ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಇದೇ ಮೊದಲ ಬಾರಿಗೆ ಇ-ಎಫ್ಐಆರ್ ವ್ಯವಸ್ಥೆಯನ್ನು ಪರಿಚಯಿಸಿದೆ. ಕಾಗದರಹಿತ ಹಾಗೂ ಪರಿಸರಸ್ನೇಹಿ ನೀತಿಗೆ ಒತ್ತು ನೀಡಲು ಇದೇ ಮೊದಲ ಬಾರಿಗೆ ಇ-ಎಫ್ಐಆರ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ಕೊಟ್ಟರು.
ಇ-ಎಫ್ಐಅರ್ ದಾಖಲಿಸುವುದು ಹೇಗೆ?: ದಿನೇ ದಿನೇ ಪೊಲೀಸ್ ಇಲಾಖೆ ಸ್ಮಾರ್ಟ್ ಆಗುತ್ತಿದೆ. ಇ-ಎಫ್ಐಆರ್ ವ್ಯವಸ್ಥೆಯಿಂದ ಸಾರ್ವಜನಿಕರು ಸುಖಾಸುಮ್ಮನೆ ಪೊಲೀಸ್ ಠಾಣೆಗೆ ಅಲೆಯುವುದು ತಪ್ಪಲಿದೆ. ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಜಾಲತಾಣ ಕರ್ನಾಟಕ ಪೊಲೀಸ್ ವೆಬ್ಸೈಟ್ಗೆ ಹೋಗಿ ಅಲ್ಲಿ ಸಿಟಿಜನ್ ಡೆಸ್ಕ್ ಮೇಲೆ ಕ್ಲಿಕ್ ಮಾಡಿ ನೋಂದಾಯಿಸಬೇಕಿದೆ.
ಲಾಗಿನ್ ಆದ ಬಳಿಕ ಮೋಟಾರ್ ವಾಹನ ಕಳುವಿಗೆ ಸಂಬಂಧಪಟ್ಟಂತೆ ಇ-ಎಫ್ಐಅರ್ ದಾಖಲಿಸಬಹುದು. ವಾಹನದ ವಿವರ ಹಾಗೂ ದೂರುದಾರರ ಮಾಹಿತಿ ನಮೂದಿಸಬೇಕು. ಒಮ್ಮೆ ವಾಹನದ ನೋಂದಣಿ ಸಂಖ್ಯೆ, ಹೆಸರು ನಮೂದಿಸಿದರೆ ಸ್ವಯಂಚಾಲಿತವಾಗಿ ವಾಹನದ ಎಲ್ಲಾ ದಾಖಲಾತಿ ತಾನಾಗೇ ಭರ್ತಿಯಾಗಲಿದೆ. ನಂತರ ನಿಮ್ಮ ಮೊಬೈಲ್ ನಂಬರ್ಗೆ ಮೆಸೇಜ್ ಬರಲಿದೆ. ಈ ಮೂಲಕ ಸ್ವಯಂಚಾಲಿತವಾಗಿ ಇ-ಎಫ್ಐಅರ್ ದಾಖಲಾಗಲಿದೆ.
-
ಇಂದು ರಾಜ್ಯ ಪೊಲೀಸ್ ಕೇಂದ್ರ ಕಛೇರಿಯ ಸಭಾಂಗಣದಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ @CMofKarnataka , ರವರು ಇ-ಎಫ್.ಐ.ಆರ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾನ್ಯ ಗೃಹ ಸಚಿವರಾದ @DrParameshwara, @DgpKarnataka, @CPBlr ಸೇರಿದಂತೆ ಇತರ ಹಿರಿಯ ಅಧಿಕಾರಿಗಳು… pic.twitter.com/fA5sSWhaIL
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) September 15, 2023 " class="align-text-top noRightClick twitterSection" data="
">ಇಂದು ರಾಜ್ಯ ಪೊಲೀಸ್ ಕೇಂದ್ರ ಕಛೇರಿಯ ಸಭಾಂಗಣದಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ @CMofKarnataka , ರವರು ಇ-ಎಫ್.ಐ.ಆರ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾನ್ಯ ಗೃಹ ಸಚಿವರಾದ @DrParameshwara, @DgpKarnataka, @CPBlr ಸೇರಿದಂತೆ ಇತರ ಹಿರಿಯ ಅಧಿಕಾರಿಗಳು… pic.twitter.com/fA5sSWhaIL
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) September 15, 2023ಇಂದು ರಾಜ್ಯ ಪೊಲೀಸ್ ಕೇಂದ್ರ ಕಛೇರಿಯ ಸಭಾಂಗಣದಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ @CMofKarnataka , ರವರು ಇ-ಎಫ್.ಐ.ಆರ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾನ್ಯ ಗೃಹ ಸಚಿವರಾದ @DrParameshwara, @DgpKarnataka, @CPBlr ಸೇರಿದಂತೆ ಇತರ ಹಿರಿಯ ಅಧಿಕಾರಿಗಳು… pic.twitter.com/fA5sSWhaIL
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) September 15, 2023
ಐಪಿಎಸ್ ಅಧಿಕಾರಿಗಳೊಂದಿಗೆ ಸಿಎಂ ಸಭೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಐಪಿಎಸ್ ಅಧಿಕಾರಿಗಳ ಜತೆ ಸಭೆ ನಡೆಸುತ್ತಿದ್ದಾರೆ. ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಐಪಿಎಸ್ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ರಾಜ್ಯದ ಕಾನೂನು ಸುವ್ಯವಸ್ಥೆ, ಸಂಚಾರ ಹಾಗೂ ಸೈಬರ್ ಕ್ರೈಂ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ. ಸುಳ್ಳು ಸುದ್ದಿ ತಡೆಯಲು ರಚಿಸಲಾಗಿದ್ದ ಫ್ಯಾಕ್ಟ್ ಚೆಕ್ ಬಗ್ಗೆಯೂ ಚರ್ಚಿಸುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ನಿರ್ಮಾಣ: ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ಧ್ರುವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ. ಹೀಗಾಗಿ ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಹಸಿರು ನಿಶಾನೆ ತೋರಿದ್ದಾರೆ.
ಆ.21ರಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚಿಸಿ ಈ ನಿರ್ಧಾರ ಕೈಗೊಂಡಿದ್ದರು. ಸುಳ್ಳು ಸುದ್ದಿ ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್ಗಳ ಪತ್ತೆ, ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಅನುಮೋದನೆ ನೀಡಿದ್ದರು. ಫ್ಯಾಕ್ಟ್ ಚೆಕ್ ಘಟಕವು ಮೇಲುಸ್ತುವಾರಿ ಸಮಿತಿ, SOPC ಪರಿಶೀಲನೆ, ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಸತ್ಯ ತಪಾಸಣೆ ತಂಡ ವಿಶ್ಲೇಷಣಾ ತಂಡವನ್ನು ಒಳಗೊಳ್ಳಲಿದೆ.
ಇದನ್ನೂ ಓದಿ: ರಾಜ್ಯದಲ್ಲಿ Fact Check ಘಟಕ ರಚನೆಗೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ