ETV Bharat / state

ಗ್ಯಾರಂಟಿ ಜಾರಿಯಾದ್ರೆ ಆರ್ಥಿಕ ದಿವಾಳಿ ಅಂದಿದ್ದರು ಮೋದಿ.. ಈಗ ಶಕ್ತಿ ಯೋಜನೆ ಶತಕೋಟಿ ಸಂಭ್ರಮದಲ್ಲಿದೆ: ಸಿದ್ದರಾಮಯ್ಯ - ಜಿಡಿಪಿ

ಬೆಂಗಳೂರಿನ ಸಾರಿಗೆ ಇಲಾಖೆ ಬ್ಯಾಂಕ್ವೆಟ್ ಹಾಲ್​ನಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ವೇಳೆ, ಅಪಘಾತ ರಹಿತ ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಿದರು.

CM Siddaramaiah presented the gold medal.
ಅಪಘಾತ ರಹಿತ ಚಾಲಕರಿಗೆ ಸಿಎಂ ಸಿದ್ದರಾಮಯ್ಯ ಚಿನ್ನದ ಪದಕ ಪ್ರದಾನ ಮಾಡಿದರು.
author img

By ETV Bharat Karnataka Team

Published : Nov 24, 2023, 4:43 PM IST

ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯದ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ಶಕ್ತಿ ಯೋಜನೆ ರಾಜ್ಯದಲ್ಲಿ ಶತಕೋಟಿ ಸಂಭ್ರಮ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಾರಿಗೆ ಇಲಾಖೆ ಬ್ಯಾಂಕ್ವೆಟ್ ಹಾಲ್​ನಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಕಾರ್ಯಕಮ ಉದ್ಘಾಟಿಸಿ ಅಪಘಾತ ರಹಿತ ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಿದರು. ಈ ವೇಳೆ ಮಾತನಾಡಿದ ಅವರು, ದೇಶದ ಯಾವ ಸರ್ಕಾರಗಳೂ ಹಿಂದೆಂದೂ ಮಾಡದ ಸಾಧನೆಯನ್ನು ನಮ್ಮ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಆರೇ ತಿಂಗಳಲ್ಲಿ ಸಾಧಿಸಿ ತೋರಿಸಿದೆ. ಆದರೆ ದಾಖಲೆ ಕಣ್ಣು ಮುಂದಿದೆ. ಬಿಜೆಪಿಯವರು ನಿರ್ಲಜ್ಜವಾಗಿ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು ಎಂದು ತಿರುಗೇಟು ನೀಡಿದರು.

100 ಕೋಟಿ 47 ಲಕ್ಷ ಉಚಿತ ಪ್ರಯಾಣ: ಜೂನ್ 11 ಕ್ಕೆ ಶಕ್ತಿ ಯೋಜನೆ ಜಾರಿ ಆಯಿತು. ನವೆಂಬರ್ 23 ಕ್ಕೆ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ದಾಖಲೆಗಳು ಕಣ್ಣು ಮುಂದಿವೆ. ಆದರೂ ಈ ಬಿಜೆಪಿ ನಾಯಕರು ಯಾಕಿಷ್ಟು ಸುಳ್ಳು ಹೇಳುತ್ತಾರೆ. ಬಸ್ ಪ್ರಯಾಣಿಕರಲ್ಲಿ ಶೇ 55 ರಷ್ಟು ಉಚಿತ ಬಸ್ ಪ್ರಯಾಣ ಮಾಡಿದ ಮಹಿಳೆಯರೇ ಸೇರಿದ್ದಾರೆ. ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವುದು ನಮ್ಮ ಗುರಿ. ವಿರೋಧ ಪಕ್ಷದವರ ಹೊಟ್ಟೆಕಿಚ್ಚಿನ ಟೀಕೆಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.

ಗೃಹಲಕ್ಷ್ಮಿ ಯೋಜನೆ: 1 ಕೋಟಿ 17 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡಿದ್ದು, ಅವರಲ್ಲಿ 1 ಕೋಟಿ 10 ಲಕ್ಷ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ತಲುಪುತ್ತಿದೆ. ಎಲ್ಲಾ ಜಾತಿ-ಧರ್ಮದ ಬಡವರು ಮಧ್ಯಮ ವರ್ಗದವರ ಮಹಿಳೆಯರಿಗೆ ಈ ಸೌಲಭ್ಯ ತಲುಪುತ್ತಿದೆ. ಇದು ಬಿಜೆಪಿಯವರ ಹೊಟ್ಟೆಕಿಚ್ಚಿಗೆ ಕಾರಣವಾಗಿದೆ ಎಂದು ಆರೋಪಿಸಿದರು.

ಜತೆಗೆ ಕೋಟಿ ಕೋಟಿ ಮನೆಗೆ ಉಚಿತ ವಿದ್ಯುತ್ ಮತ್ತು ಅಕ್ಕಿ ಹಾಗೂ ಅಕ್ಕಿಯ ಹಣವನ್ನು ಜನರ ಮಡಿಲಿಗೆ ಹಾಕುತ್ತಿದ್ದೇವೆ. ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಹೊಟ್ಟೆಯುರಿ ಏಕೆ ಎಂದು ಮುಖ್ಯಮಂತ್ರಿಗಳು ವ್ಯಂಗ್ಯವಾಡಿದರು.

ಜಿಡಿಪಿ ವೃದ್ಧಿ: ಬಡವರ ಕೈಯಲ್ಲಿ ದುಡ್ಡು ಇರಬೇಕು ಎನ್ನುವುದು ನಮ್ಮ ಗುರಿ. ಹಣ ಇದ್ದರೆ ಆರ್ಥಿಕತೆಗೆ ಚೈತನ್ಯ ಬರುತ್ತದೆ. ಈ ಚೈತನ್ಯ ತುಂಬುವ ಕಾರ್ಯಕ್ರಮವನ್ನು ನಾವು ಘೋಷಿಸಿ, ಸಾಧಿಸಿ ತೋರಿಸಿದ್ದೇವೆ. ಜನರಿಗೆ ನಾವು ಕೊಟ್ಟ ಹಣ ವಾಪಸ್​ ಸರ್ಕಾರಕ್ಕೇ ಬರುತ್ತದೆ. ನಾವು ಪುನಃ ಜನರ ಜೇಬಿಗೆ ಅದೇ ಹಣವನ್ನು ಹಾಕುತ್ತೇವೆ. ಇದರಿಂದ ಜಿಡಿಪಿ ಆರ್ಥಿಕ ಚಟುವಟಿಕೆ ವೃದ್ಧಿಯಾಗುತ್ತದೆ. ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಜತೆಗೆ ಸಮಾಜದ ಎಲ್ಲಾ ವರ್ಗದ ಬಡವರಿಗೆ - ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ವಿಚಾರದಲ್ಲಿ ಇಟ್ಟ ಹೆಜ್ಜೆ ಹಿಂದಿಡುವುದಿಲ್ಲ ಎಂದರು.

ಇದನ್ನೂಓದಿ:ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ನಿರ್ಣಯ ಕಾನೂನು ಬಾಹಿರ: ಬಿ.ವೈ. ವಿಜಯೇಂದ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.