ETV Bharat / state

5 ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಚಿವರ ಸಭೆ ಕರೆದ ಸಿಎಂ ಸಿದ್ದರಾಮಯ್ಯ - ಐದು ಗ್ಯಾರಂಟಿ ಯೋಜನೆ

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುವ ಸಚಿವರುಗಳ ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಸಾಧಕ ಮತ್ತು ಬಾಧಕಗಳ ಬಗ್ಗೆ ಚರ್ಚೆಗಳು ನಡೆಯಲಿವೆ.

CM Siddaramaiah Calls Meeting Of Ministers
ಸಚಿವರ ಸಭೆ ಕರೆದ ಸಿಎಂ ಸಿದ್ದರಾಮಯ್ಯ
author img

By

Published : May 31, 2023, 12:28 PM IST

ಬೆಂಗಳೂರು: ವಿಧಾನಸಭಾ ಚುನಾವಣೆ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷ ಜನತೆಗೆ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. ಈ ಕುರಿತು ಇಂದು ಅವರು ಎಲ್ಲ ಸಚಿವರ ಜತೆ ಸಮಾಲೋಚನೆ ನಡೆಸಲಿದ್ದು, ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಈ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಈ ಸಂಬಂಧ ರೂಪುರೇಷೆಗಳು ಹೊರ ಹೊಮ್ಮುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುವ ಸಚಿವರುಗಳ ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಸಾಧಕ ಬಾಧಕಗಳ ಬಗ್ಗೆ ಚರ್ಚೆಗಳು ನಡೆಯಲಿವೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಜೂ. 1 ರಿಂದಲೇ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆಗಳಿವೆ.

ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ, ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್‌ನ ಗೃಹಜ್ಯೋತಿ, ಪಡಿತರ ವ್ಯವಸ್ಥೆಯಲ್ಲಿ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಜತೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣ ಯೋಜನೆ ಹಾಗೂ ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಯನ್ನು ಜಾರಿ ಮಾಡುವುದಾಗಿ ಘೋಷಣೆ ಮಾಡಿತ್ತು.

ಜೂನ್ 1 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಐದು ಯೋಜನೆಗಳ ರೂಪುರೇಷೆಗಳು, ಮಾರ್ಗಸೂಚಿಗಳನ್ನು ಅಂತಿಮಗೊಳಿಸಲಾಗುತ್ತದೆ. ಮುಖ್ಯಮಂತ್ರಿ ಅವರು ಐದು ಇಲಾಖೆಯ ಮುಖ್ಯಸ್ಥರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಯೋಜನೆ ಅನುಷ್ಠಾನಕ್ಕೆ ವೆಚ್ಚವಾಗುವ ಹಣದ ಮಾಹಿತಿಯನ್ನು ಪಡೆದುಕೊಂಡಿದ್ದರು. ಈ ಸಭೆಯಲ್ಲಿ ಭಾಗಿಯಾಗಿದ್ದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಹಾಗೂ ಹಣಕಾಸು ಇಲಾಖೆಯ ಅಧಿಕಾರಿಗಳು ಈ ಐದು ಗ್ಯಾರಂಟಿ ಯೋಜನೆ ಜಾರಿಗೆ ವಾರ್ಷಿಕ 50 ಸಾವಿರ ಕೋಟಿ ರೂ. ಬೇಕಾಗುತ್ತದೆ ಎಂದು ಹೇಳಿದ್ದರು.

ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿನ ಅಕ್ರಮಗಳ ತನಿಖೆಗೆ ಸಿಎಸ್​ಗೆ ಸಿಎಂ ಸೂಚನೆ: 15 ದಿನದಲ್ಲಿ ವರದಿ ನೀಡಲು ಗಡುವು

ಈ ಹಿನ್ನೆಲೆಯಲ್ಲಿ ಸಂಪನ್ಮೂಲ ಕ್ರೂಢೀಕರಣಕ್ಕೆ ಏನೆಲ್ಲಾ ಮಾಡಬೇಕು ಎಂಬ ಬಗ್ಗೆ ನಾಳೆ ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟದ ಎಲ್ಲ ಸಚಿವರ ಜತೆ ಸಭೆ ನಡೆಸುವರು. ಜೂನ್ 1 ರಂದು ನಿಗದಿಯಾಗಿರುವ ಸಚಿವ ಸಂಪುಟ ಸಭೆಗೂ ಮುನ್ನವೇ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮಧ್ಯಾಹ್ನ ಎಲ್ಲ ಸಚಿವರ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಪಾಲ್ಗೊಳ್ಳುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಎಲ್ಲ ಸಚಿವರಿಗೆ ಮುಖ್ಯಮಂತ್ರಿ ಕಚೇರಿಯಿಂದ ಸೂಚನೆ ನೀಡಲಾಗಿದೆ.

ಈ ಐದು ಗ್ಯಾರಂಟಿ ಯೋಜನೆಗಳನ್ನು ಯಾರಿಗೆಲ್ಲಾ ನೀಡಬೇಕು?, ಯಾವ ಯಾವ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂಬ ಬಗ್ಗೆಯೂ ಮುಖ್ಯಮಂತ್ರಿಗಳು ಸಚಿವರೊಂದಿಗೆ ಚರ್ಚೆ ನಡೆಸುವರು. ಈ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಸಚಿವರುಗಳ ಸಲಹೆಗಳನ್ನು ಮುಖ್ಯಮಂತ್ರಿಗಳು ಸಭೆಯಲ್ಲಿ ಆಲಿಸಲಿದ್ದು, ಅಂತಿಮವಾಗಿ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಅಂದಿನಿಂದಲೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಘೋಷಣೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: 5 ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಅನುಷ್ಠಾನಕ್ಕೆ ತರಲು ಬದ್ಧವಾಗಿದೆ: ಜಮೀರ್ ಅಹ್ಮದ್ ಖಾನ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.