ETV Bharat / state

ನಾವು ವೆಸ್ಟ್​ಎಂಡ್ ಹೋಟೆಲ್​ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ: ಹೆಚ್​ಡಿಕೆಗೆ ಸಿಎಂ ಗುದ್ದು

ರಾಜ್ಯದಲ್ಲಿ ವಿದ್ಯುತ್ ಕೊರತೆ ಕುರಿತಂತೆ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

CM Siddaramaiah hit back at former CM Kumaraswamy allegations
ನಾವು ವೆಸ್ಟ್​ಎಂಡ್ ಹೋಟೆಲ್​ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ: ಹೆಚ್​ಡಿಕೆಗೆ ಸಿಎಂ ಗುದ್ದು
author img

By ETV Bharat Karnataka Team

Published : Oct 21, 2023, 10:45 PM IST

ಬೆಂಗಳೂರು: ನಾವು ವೆಸ್ಟ್​ಎಂಡ್​ ಹೋಟೆಲ್‌ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ. ಜನರ ನಡುವೆ ಇದ್ದು, ಅವರ ಕಷ್ಟಕ್ಕೆ ಹೆಗಲಾಗಿ ನಿಂತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.

  • ಮಳೆ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕನಿಷ್ಠ ಮಟ್ಟಕ್ಕೆ ಕುಸಿದಿದೆ, ಇದರಿಂದಾಗಿ ಜಲವಿದ್ಯುತ್ ಉತ್ಪಾದಕ ಘಟಕಗಳು ತಮ್ಮ ಸಾಮರ್ಥ್ಯಕ್ಕೆ ಸಮನಾಗಿ ವಿದ್ಯುತ್ ಉತ್ಪಾದಿಸಲು ಸಾಧ್ಯವಿಲ್ಲದಂತಾಗಿದೆ. ಉತ್ಪಾದನೆ ಕಡಿಮೆಯಿದ್ದು, ಬೇಡಿಕೆ ಹೆಚ್ಚಿರುವುದರಿಂದ ಅನಿವಾರ್ಯವಾಗಿ ತಾತ್ಕಾಲಿಕ ಒಡಂಬಡಿಕೆಯ ಮೇರೆಗೆ ಹೊರ ರಾಜ್ಯಗಳಿಂದ… pic.twitter.com/jTBEYFYook

    — Siddaramaiah (@siddaramaiah) October 21, 2023 " class="align-text-top noRightClick twitterSection" data=" ">

ಕಮಿಷನ್​ಗಾಗಿ ಕೃತಕ ವಿದ್ಯುತ್ ಕೊರತೆ ಸೃಷ್ಟಿಸಲಾಗುತ್ತಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಆರೋಪ ಸಂಬಂಧ ಎಕ್ಸ್​ನಲ್ಲಿ ಸ್ಪಷ್ಟೀಕರಣ ನೀಡಿರುವ ಸಿಎಂ ಸಿದ್ದರಾಮಯ್ಯ, ಮಳೆ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇದರಿಂದಾಗಿ ಜಲವಿದ್ಯುತ್ ಉತ್ಪಾದಕ ಘಟಕಗಳು ತಮ್ಮ ಸಾಮರ್ಥ್ಯಕ್ಕೆ ಸಮನಾಗಿ ವಿದ್ಯುತ್ ಉತ್ಪಾದಿಸಲು ಸಾಧ್ಯವಿಲ್ಲದಂತಾಗಿದೆ. ಉತ್ಪಾದನೆ ಕಡಿಮೆಯಿದ್ದು, ಬೇಡಿಕೆ ಹೆಚ್ಚಿರುವುದರಿಂದ ಅನಿವಾರ್ಯವಾಗಿ ತಾತ್ಕಾಲಿಕ ಒಡಂಬಡಿಕೆಯ ಮೇರೆಗೆ ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಗೆ ನಾವು ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ.

ವಿದ್ಯುತ್ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ನವೀಕರಿಸಬಹುದಾದ ಇಂಧನ ಮೂಲಗಳ ಪರಿಣಾಮಕಾರಿ ಬಳಕೆಯ ಮೂಲಕ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವ ಕಡೆಗೂ ಗಮನ ಹರಿಸಿದ್ದೇವೆ. ನಾವು ವೆಸ್ಟ್​ಎಂಡ್ ಹೋಟೆಲ್‌ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ, ಜನರ ನಡುವೆ ಇದ್ದು ಅವರ ಕಷ್ಟಕ್ಕೆ ಹೆಗಲಾಗಿ ನಿಂತಿದ್ದೇವೆ ಎಂದು ಸಿಎಂ ತಿರುಗೇಟು ನೀಡಿದರು.

ವಿದ್ಯುತ್ ಕೊರತೆ ನೀಗಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಎಕ್ಸ್ ಮೂಲಕ ಪೋಸ್ಟ್ ಮಾಡಿದ್ದಾರೆ. ರೈತರಿಗೆ ಮೂರು ಪಾಳಿಯಲ್ಲಿ ನಿರಂತರ 5 ಗಂಟೆಗಳ ವಿದ್ಯುತ್‌ ಪೂರೈಕೆಗೆ ಸೂಚನೆ ನೀಡಲಾಗಿದೆ. ಉತ್ತರ ಪ್ರದೇಶದಿಂದ 300 ಮೆ.ವ್ಯಾ. ಮತ್ತು ಪಂಜಾಬ್‌ನಿಂದ 600 ಮೆ.ವ್ಯಾ. ವಿದ್ಯುತ್ ಖರೀದಿಗೆ ಸೂಚನೆ ನೀಡಲಾಗಿದೆ. ವಿದ್ಯುತ್ ಕಾಯ್ದೆಯ ಸೆಕ್ಷನ್ 11 ಜಾರಿ, ರಾಜ್ಯದ ಎಲ್ಲಾ ವಿದ್ಯುತ್‌ ಉತ್ಪಾದನಾ ಘಟಕಗಳು ಗರಿಷ್ಠ ವಿದ್ಯುತ್‌ ಉತ್ಪಾದಿಸಿ ರಾಜ್ಯದ ಗ್ರಿಡ್​​ಗೆ ಪೂರೈಸುವಂತೆ ಆದೇಶಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ರಾಜ್ಯದ ಶಾಖೋತ್ಪನ್ನ ವಿದ್ಯುತ್ ಘಟಕಗಳಿಗೆ ಮರುಚಾಲನೆ ನೀಡಲಾಗಿದೆ. ಈ ಎಲ್ಲ ಕಲ್ಲಿದ್ದಲು ಸಂಸ್ಥೆಗಳಿಂದ 15 ಲಕ್ಷ ಮೆಟ್ರಿಕ್ ಟನ್ ಪಡೆಯಲು ಕ್ರಮ ಕೈಗೊಳ್ಳಲಾಗುವುದು. ಅಲ್ಪಾವಧಿ ಆಧಾರದಲ್ಲಿ 1300 ಮೆ.ವ್ಯಾ. ವಿದ್ಯುತ್ ಖರೀದಿಗೆ ಕ್ರಮ ವಹಿಸಲಾಗುತ್ತಿದೆ. ಕೆಪಿಸಿಎಲ್​ನ ಅನಿಲ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಕಾರ್ಯಾಚರಣೆ ಆರಂಭಕ್ಕೆ ಕ್ರಮ ವಹಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಪಾವಗಡದಲ್ಲಿ ಹೆಚ್ಚುವರಿಯಾಗಿ 300 ಮೆ.ವ್ಯಾ. ಮತ್ತು ಕಲಬುರಗಿಯಲ್ಲಿ 500 ಮೆ.ವ್ಯಾ. ಸೋಲಾರ್ ಪಾರ್ಕ್ ಸ್ಥಾಪಿಸಲಾಗುತ್ತಿದೆ. ಛತ್ತೀಸ್​​ಗಡದಲ್ಲಿ ಖಾಸಗಿ / ಜಂಟಿ ಹೂಡಿಕೆಯಡಿ ಕ್ಯಾಪ್ಟಿವ್ ಕಲ್ಲಿದ್ದಲು ಗಣಿ ಆರಂಭಕ್ಕೆ ಕ್ರಮ ವಹಿಸಲಾಗಿದೆ. ಇತರ ರಾಜ್ಯಗಳಲ್ಲಿನ stressed out ವಿದ್ಯುತ್ ಸ್ಥಾವರಗಳಿಂದ ವಿದ್ಯುತ್‌ ಖರೀದಿಸಲು ಪ್ರಸ್ತಾಪಿಸಲಾಗಿದೆ ಎಂದು ಸಿಎಂ ವಿವರಿಸಿದ್ದಾರೆ.

ಇದನ್ನೂ ಓದಿ: ಕಮಿಷನ್​ಗಾಗಿ ರಾಜ್ಯ ಸರ್ಕಾರದಿಂದ ವಿದ್ಯುತ್​ ಕೃತಕ ಅಭಾವ: ಹೆಚ್​​ಡಿಕೆ ಆರೋಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.