ಬೆಂಗಳೂರು: ಮಹಾನಗರದ ಸಂಚಾರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ತಮಗೆ ನೀಡಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂಪಡೆಯುವಂತೆ ನಗರ ಪೊಲೀಸ್ ಆಯುಕ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲ ಆಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದಿದ್ದಾರೆ.
ಇಂದು ನಗರದಲ್ಲಿ ಭಾರಿ ಮಳೆ ಸುರಿದ ಪರಿಣಾಮ ಕೆ ಆರ್ ವೃತ್ತ ಸಮೀಪ ಸಂಭವಿಸಿದ ಅವಘಡದಲ್ಲಿ ಇನ್ಫೋಸಿಸ್ ಸಂಸ್ಥೆಯ ಉದ್ಯೋಗಿ ಯುವತಿಯೊಬ್ಬರು ಸಾವನ್ನಪ್ಪಿದ್ದರೆ. ಘಟನೆ ಸ್ಥಳ ಪರಿಶೀಲನೆ ಹಾಗೂ ಯುವತಿಯನ್ನು ದಾಖಲಿಸಿದ್ದ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಉಂಟಾದ ದಟ್ಟಣೆ ಹಾಗೂ ಆ ಸಂದರ್ಭದಲ್ಲಿ ಜನ ಅನುಭವಿಸಿದ ಸಮಸ್ಯೆಯನ್ನು ಮನಗಂಡಿರುವ ಅವರು ತಮಗೆ ಜೀರೋ ಟ್ರಾಫಿಕ್ ಸೌಲಭ್ಯ ಬೇಡ ಎಂಬ ನಿರ್ಧಾರ ಕೈಗೊಂಡಿದ್ದಾರೆ.
-
ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ.
— CM of Karnataka (@CMofKarnataka) May 21, 2023 " class="align-text-top noRightClick twitterSection" data="
ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ. @siddaramaiah pic.twitter.com/8ySLySnLzz
">ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ.
— CM of Karnataka (@CMofKarnataka) May 21, 2023
ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ. @siddaramaiah pic.twitter.com/8ySLySnLzzನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ.
— CM of Karnataka (@CMofKarnataka) May 21, 2023
ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ. @siddaramaiah pic.twitter.com/8ySLySnLzz
ನಿನ್ನೆಯಷ್ಟೇ ಸಿಎಂ ಆಗಿ ಅಧಿಕಾರ ಸ್ವೀಕರಿಸಿರುವ ಸಿದ್ದರಾಮಯ್ಯ ಈ ಹಿಂದೆ 2013 ರಿಂದ 18ರ ಅವಧಿಗೆ ಪೂರ್ಣಾವಧಿ ಐದು ವರ್ಷಗಳ ಅಧಿಕಾರ ಪೂರೈಸಿದ್ದರು. ದೇವರಾಜ್ ಅರಸು ಬಳಿಕ 5 ವರ್ಷದ ಅಧಿಕಾರವನ್ನು ಪೂರೈಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದ್ದರು. ಇದೀಗ ರಾಜ್ಯದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ 135 ಸ್ಥಾನಗಳನ್ನು ನೀಡಿ ಬಹುಮತದಿಂದ ಅಧಿಕಾರಕ್ಕೆ ತಂದಿದ್ದು, ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡಿದ್ದಾರೆ.
ಹಿಂದೆ 2018 ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭ ಉಪಮುಖ್ಯಮಂತ್ರಿಗಳಾಗಿ ಅಧಿಕಾರ ನಿರ್ವಹಿಸಿದ್ದ ಡಾ ಜಿ ಪರಮೇಶ್ವರ್ ಪದೇ ಪದೇ ತುಮಕೂರಿಗೆ ಭೇಟಿ ನೀಡುತ್ತಿದ್ದರು. ಈ ಸಂದರ್ಭ ಅವರು ಪಡೆಯುತ್ತಿದ್ದ ಜೀರೋ ಟ್ರಾಫಿಕ್ ಸೌಲಭ್ಯದಿಂದಾಗಿ ಸಾಕಷ್ಟು ದತ್ತನೆ ಉಂಟಾಗಿ ಸಾರ್ವಜನಿಕರಿಂದ ತೀವ್ರ ಆಕ್ರೋಶ ಹಾಗೂ ಆಕ್ಷೇಪ ವ್ಯಕ್ತವಾಗಿತ್ತು. ಇದರಿಂದ ತಮಗೆ ಜೀರೋ ಟ್ರಾಫಿಕ್ ಬೇಡ ಎಂದು ಪರಮೇಶ್ವರ್ ನಿರ್ಧರಿಸಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ತಮಗೆ ನೀಡುತ್ತಿದ್ದ ಜೀರೋ ಟ್ರಾಫಿಕ್ ಸೌಲಭ್ಯವನ್ನು ತೆಗೆಸಿದ್ದರು. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಇದೆ ಮಾದರಿಯ ನಿರ್ಧಾರವನ್ನು ಕೈಗೊಂಡಿದ್ದು ಸಾರ್ವಜನಿಕ ವಲಯದಿಂದ ಸಂತಸ ವ್ಯಕ್ತವಾಗುವ ನಿರೀಕ್ಷೆ ಇದೆ.
-
ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ.
— CM of Karnataka (@CMofKarnataka) May 21, 2023 " class="align-text-top noRightClick twitterSection" data="
ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ.
ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು.
ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ.…
">ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ.
— CM of Karnataka (@CMofKarnataka) May 21, 2023
ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ.
ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು.
ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ.…ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ.
— CM of Karnataka (@CMofKarnataka) May 21, 2023
ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ.
ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು.
ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ.…
ಸಿಎಂ ಮತ್ತೊಂದು ನಿರ್ಧಾರ.. ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿರುವ ಸಿದ್ದರಾಮಯ್ಯ ಸೋಮವಾರದಿಂದ ಇನ್ನಷ್ಟು ಸರಳವಾಗಿ ತಮ್ಮ ದಿನಚರಿಯನ್ನು ಆರಂಭಿಸಲು ತೀರ್ಮಾನಿಸಿದ್ದಾರೆ. ಈ ವಿಚಾರವನ್ನು ಸಹ ಟ್ವೀಟ್ ಮಾಡಿ ವಿವರಿಸಿರುವ ಅವರು, ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ ಎಂದು ಕೋರಿದ್ದಾರೆ.
ಇದನ್ನೂ ಓದಿ:ಮಾಜಿ ಶಾಸಕ ಯು.ಆರ್ ಸಭಾಪತಿ ನಿಧನ.. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸಂತಾಪ