ETV Bharat / state

ರಾಜಧಾನಿಯಲ್ಲಿ ಮಳೆಯ ಅವಾಂತರ.. ಹಿರಿಯ ಅಧಿಕಾರಿಗಳ ತುರ್ತು ಸಭೆ ನಡೆಸಿದ ಸಿಎಂ

author img

By

Published : May 21, 2023, 8:21 PM IST

ಇಂದು ಮಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಯುವತಿ ಕುಟುಂಬ ವರ್ಗದವರಿಗೆ ಸಿದ್ದರಾಮಯ್ಯ ಸಾಂತ್ವನ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
ನಗರದೆಲ್ಲಡೆ ಆಲಿಕಲ್ಲು ಸಹಿತ ಭಾರಿ ಮಳೆಗೆ ಅವಾಂತರ.

ಬೆಂಗಳೂರು : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ‌ಹಿನ್ನೆಲೆಯಲ್ಲಿ ಭಾನುವಾರ ನಗರದಲ್ಲಿ ಆಲಿಕಲ್ಲು ಮಳೆ ಸುರಿದಿದ್ದು ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಕೆಲ ಜನರು ಸಂತಸಪಟ್ಟರೆ ವಾಹನ ಸವಾರರು ಟ್ರಾಫಿಕ್ ನಲ್ಲಿ ಸಿಲುಕಿ ಆತಂಕಕ್ಕೊಳಗಾಗಿದ್ದಾರೆ. ನಗರದ ಪ್ರಮುಖ ರಸ್ತೆಗಳು, ಅಂಡರ್ ಪಾಸ್​ಗಳು ಸಂಪೂರ್ಣ ಜಲಾವೃತಗೊಂಡು, ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಅಧಿಕಾರಿಗಳ ತುರ್ತು ಸಭೆ ನಡೆಸಿದರು.

ಕೆ.ಆರ್.ವೃತ್ತದ ಅಂಡರ್ ಪಾಸ್ ಬಳಿ ಮಳೆ ನೀರಿನಲ್ಲಿ ಮುಗಿದ್ದ ಕಾರು.

ಇಂದು ಭಾರಿ ಮಳೆ ಸುರಿದ ಪರಿಣಾಮ ಕೆ.ಆರ್. ಸರ್ಕಲ್ ಅಂಡರ್ ಪಾಸ್ ನಲ್ಲಿ ಕಾರೊಂದು ತೆರುಳುವಾಗ ನೀರಿನಲ್ಲಿ ಮುಳುಗಿತ್ತು. ಈ ಘಟನೆಯಲ್ಲಿ ವಿಜಯವಾಡ ಮೂಲದ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಸಾವನ್ನಪ್ಪಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ತುರ್ತು ಸಭೆಗೂ ಮುನ್ನ ಘಟನಾ ಸ್ಥಳಕ್ಕೆ ಮತ್ತು ಯುವತಿ ಹಾಗು ಅವಳ ಕುಟುಂಬಸ್ಥರು ಚಿಕಿತ್ಸೆ ಪಡೆಯುತ್ತಿದ್ದ ಸಂತ ಮಾರ್ಥಸ್ ಆಸ್ಪತ್ರೆಗೆ ಭೇಟಿ ನೀಡಿದ್ದರು. ಆದ್ರೆ ಚಿಕಿತ್ಸೆ ಫಲಿಸದೆ ಯುವತಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ಸಿಎಂ ಘೋಷಿಸಿದರು.

ಭಾರಿ ಮಳೆಗೆ ನಗರದೆಲ್ಲೆಡೆ ಅವಾಂತರ : ನಗರದ ಹಲವೆಡೆ 30ಕ್ಕೂ ಅಧಿಕ ಮರಗಳು ನೆಲಕ್ಕುರುಳಿವೆ. 400 ಕ್ಕೂ ಹೆಚ್ಚು ದೂರುಗಳು ಬಿಬಿಎಂಪಿ ಕಂಟ್ರೋಲ್ ರೂಮ್​ಗೆ ಬಂದಿವೆ. ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಗಳನ್ನು ತೆರವುಗೊಳಿಸಲು ಬಿಬಿಎಂಪಿ ಸಿಬ್ಬಂದಿ ಹಾಗೂ ಸಂಚಾರ ಪೊಲೀಸರು ಹರಸಾಹಸಪಡುತ್ತಿದ್ದಾರೆ. ರೇಸ್ ಕೋರ್ಸ್ ರಸ್ತೆಯಲ್ಲಿ ಐಷಾರಾಮಿ ಕಾರು ನಜ್ಜುಗುಜ್ಜಾಗಿದೆ. ಕುಮಾರ್ ಕೃಪಾ ರಸ್ತೆಯಲ್ಲಿನ ಚಿತ್ರಕಲಾ ಪರಿಷತ್ ಮುಂದೆ ಕಾರು ಮತ್ತು ಬೈಕ್ ಮೇಲೆ ಭಾರೀ ಗಾತ್ರದ ಮರ ಬಿದ್ದು ವಾಹನಗಳು ಸಂಪೂರ್ಣ ಜಖಂ ಆಗಿದೆ. ಈ ವೇಳೆ ಕಾರಿನಲ್ಲಿ ಇದ್ದವರಿಗೂ ಗಂಭೀರ ಗಾಯವಾಗಿದೆ. ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರದ ಕೊಂಬೆ ಮುರಿದು ಬಿದ್ದಿದ್ದು, ಅದೃಷ್ಟವಶಾತ್‌ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಲ್ಲಿ ರಣಭೀಕರ ಮಳೆ.
ಬೆಂಗಳೂರಿನಲ್ಲಿ ರಣಭೀಕರ ಮಳೆ.

ವಾಹನ ಸಂಚಾರಕ್ಕೆ ಸಮಸ್ಯೆ : ಹಲವು ರಸ್ತೆಗಳಲ್ಲಿ ಮಳೆಯಿಂದಾಗಿ ಮರಗಳು ಮುರಿದು ಬಿದ್ದಿವೆ. ಇದರಿಂದ ವಾಹನ ಸಂಚಾರಕ್ಕೆ ಸಮಸ್ಯೆ ಎದುರಾಗಿ, ಸಂಚಾರಿ ಪೊಲೀಸರು ಮಾರ್ಗ ಬದಲಾವಣೆ ಮಾಡಿದ್ದಾರೆ. ಪ್ರಮುಖವಾಗಿ, ಬಸವನಗುಡಿ, ವಿ.ವಿ ಪುರ, ಇಂದಿರಾನಗರ, ಮತ್ತಿಕೆರೆ, ಮಲ್ಲೇಶ್ವರ, ಹೊಸಕೆರೆಹಳ್ಳಿ, ರಾಜಾಜಿನಗರ, ಹನುಮಂತ ನಗರ, ಜೆ.ಪಿ. ನಗರ, ಕೆ.ಜಿ. ರಸ್ತೆ, ಶೇಷಾದ್ರಿಪುರಂ, ಗಾಂಧಿನಗರ, ಕುಮಾರಸ್ವಾಮಿ ಲೇಔಟ್‌, ರಾಜರಾಜೇಶ್ವರಿನಗರ, ವಿಠಲ್‌ಮಲ್ಯ ರಸ್ತೆ, ಸಂಪಂಗಿರಾಮನಗರ, ಆರ್‌ಟಿ ನಗರದತ್ತ ಸಾಗುವ ಜಯಮಹಲ್‌ ಪ್ಯಾಲೇಸ್‌ ರಸ್ತೆಯಲ್ಲೂ ಮರ ಬಿದ್ದು ಸಮಸ್ಯೆಯಾಗಿದೆ.

ನಿರ್ಲಕ್ಷ್ಯ ತೋರಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ : ಮಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಯುವತಿ ಕುಟುಂಬ ವರ್ಗದವರನ್ನು ಸಿದ್ದರಾಮಯ್ಯ ಇಂದು ಸಂಜೆ ಮಾರ್ಥಾಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ತಕ್ಷಣ ದಾಖಲಿಸಿಕೊಳ್ಳದೆ ವಿಳಂಬ ಮಾಡಿದ್ದರ ಕುರಿತು ತನಿಖೆ ನಡೆಸುವಂತೆ ಸಿಎಂ ಆದೇಶಿಸಿದ್ದಾರೆ. ಮಳೆ ಅನಾಹುತದ ಮಾಹಿತಿ ದೊರೆಯುತ್ತಿದ್ದಂತೆ ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರು ಮತ್ತು ಬಿಬಿಎಂಪಿ ಆಯುಕ್ತರ ಜತೆ ತುರ್ತು ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಮಳೆಯಿಂದ ಉರುಳಿ ಬಿದ್ದಿರುವ ಮರಗಳನ್ನು ತಕ್ಷಣ ತೆರವುಗೊಳಿಸಬೇಕು. ಮಳೆ ಅನಾಹುತದಿಂದ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ಕೂಡಲೇ ಪರಿಹಾರ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ತೋರಿ ಸಾರ್ವಜನಿಕರಿಗೆ ತೊಂದರೆ ಆದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತಿರುವುದೇಕೆ? ಮಳೆ ಬಂದರೆ ಜನರು ಸಾಯಲೇಬೇಕೆ? : ಹೆಚ್​ಡಿಕೆ ಕಿಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.