ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಡಾ ಅವರಿಗೆ ಮಾಧ್ಯಮಗಳ ಮೇಲಿನ ದಾಳಿಗಳ ಪಟ್ಟಿಯನ್ನು ನೀಡುವ ಮೂಲಕ ತಿರುಗೇಟು ನೀಡಿದ್ದಾರೆ. ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮಾಧ್ಯಮಗಳ ಮೇಲಿನ ನೈಜ ದಾಳಿಗಳ ಪಟ್ಟಿ ನಾವು ಕೊಡುತ್ತೇವೆ. ಇದನ್ನೆಲ್ಲ ನೀವು ಮರೆತಿರಬಹುದು. ಆದರೆ "ಇಂಡಿಯಾ" ಮರೆತಿಲ್ಲ. ಸತ್ಯದ ವರದಿ ಮಾಡಿದ್ದಕ್ಕಾಗಿ ಪತ್ರಕರ್ತರು ಬಂಧನಕ್ಕೊಳಗಾಗಿದ್ದರು. ಸತ್ಯದ ದನಿಯಾಗಿ ನಿಂತಿದ್ದಕ್ಕೆ ಮೋದಿ ಆಡಳಿತದಲ್ಲಿ ಕೆಲವು ಪತ್ರಕರ್ತರು ಕೊಲೆಯಾಗಿದ್ದರು ಎಂದು ಕಾಂಗ್ರೆಸ್ ಆರೋಪಿಸಿದೆ.
ಪತ್ರಿಕಾ ಸ್ವಾತಂತ್ಯ್ರ: ಜಗತ್ತಿನಲ್ಲಿ ಭಾರತದ ಸ್ಥಾನ, ಅವಸಾನ:
- 2015 - 136ನೇ ಸ್ಥಾನ
- 2019 - 140ನೇ ಸ್ಥಾನ
- 2022 - 150ನೇ ಸ್ಥಾನ
- 2023 - 161ನೇ ಸ್ಥಾನ
ಪಕ್ಷವೊಂದು ಸುದ್ದಿ ಮಾಧ್ಯಮಕ್ಕೆ ಬರುವುದಿಲ್ಲ, ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂಬುದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಅಲ್ಲ. ಪ್ರಧಾನಿ ನರೇಂದ್ರ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿಷೇಧಿಸಿದ್ದು ನಿಜವಾದ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಎಂದು ಟೀಕಿಸಿದ್ದಾರೆ.
ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಟೆಂಡರ್ ಅಕ್ರಮ ಆರೋಪ ಸಂಬಂಧ ತನಿಖೆಗೆ ಸಿಎಂ ಸೂಚನೆ: ಬೆಂಗಳೂರು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಟೆಂಡರ್ ಅಕ್ರಮ ಆರೋಪ ಸಂಬಂಧ ತನಿಖೆಗೆ ನಡೆಸಲು ಸಿಎಂ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರಕುತ್ತಿಲ್ಲ. ಟೆಂಡರ್‌ಗಳು ಹಾಗೂ ಔಷಧಗಳ ಖರೀದಿಯಲ್ಲಿ ಪಾರದರ್ಶಕತೆ ಇಲ್ಲದೇ ಅಕ್ರಮಗಳು ನಡೆದಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿರುತ್ತವೆ.
ಈ ಹಿನ್ನೆಲೆಯಲ್ಲಿ ಒಬ್ಬ ಐಎಎಸ್ ಅಧಿಕಾರಿಯ ನೇತೃತ್ವದಲ್ಲಿ ಉತ್ತಮ ಚಾರಿತ್ರ್ಯ ಹೊಂದಿರುವ ಸಹಕಾರ ಇಲಾಖೆಯ ಒಬ್ಬ ಅಧಿಕಾರಿ ಮತ್ತು ಆರ್ಥಿಕ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ತಂಡವನ್ನು ಈ ಕೂಡಲೇ ರಚಿಸಿವಂತೆ ಸೂಚಿಸಿದ್ದಾರೆ. ಎರಡು ವಾರಗಳೊಳಗೆ ಪಾರದರ್ಶಕ ವರದಿ ಸಲ್ಲಿಸಲು ಆದೇಶಿಸಿದೆ.
ಇದನ್ನೂ ಓದಿ : ಇಂದು ಹೈದರಾಬಾದ್ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ: ಸಿಎಂ, ಡಿಸಿಎಂ, ಬಿ.ಕೆ. ಹರಿಪ್ರಸಾದ್ ಭಾಗಿ