ETV Bharat / state

ಪ್ರವಾಸೋದ್ಯಮ ಬೆಳೆದರೆ ಸಾಂಸ್ಕೃತಿಕ‌ ಹಿರಿಮೆ ಹೆಚ್ಚಿ ಆರ್ಥಿಕತೆಗೆ ಚೈತನ್ಯ ಬರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

author img

By ETV Bharat Karnataka Team

Published : Sep 25, 2023, 7:18 PM IST

ಶಕ್ತಿ ಯೋಜನೆ ಹಿಂದೆ ಹಲವು ಕಾಳಜಿಗಳು ಕೆಲಸ ಮಾಡಿವೆ. ಕೇವಲ ಚುನಾವಣೆ ಕಾರಣಕ್ಕೆ ಮಾಡಿದ್ದಲ್ಲ ಎಂದು ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮ ಬೆಳೆದರೆ ನಾಡಿನ ಸಾಂಸ್ಕೃತಿಕ‌ ಹಿರಿಮೆ ಹೆಚ್ಚಿ ಆರ್ಥಿಕತೆಗೆ ಚೈತನ್ಯ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪ್ರವಾಸೋದ್ಯಮ ಮತ್ತು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ "ನಮ್ಮ ಸ್ಮಾರಕ: ನಮ್ಮ ಪರಂಪರೆ, ನಮ್ಮ ಗುರುತು, ನಮ್ಮ ಹೆಮ್ಮೆ" ಅಭಿಯಾನದ ಸಂವಾದ ಮತ್ತು ಡಿಜಿಟಲ್ ವೇದಿಕೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಇತಿಹಾಸ ತಿಳಿಯದವರು ಭವಿಷ್ಯ ರೂಪಿಸಲಾರರು ಎನ್ನುವ ಡಾ. ಬಿ. ಆರ್. ಅಂಬೇಡ್ಕರ್ ಅವರ ಮಾತನ್ನು ಯಾರೂ ಮರೆಯಬಾರದು. ನಮ್ಮ ಇತಿಹಾಸ, ಪರಂಪರೆಯನ್ನು ಈಗಿನ ಪೀಳಿಗೆಗೆ ಅರ್ಥ ಮಾಡಿಸಲು, ಮುಂದಿನ ತಲೆಮಾರುಗಳಿಗೆ ನಮ್ಮತನದ ಮಹತ್ವವನ್ನು ಸಾರಲು ಸ್ಮಾರಕಗಳ ರಕ್ಷಣೆ ಅತ್ಯಗತ್ಯ ಎಂದರು.

ಸ್ಮಾರಕಗಳ ರಕ್ಷಣೆಗೆ ಸರ್ಕಾರದ ಜತೆಗೆ ಸಾರ್ವಜನಿಕರು ಕೈ ಜೋಡಿಸಿದರೆ, ನಮ್ಮ ಇತಿಹಾಸ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ದಾಟಿಸಬಹುದು. ರಾಜ್ಯದಲ್ಲಿ ಪ್ರವಾಸೋದ್ಯಮ ಬೆಳೆಸಲು ಸಾಕಷ್ಟು ಅವಕಾಶಗಳಿವೆ. ಅಧ್ಯಾತ್ಮಿಕ ಮತ್ತು ಪರಿಸರ ಪ್ರವಾಸಿ ಕೇಂದ್ರಗಳಿಗೆ, ದೇವಾಲಯಗಳಿಗೆ ಬಡವರೂ ಹೋಗಲು ಅವಕಾಶ ಕಲ್ಪಿಸಬೇಕು ಎನ್ನುವ ಕಾಳಜಿ "ಶಕ್ತಿ" ಯೋಜನೆಯ ಹಿಂದಿದೆ. ಈವರೆಗೆ 60 ಲಕ್ಷ ಮಹಿಳೆಯರು ಇದರ ಪ್ರಯೋಜನ ಪಡೆದಿದ್ದಾರೆ. ದೇವಸ್ಥಾನಗಳ ಆದಾಯ ಕೂಡ ಹೆಚ್ಚಾಗಿದೆ. ಆರ್ಥಿಕತೆಗೆ ಚೈತನ್ಯ ಬಂದು ವ್ಯಾಪಾರ, ವಹಿವಾಟು ಹೆಚ್ಚಾಗಿ ಉದ್ಯೋಗ ಸೃಷ್ಟಿಯಾಗುತ್ತಿದೆ. ಶಕ್ತಿ ಯೋಜನೆ ಹಿಂದೆ ಇಷ್ಟೆಲ್ಲಾ ಕಾಳಜಿಗಳು ಕೆಲಸ ಮಾಡಿವೆ. ಕೇವಲ ಚುನಾವಣೆ ಕಾರಣಕ್ಕೆ ಮಾಡಿದ್ದಲ್ಲ ಎಂದು ವಿವರಿಸಿದರು.

ಸ್ಮಾರಕಗಳನ್ನು ದತ್ತು ಪಡೆಯಲು ಮತ್ತು ಸಂರಕ್ಷಿಸಲು ಸ್ವಯಂ ಸ್ಫೂರ್ತಿಯಿಂದ ಮುಂದೆ ಬಂದಿರುವ ಕೈಗಾರಿಕೋದ್ಯಮಿಗಳು ಮತ್ತು ಸಂಘ-ಸಂಸ್ಥೆಗಳಿಗೆ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದರು.

ವಿಶ್ವ ಪರಂಪರೆ ತಾಣವೆಂದು ಘೋಷಿಸಲಾದ ಹೊಯ್ಸಳರ ವಾಸ್ತುಶಿಲ್ಪಿಯ ಸಮಗ್ರ ಭಾಗಗಳನ್ನು ಇನ್ ಟ್ಯಾಕ್ ಸಂಸ್ಥೆ ವತಿಯಿಂದ ಪ್ರಸ್ತುತ ಪಡಿಸಲಾಯಿತು. ಬ್ರಿಗೇಡ್ ಸಂಸ್ಥೆಯೊಂದಿಗೆ ವೆಂಕಟಪ್ಪ ಚಿತ್ರಶಾಲೆಯ ನವೀಕರಣ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಯಿತು. ಕಲ್ಕಿ ಸಂಸ್ಥೆಗೆ ಯೋಜನಾ ನಿರ್ವಹಣೆ ಘಟಕದ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಯಿತು.‌ ಸಂರಕ್ಷಣಾ ಸ್ಮಾರಕಗಳ ಯೋಜನೆಗೆ ಒಳಪಡಲು ಆಸಕ್ತಿ ವ್ಯಕ್ತಪಡಿಸಿದ ಸಂಸ್ಥೆಗಳಿಗೆ ಆಶಯಪತ್ರ ವಿತರಿಸಲಾಯಿತು. ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯಿಂದ ಸ್ಮಾರಕಗಳ 3ಡಿ ಲೇಸರ್ ಸ್ಕ್ಯಾನಿಂಗ್ ಪ್ರಾತ್ಯಕ್ಷಿಕೆ ನೀಡಲಾಗಿದೆ.

ಇದನ್ನೂ ಓದಿ: ರಾಜ್ಯಕ್ಕೆ ಮತ್ತೊಂದು ಹೆಮ್ಮೆಯ ಗರಿ.. ಯುನೆಸ್ಕೋ ವಿಶ್ವ ಪಾರಂಪರಿಕ ಪಟ್ಟಿಗೆ ಹೊಯ್ಸಳರ ಕಾಲದ ದೇವಾಲಯಗಳು ಸೇರ್ಪಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.