ETV Bharat / state

ಸಚಿವ ಸ್ಥಾನವಂಚಿತ ಅಸಮಾಧಾನಿತರಿಗೆ ವಿಶೇಷ ಹುದ್ದೆ ನೀಡಿದ ಸಿಎಂ ಸಿದ್ದರಾಮಯ್ಯ - ಆರ್ ವಿ ದೇಶಪಾಂಡೆ

ಸಚಿವಸ್ಥಾನ ವಂಚಿತರಾಗಿದ್ದ ಹಿರಿಯ ಕಾಂಗ್ರೆಸ್‌ ನಾಯಕರಾದ ಬಸವರಾಜ್ ರಾಯರೆಡ್ಡಿ, ಬಿ.ಆರ್.ಪಾಟೀಲ್ ಮತ್ತು ಆರ್.ವಿ.ದೇಶಪಾಂಡೆಗೆ ವಿಶೇಷ ಹುದ್ದೆ ನೀಡಲಾಗಿದೆ.

ಮೂವರು ಕೈ ನಾಯಕರಿಗೆ ವಿಶೇಷ ಹುದ್ದೆ
ಮೂವರು ಕೈ ನಾಯಕರಿಗೆ ವಿಶೇಷ ಹುದ್ದೆ
author img

By ETV Bharat Karnataka Team

Published : Dec 29, 2023, 6:51 PM IST

ಬೆಂಗಳೂರು: ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿದ್ದ ಶಾಸಕರಾದ ಬಸವರಾಜ್ ರಾಯರೆಡ್ಡಿ, ಬಿ.ಆರ್.ಪಾಟೀಲ್, ಆರ್.ವಿ‌.ದೇಶಪಾಂಡೆ ಅವರನ್ನು ವಿವಿಧ ಹುದ್ದೆಗಳಿಗೆ ನೇಮಿಸಿ ಇಂದು ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ ಸಿಎಂ ಸಿದ್ದರಾಮಯ್ಯ ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾಗಿದ್ದಾರೆ.

ಬಸವರಾಜ್ ರಾಯರೆಡ್ಡಿ ಅವರನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿ ನೇಮಕ ಮಾಡಲಾಗಿದೆ. ಬಿ.ಆರ್.ಪಾಟೀಲ್​ ಮುಖ್ಯಮಂತ್ರಿಯ ಸಲಹೆಗಾರರಾಗಿದ್ದಾರೆ. ಆರ್.ವಿ.ದೇಶಪಾಂಡೆ ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷರಾಗಿದ್ದಾರೆ. ಮೂವರಿಗೂ ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡಲಾಗಿದೆ. ಈ ಮೂವರೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ನಿರಾಕರಿಸಿದ್ದರು.

ಬಸವರಾಜ ರಾಯರೆಡ್ಡಿ ಹಾಗೂ ಬಿ.ಆರ್.ಪಾಟೀಲ್ ಸರ್ಕಾರದ ವಿರುದ್ಧ ಆಗಾಗ ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಿದ್ದರು. ಸರ್ಕಾರದ ಕಾರ್ಯವೈಖರಿ ಬಗ್ಗೆ ಸಿಎಂಗೆ ಪತ್ರಗಳನ್ನು ಬರೆಯುವ ಮೂಲಕ ಇಕ್ಕಟ್ಟಿಗೆ ಸಿಲುಕಿಸಿದ್ದರು. ಇದೀಗ ವಿಶೇಷ ಹುದ್ದೆ ನೀಡಿರುವ ಸಿಎಂ ಅತೃಪ್ತಿಗೆ ಮದ್ದರೆಯುವ ಪ್ರಯತ್ನ ಮಾಡಿದ್ದಾರೆ.

ಇದನ್ನೂ ಓದಿ: ಅತಿಥಿ ಉಪನ್ಯಾಸಕರಿಗೆ ₹5 ಸಾವಿರ ವೇತನ ಹೆಚ್ಚಳ, ಆರೋಗ್ಯ ವಿಮೆ ಘೋಷಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.