ETV Bharat / state

ಮೇಕ್ ಇನ್​ ಇಂಡಿಯಾ, ಸ್ಕಿಲ್ ಇಂಡಿಯಾ ಎಂದವರೇ ಈಗ 'ಇಂಡಿಯಾ' ಹೆಸರಿಗೆ ಬೆಚ್ಚಿಬಿದ್ದಿದ್ದಾರೆ: ಸಿಎಂ ಸಿದ್ದರಾಮಯ್ಯ

ಭಾರತೀಯ ಬಹುತ್ವ ಸಂಸ್ಕೃತಿ ಕಾಂಗ್ರೆಸ್ ಕೈಯಲ್ಲಿ ಸುಭದ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

cm-siddaramaiah-reaction-on-bjp-in-bengaluru
ಮೇಕ್ ಇನ್​ ಇಂಡಿಯಾ, ಸ್ಕಿಲ್ ಇಂಡಿಯಾ ಎಂದವರೇ ಈಗ 'ಇಂಡಿಯಾ' ಹೆಸರಿಗೆ ಬೆಚ್ಚಿ ಬಿದ್ದಿದ್ದಾರೆ: ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Sep 10, 2023, 6:47 PM IST

ಬೆಂಗಳೂರು: ಬಹುತ್ವ ಭಾರತೀಯ ಸಂಸ್ಕೃತಿಯ ಜೀವಾಳ. ಇದೇ ಭಾರತದ ಮಣ್ಣಿನ ಸತ್ವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಮನೆ ಮೈದಾನದಲ್ಲಿ ನಡೆದ ರಾಜ್ಯಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕಾರಣಿ ಸದಸ್ಯರಾದ ಡಾ. ಸೈಯದ್ ನಾಸಿರ್ ಹುಸೇನ್ ಅವರ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತದ ಬಹುತ್ವದ ನಾಶ ಎಂದರೆ ಅದು ನಮ್ಮ ಸಂವಿಧಾನದ ನಾಶ. ಸಾವಿರಾರು ವರ್ಷಗಳ ಭಾರತದ ಬಹುತ್ವ ಸಂಸ್ಕೃತಿಯನ್ನು ನಾಶ ಪಡಿಸುವ ಹುನ್ನಾರ ನಡೆಯುತ್ತಿದೆ. ಇದಕ್ಕಾಗಿ ಆಕರ್ಷಕ ಪದಗಳನ್ನು, ಘೋಷಣೆಗಳನ್ನು ಕೊಡುತ್ತಿದ್ದಾರೆ. ಇದಕ್ಕೆ ಮರುಳಾದರೆ ಭಾರತದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಬೆಸುಗೆ ನಾಶವಾಗುತ್ತದೆ ಎಂದು ಎಚ್ಚರಿಸಿದರು.

ದೇಶದ ಹೆಸರನ್ನೇ ಈಗ ಬದಲಾಯಿಸುವ ಹುನ್ನಾರದೊಂದಿಗೆ ಡ್ರಾಮಾ ಮಾಡುತ್ತಿದ್ದಾರೆ. ತನ್ನ ಕಾರ್ಯಕ್ರಮಗಳಿಗೆ ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ, ಸ್ಟಾಂಡ್ ಅಪ್ ಇಂಡಿಯಾ ಅಂತೆಲ್ಲಾ ಹೆಸರಿಟ್ಟಿದ್ದ ಬಿಜೆಪಿಯ ಕೇಂದ್ರ ಸರ್ಕಾರವೇ ಈಗ "INDIA" ಹೆಸರಿಗೆ ಬೆಚ್ಚಿಬಿದ್ದು ದೇಶದ ಹೆಸರು "ಭಾರತ" ಎಂದು ಹೊಸದಾಗಿ ಹೇಳಲು ಹೊರಟಿದೆ. ನಾವು ಭಾರತ್ ಜೋಡೋ ನಡೆಸಿದವರು. ನಮಗೆ ಭಾರತ-ಇಂಡಿಯಾ ಬಗ್ಗೆ ಪಾಠ ಹೇಳುವ ಮೂರ್ಖತನಕ್ಕೆ ಬಿಜೆಪಿ ಪರಿವಾರ ಮುಂದಾಗಿದೆ. ಇವರಿಗೆ ಭಾರತದ ಬಗ್ಗೆಯೂ ಗೌರವ ಇಲ್ಲ. ಇಂಡಿಯಾದ ಘನತೆಯೂ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.

ಭಾರತೀಯ ಬಹುತ್ವ ಸಂಸ್ಕೃತಿ ಕಾಂಗ್ರೆಸ್ ಕೈಯಲ್ಲಿ ಸುಭದ್ರವಾಗಿದೆ. ಭಾರತೀಯ ಸಂವಿಧಾನ ನಮ್ಮ ಕೈಯಲ್ಲಿ ಸುರಕ್ಷಿತವಾಗಿದೆ. ಯಾರು ಎಷ್ಟೇ ಹುನ್ನಾರ, ಪಿತೂರಿ ರಾಜಕಾರಣ ನಡೆಸಿದರೂ ನಾವು ಬಹುತ್ವದ ಭಾರತವನ್ನು, ಈ ಮಣ್ಣಿನ ಸೌಹಾರ್ದ ಪರಂಪರೆಯನ್ನು, ಜಾತ್ಯತೀತ ಸಂಸ್ಕೃತಿಯನ್ನು, ಭಾರತೀಯ ಸಂವಿಧಾನವನ್ನು ಕಾಪಾಡಿಕೊಳ್ಳುತ್ತೇವೆ. ಭಾರತೀಯರು ಭಯಮುಕ್ತರಾಗಿ ಅಭಿವೃದ್ಧಿ ಭಾರತವನ್ನು ಮುನ್ನಡೆಸಲು ಸನ್ನದ್ಧರಾಗಿ ಎಂದು ಕರೆ ನೀಡಿದರು.

ಪರಂಪರೆಯನ್ನು ಕಾಪಾಡಿಕೊಂಡರೆ ಮಾತ್ರ ದೇಶ ಅಭಿವೃದ್ಧಿ ಪಥದಲ್ಲಿ ಮುನ್ನುಗ್ಗಲು ಸಾಧ್ಯ. ಭಾರತೀಯರು ನಮ್ಮ ರಾಜ್ಯದಲ್ಲಿ ಭಯ ಮುಕ್ತರಾಗಿ ಅಭಿವೃದ್ಧಿಯ ದಿಕ್ಕಿಗೆ ಬಹುತ್ವದ ಭಾರತವನ್ನು ಮುನ್ನಡೆಸಬೇಕು.‌ ಪಕ್ಷದ ಸಿದ್ಧಾಂತವನ್ನು, ತತ್ವವನ್ನು, ಹೋರಾಟದ ಪರಂಪರೆಯನ್ನು ನಾಸಿರ್ ಹುಸೇನ್ ಅವರು ರಾಜ್ಯಸಭೆಯಲ್ಲಿ ಸಮರ್ಥವಾಗಿ ಮಂಡಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರದ ಮಾಜಿ ಸಚಿವ ಸಲ್ಮಾನ್ ಖುರ್ಷಿದ್, ಬಿಹಾರ ವಿಧಾನಸಭೆಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಶಕೀಲ್ ಅಹಮದ್, ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡರಾದ ಬಾಬಾ ಸಿದ್ದಿಕಿ, ಸಚಿವರಾದ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ನಸೀರ್ ಅಹಮದ್, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ರಾಜ್ಯಸಭಾ ಸದಸ್ಯ ಜಿ. ಸಿ. ಚಂದ್ರಶೇಖರ್, ಮಾಜಿ ಸಚಿವ ತನ್ವೀರ್ ಸೇಠ್, ಬೈರತಿ ಸುರೇಶ್, ರಹೀಂಖಾನ್ ಶಾಸಕರುಗಳಾದ ರಿಜ್ವಾನ್ ಅರ್ಷದ್, ಅಬ್ದುಲ್ ಜಬ್ಬಾರ್, ಹ್ಯಾರಿಸ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ:'ಶಕ್ತಿ ಯೋಜನೆ' ವಿರುದ್ಧ ಖಾಸಗಿ ವಾಹನ ಚಾಲಕರ ಮುಷ್ಕರ: ಬೇಡಿಕೆಗಳೇನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.