ETV Bharat / state

ಆ್ಯಸಿಡ್ ಸಂತ್ರಸ್ತೆಗೆ ಸಿಎಂ ಸಚಿವಾಲಯದಲ್ಲಿ ಉದ್ಯೋಗ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

2022ರ ಏಪ್ರಿಲ್ 28ರಂದು ಆ್ಯಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ತೆಗೆ ಸಿಎಂ ಸಚಿವಾಲಯದಲ್ಲಿ ಉದ್ಯೋಗ ನೀಡಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಆಸಿಡ್ ಸಂತ್ರಸ್ತೆಗೆ ಉದ್ಯೋಗ
ಆಸಿಡ್ ಸಂತ್ರಸ್ತೆಗೆ ಉದ್ಯೋಗ
author img

By

Published : Jun 30, 2023, 1:22 PM IST

Updated : Jun 30, 2023, 3:01 PM IST

ಬೆಂಗಳೂರು: ಆ್ಯಸಿಡ್​ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸ್ನಾತಕೋತ್ತರ ಪದವೀಧರೆಯಾಗಿರುವ ಸಂತ್ರಸ್ತೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಮುಖ್ಯಮಂತ್ರಿಗಳು ಸಂತ್ರಸ್ತೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದರು.

2022 ರ ಎಪ್ರಿಲ್ 28 ರಂದು ಆ್ಯಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ತೆ ಎಂಕಾಂ ಪದವೀಧರೆ ಆಗಿದ್ದಾರೆ. ತಂದೆ ಮತ್ತು ತಾಯಿಯ ಜೊತೆ ಜನತಾ ದರ್ಶನಕ್ಕೆ ಬಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು. ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಲ್ಲೂ ಉದ್ಯೋಗದ ಮನವಿ ಮಾಡಿದ್ದೆವು. ಅವರು ಭರವಸೆ ನೀಡಿದ್ದರು. ಆದರೆ ಉದ್ಯೋಗ ಮಾತ್ರ ಕೊಡಲಿಲ್ಲ ಎಂದು ಅಳಲು ತೋಡಿಕೊಂಡರು.

ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿಗಳು ತಮ್ಮ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. 2022ರ ಏಪ್ರಿಲ್ 28 ರಂದು ಆ್ಯಸಿಡ್ ದಾಳಿ ಘಟನೆ ನಡೆದಿತ್ತು. ಆ್ಯಸಿಡ್ ದಾಳಿ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

  • ಕಳೆದ ವರ್ಷ ವಿಕೃತನೊಬ್ಬನಿಂದ ಆಸಿಡ್ ದಾಳಿಗೆ ತುತ್ತಾಗಿ ಬದುಕು ಸಾಗಿಸಲು ಪರಿತಪಿಸುತ್ತಿದ್ದ ಯುವತಿ ಇಂದು ನನ್ನನ್ನು ಭೇಟಿಯಾಗಿ, ತನ್ನ ನೋವು ತೋಡಿಕೊಂಡಳು.

    ಸಂಕಷ್ಟದ ನಡುವೆಯೂ ಆಕೆಯ ಬತ್ತದ ಜೀವನೋತ್ಸಾಹ ಕಂಡು ಚಕಿತನಾದೆ.

    ಆಕೆಗೆ ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ನೌಕರಿ ನೀಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ…

    — Siddaramaiah (@siddaramaiah) June 30, 2023 " class="align-text-top noRightClick twitterSection" data=" ">

ಸಿದ್ದರಾಮಯ್ಯ ಟ್ವೀಟ್​: ಈ ಬಗ್ಗೆ ಟ್ವೀಟ್​ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ''ಕಳೆದ ವರ್ಷ ವಿಕೃತನೊಬ್ಬನಿಂದ ಆ್ಯಸಿಡ್ ದಾಳಿಗೆ ತುತ್ತಾಗಿ ಬದುಕು ಸಾಗಿಸಲು ಪರಿತಪಿಸುತ್ತಿದ್ದ ಯುವತಿ ಇಂದು ನನ್ನನ್ನು ಭೇಟಿಯಾಗಿ, ತನ್ನ ನೋವು ತೋಡಿಕೊಂಡಳು. ಸಂಕಷ್ಟದ ನಡುವೆಯೂ ಆಕೆಯ ಬತ್ತದ ಜೀವನೋತ್ಸಾಹ ಕಂಡು ಚಕಿತನಾದೆ. ಆಕೆಗೆ ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ನೌಕರಿ ನೀಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಧಿಕಾರ ಎನ್ನುವುದು ಜನರ ಕಷ್ಟಗಳಿಗೆ ಹೆಗಲಾಗಲು ಸಿಗುವ ಅವಕಾಶ ಎಂದು ನಾನು ನಂಬಿದ್ದೇನೆ'' ಎಂದು ಬರೆದುಕೊಂಡಿದ್ದಾರೆ.

ಸ್ವಾಮಿ ವೇಷದಲ್ಲಿ ತಿರುಗುತ್ತಿದ್ದ ಆರೋಪಿ: ಪ್ರಕರಣದ ಆರೋಪಿಯ ಪತ್ತೆಗೆ ಇಳಿದ ಪೊಲೀಸರು, ಆರೋಪಿಯು ಸ್ವಾಮಿ ವೇಷದಲ್ಲಿ ತಮಿಳುನಾಡಿನ ತಿರುವಣ್ಣಾಮಲೈ ಆಶ್ರಮದಲ್ಲಿ ತಲೆ ಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿದ್ದರು. ಬಳಿಕ ಭಕ್ತರ ವೇಷದಲ್ಲಿ ಹೋಗಿ ಆರೋಪಿಯನ್ನು ಬಂಧಿಸಿದ್ದರು. ಸದ್ಯ ಆರೋಪಿ ಬೆಂಗಳೂರು ಜೈಲಿನಲ್ಲಿದ್ದಾನೆ. ಸಂತ್ರಸ್ತೆ ಚಿಕಿತ್ಸೆ ಪಡೆಯುತ್ತಾ ಚೇತರಿಸಿಕೊಳ್ಳುತ್ತಿದ್ದಾರೆ. ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು ಕೂಡ ನೀಡಲಾಗಿದೆ.

ಗ್ಯಾಂಗ್ರಿನ್​ನಿಂದ ಬಳಲುತ್ತಿರುವ ಆರೋಪಿ: 2022ರ ಏಪ್ರಿಲ್ 28 ರಂದು ಬೆಂಗಳೂರಿನ ಸುಂಕದಕಟ್ಟೆಯ ಮುತ್ತೂಟ್ ಮಿನಿ ಫೈನಾನ್ಸ್ ಕಚೇರಿ ಎದುರು ಈ ಯುವತಿ ಮೇಲೆ ಆ್ಯಸಿಡ್ ಎರಚಿದ್ದ ಆರೋಪಿ ನಾಗೇಶ ಗ್ಯಾಂಗ್ರಿನ್​ನಿಂದ ಕಳೆದ ವರ್ಷದಿಂದ ನರಳುತ್ತಿದ್ದ. ಕೃತ್ಯವೆಸಗಿ ಪರಾರಿಯಾಗಿದ್ದ ಈತ ಸ್ವಾಮೀಜಿ ವೇಷದಲ್ಲಿದ್ದ. ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದ ಈತನನ್ನು ಬಂಧಿಸಲು ಕಾಮಾಕ್ಷಿಪಾಳ್ಯ ಪೊಲೀಸರು ಕಾಲಿಗೆ ಗುಂಡೇಟು ನೀಡಿದ್ದರು. ಇದರಿಂದ ಕಾಲಿಗೆ ಶೂಟ್​ ಮಾಡಿದ್ದ ಜಾಗದಲ್ಲಿ ಗ್ಯಾಂಗ್ರಿನ್ ಲಕ್ಷಣಗಳು ಕಾಣಿಸಿಕೊಂಡಿತ್ತು. ಅಂದಿನ ಪರಿಸ್ಥಿತಿಯಲ್ಲಿ ಆರೋಪಿ ಕೋರ್ಟ್​ಗೆ ಹಾಜರಾಗಲು ಕುಂಟುತ್ತಾ ಬಂದಿದ್ದ. ಇದರಿಂದ ಆತನಿಗೆ ವಿಕ್ಟೋರಿಯ ಆಸ್ಪತ್ರೆ ಹಾಗೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೂ ಗಾಯದ ತೀವ್ರತೆ ಅತಿಯಾದ್ದರಿಂದ ಕೋರ್ಟ್​ ಸೂಕ್ತ ಚಿಕಿತ್ಸೆ ನೀಡುವಂತೆ ಜೈಲಾಧಿಕಾರಿಗೆ ನಿರ್ದೇಶನ ನೀಡಿತ್ತು.

ಇದನ್ನೂ ಓದಿ: Job Alert: ಚಿತ್ರದುರ್ಗ- ಕೋಲಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ನೇಮಕಾತಿ

Last Updated : Jun 30, 2023, 3:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.