್ಥಿಗಳಿಗಾಗಿ ತೋಟಗಾರಿಕೆʼ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಸಿಎಂ ಘೋಷಿಸಿದರು.

ರಾಮನಗರ ಮತ್ತು ಶಿಡ್ಲಘಟ್ಟದ ರೇಷ್ಮೆಗೂಡಿನ ಮಾರುಕಟ್ಟೆಗಳಲ್ಲಿ ಏಶಿಯಾದಲ್ಲಿಯೇ ಅತಿ ಹೆಚ್ಚಿನ ವಹಿವಾಟು ನಡೆಯುತ್ತದೆ. ರಾಮನಗರ ಜಿಲ್ಲೆಯಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಅತಿದೊಡ್ಡ ಹೈಟೆಕ್‌ ಮಾರುಕಟ್ಟೆ ನಿರ್ಮಿಸಲಾಗುತ್ತಿದ್ದು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗುವಂತೆ ಶಿಡ್ಲಘಟ್ಟದಲ್ಲಿನ ಮಾರುಕಟ್ಟೆಯನ್ನು 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆಯಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಮೈಸೂರು ಬಿತ್ತನೆ ಪ್ರದೇಶದಲ್ಲಿ ಮೂಲಭೂತ ಸೌಕರ್ಯವನ್ನು ಬಲಪಡಿಸಲಾಗುವುದು. ಇದರಿಂದ ಉತ್ತಮ ಗುಣಮಟ್ಟದ ರೋಗರಹಿತವಾದ ಮೈಸೂರು ಬಿತ್ತನೆ ಗೂಡುಗಳನ್ನು ಉತ್ಪಾದಿಸಿ, ವಾಣಿಜ್ಯ ರೇಷ್ಮೆ ಬೆಳೆಗಾರರಿಗೆ ವಿತರಿಸಲು ಮತ್ತು ಉತ್ತಮ ಗುಣಮಟ್ಟದ ಮಿಶ್ರತಳಿ ಕಚ್ಚಾ ರೇಷ್ಮೆ ಉತ್ಪಾದಿಸಲು ಅನುಕೂಲವಾಗಲಿದೆ. ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಸುಲಭವಾಗಿ ದುಡಿಯುವ ಬಂಡವಾಳವನ್ನು ಒದಗಿಸಲು ಮತ್ತು ರೇಷ್ಮೆಗೂಡಿನ ಖರೀದಿಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಐದು ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುವುದು ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ: Karnataka Budget: ದಾಖಲೆಯ ಬಜೆಟ್​ ಮಂಡಿಸಿದ ಸಿದ್ದರಾಮಯ್ಯ: ಅಬಕಾರಿ ಸುಂಕ ಹೆಚ್ಚಳ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.