ETV Bharat / state

ಅಮಿತ್‌ ಶಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ಉನ್ನತ ಮಟ್ಟದ ಸಭೆ ನಡೆಸಿ, ಪರಿಹಾರ ಬಿಡುಗಡೆ ಮಾಡಲು ಒತ್ತಾಯ

ಅಮಿತ್‌ ಶಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ, ಉನ್ನತ ಮಟ್ಟದ ಸಭೆ ನಡೆಸಿ, ಪರಿಹಾರ ಬಿಡುಗಡೆ ಮಾಡಲು ಒತ್ತಾಯಿಸಿದ್ದಾರೆ.

CM Siddaramaiah met Amit Shah
CM Siddaramaiah met Amit Shah
author img

By ETV Bharat Karnataka Team

Published : Dec 20, 2023, 2:19 PM IST

Updated : Dec 20, 2023, 9:08 PM IST

ಕರ್ನಾಟಕ ಭವನ ಕಾಮಗಾರಿ ಪರಿಶೀಲಿಸಿದ ಸಿಎಂ

ನವದೆಹಲಿ/ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾಗಿ ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆಯನ್ನು ಕೂಡಲೇ ಕರೆದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ ಕ್ರಮ ವಹಿಸುವಂತೆ ಆಗ್ರಹಿಸಿದರು.

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲೂಕುಗಳಲ್ಲಿ 223 ತಾಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಇದರಿಂದಾಗಿ ರೈತರು. ಅದರಲ್ಲೂ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರವು ಎನ್.ಡಿ.ಆರ್.ಎಫ್. ಮಾರ್ಗಸೂಚಿ ಅನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲ ಪ್ರಸ್ತಾವನೆ ಸಲ್ಲಿಸಿ ಮೂರು ತಿಂಗಳು ಕಳೆದಿದೆ. ಆದ್ದರಿಂದ ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ,,18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ. ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಪರಿಗಣಿಸುವಾಗ ಕೇಂದ್ರ ಸರ್ಕಾರವು 2015-16ರ ಕೃಷಿ ಗಣತಿಯ ದತ್ತಾಂಶವನ್ನು ಪರಿಗಣಿಸುತ್ತಿದೆ. ಆದರೆ ಇದು 8 ವರ್ಷ ಹಳೆಯ ಮಾಹಿತಿಯಾಗಿದ್ದು, ಆಸ್ತಿ ವಿಭಜನೆ ಮತ್ತಿತರ ಕಾರಣಗಳಿಂದ ಸಣ್ಣ ಮತ್ತು ಅತಿ ಸಣ್ಣ ರೈತರ ಸಂಖ್ಯೆ ಹೆಚ್ಚಾಗಿದ್ದು, 83 ಲಕ್ಷಕ್ಕೂ ಹೆಚ್ಚಿದೆ ಎಂದು ವಿವರಿಸಿದ್ದಾರೆ.

ಪಿಎಂ-ಕಿಸಾನ್‌ ಯೋಜನೆಗೆ ರಾಜ್ಯದ ರೈತರ ದತ್ತಾಂಶ ಸಂಗ್ರಹಿಸುವ ತಂತ್ರಾಂಶ ಫ್ರೂಟ್ಸ್‌ನಲ್ಲಿ ದಾಖಲಿಸಿದ ಮಾಹಿತಿಯನ್ನು ಪರಿಗಣಿಸಲಾಗುತ್ತಿದೆ. ಅಂತೆಯೇ ಬೆಳೆ ಪರಿಹಾರ ವಿತರಣೆಗೂ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು.

cm-siddaramaiah
ಕರ್ನಾಟಕ ಭವನ ಕಾಮಗಾರಿ ಪರಿಶೀಲಿಸಿದ ಸಿಎಂ

ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು. ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿ ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ 12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177.44 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರತಿಪಾದಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಉಪಸ್ಥಿತರಿದ್ದರು.

ಕರ್ನಾಟಕ ಭವನ ಕಾಮಗಾರಿ ಪರಿಶೀಲಿಸಿದ ಸಿಎಂ: ಇದೇ ವೇಳೆ, ನವದೆಹಲಿಯ ಚಾಣಕ್ಯಪುರಿಯಲ್ಲಿ 120 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಮುಖ್ಯ ಕರ್ನಾಟಕ ಭವನ ಕಟ್ಟಡದ ಕಾಮಗಾರಿಯನ್ನು ಪರಿಶೀಲಿಸಿದರು. ಸಂಬಂಧಪಟ್ಟ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಥ್​ ನೀಡಿದರು. 2024ರ ಜೂನ್​ ಒಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸಿಎಂ ತಾಕೀತು ಮಾಡಿದರು. 2020ರಲ್ಲಿ ಈ ಕಾಮಗಾರಿ ಆರಂಭಗೊಂಡಿದ್ದು, ಕೋವಿಡ್​ ಹಾಗೂ ಇತರ ಕಾರಣಗಳಿಂದ ಇನ್ನೂ ಕೂಡ ಪೂರ್ಣಗೊಂಡಿಲ್ಲ.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: 12,577.86 ಕೋಟಿ ತುರ್ತು ಬರ ಪರಿಹಾರಕ್ಕೆ ಮನವಿ

Last Updated : Dec 20, 2023, 9:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.