ETV Bharat / state

ಮನುಷ್ಯರನ್ನು ಜಾತಿ, ಧರ್ಮದ ಆಧಾರದಲ್ಲಿ ದ್ವೇಷಿಸುವುದು ಅಮಾನವೀಯ: ಸಿಎಂ ಸಿದ್ದರಾಮಯ್ಯ - discrimination

ಸಬ್ ಕಾ ಸಾಥ್ - ಸಬ್ ಕಾ ವಿಕಾಸ್ ಎಂದು ಬಾಯಲ್ಲಿ ಹೇಳಿ ಆಚರಣೆಯಲ್ಲಿ ಧರ್ಮ ತಾರತಮ್ಯ ಮಾಡುವುದು ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ.

cm-siddaramaiah-reaction-on-discrimination
ಮನುಷ್ಯರನ್ನು ಜಾತಿ, ಧರ್ಮದ ಆಧಾರದಲ್ಲಿ ದ್ವೇಷಿಸುವುದು ಅಮಾನವೀಯ: ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Jan 15, 2024, 10:48 PM IST

ಬೆಂಗಳೂರು: ಕಲ್ಲು ಒಡೆಯೋರು ನೀವು, ಗುಡಿ ಕಟ್ಟೋರು ನೀವು, ವಿಗ್ರಹ ತರೋರು ನೀವು, ಆದರೆ ದೇವಸ್ಥಾನ ಪ್ರವೇಶಕ್ಕೆ ಮಾತ್ರ ಭೋವಿಗಳಿಗೆ ಅವಕಾಶ ಇಲ್ಲ ಎಂದರೆ ಅದನ್ನು ಒಪ್ಪಿಕೊಳ್ಳಬೇಕಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಕಾಯಕಯೋಗಿ ಸಿದ್ದರಾಮೇಶ್ವರ ಜಯಂತಿ ಮತ್ತು ಸಿದ್ದರಾಮೇಶ್ವರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾರಾಯಣಗುರುಗಳು ಹೇಳಿದ ಮಾರ್ಗ ಅನುಸರಿಸಬೇಕು. ನಿಮ್ಮನ್ನು ಒಳಗೆ ಸೇರಿಸದ ದೇವಸ್ಥಾನಗಳನ್ನು ನೀವೇ ತಿರಸ್ಕರಿಸಿ, ನಿಮ್ಮದೇ ದೇವಸ್ಥಾನ ನಿರ್ಮಿಸಿಕೊಳ್ಳಿ ಎಂದು ಕರೆ ನೀಡಿದ್ದನ್ನು ವಿವರಿಸಿದರು.

"ಸಬ್ ಕಾ ಸಾಥ್ -ಸಬ್ ಕಾ ವಿಕಾಸ್" ಎಂದು ಬಾಯಲ್ಲಿ ಹೇಳಿ ಆಚರಣೆಯಲ್ಲಿ ಧರ್ಮ ತಾರತಮ್ಯ ಮಾಡುವುದು ಇವತ್ತು ನಡೆಯುತ್ತಿದೆ. ಆದರೆ ಬಸವಾದಿ ಶರಣರು ಜಾತಿ - ಧರ್ಮ ಆಧಾರದಲ್ಲಿ ಮನುಷ್ಯರನ್ನು ವಿಭಜಿಸಲಿಲ್ಲ. ಮನುಷ್ಯರನ್ನು ಜಾತಿ - ಧರ್ಮದ ಆಧಾರದಲ್ಲಿ ದ್ವೇಷಿಸುವುದು ಅಮಾನವೀಯವಾದದ್ದು. ವೈಚಾರಿಕ-ವೈಜ್ಞಾನಿಕ ಸಮ ಸಮಾಜ ನಿರ್ಮಾಣಕ್ಕೆ ಬಸವಾದಿ ಶರಣರು ಹೋರಾಡಿದ್ದರು. ಶರಣರು ನುಡಿದಂತೆ ನಡೆದರು. ಹೇಳಿದಂತೆಯೇ ತಮ್ಮ ಬದುಕನ್ನು ಆಚರಿಸಿದರು" ಎಂದು ಹೇಳಿದರು.

"ಮೌಢ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಒಪ್ಪಬಾರದು. ಅವಕಾಶ ಸಿಕ್ಕವರು ಮುಂದೆ ಬಂದರು, ಅವಕಾಶ ಇಲ್ಲದವರು ಹಿಂದುಳಿದರು. ಹಣೆಬರಹ ಎನ್ನುವುದೆಲ್ಲ ಬೋಗಸ್. ನಮ್ಮ ಊರಿನ ಶಾನುಬೋಗರು ನಮ್ಮ ಜಾತಿಯವರು ಕಾನೂನು ಓದಬಾರದು ಎಂದು ನನ್ನ ಅಪ್ಪನಿಗೆ ಒಪ್ಪಿಸಿಬಿಟ್ಟಿದ್ದರು. ಆದರೆ, ನಾನು ಹಠ ತೊಟ್ಟು ಕಾನೂನು ಪದವಿ ಪಡೆದೆ. ಈಗ ಮುಖ್ಯಮಂತ್ರಿ ಕೂಡ ಆಗಿದ್ದೇನೆ. ಶಾನುಬೋಗರ ಮಾತು ಕೇಳಿದ್ದರೆ ನಾನು ಕುರಿ ಕಾಯ್ಕೊಂಡು ಇರಬೇಕಾಗಿತ್ತು. ಅವರು ಸರಿಯಾಗಿ ದಾರಿ ತಪ್ಪಿಸುತ್ತಾರೆ. ಈ ಬಗ್ಗೆ ಎಚ್ಚರದಿಂದಿರಿ" ಎಂದು ಕರೆ ನೀಡಿದರು.

"ಯಾವ ಕೆಲಸವೂ ಮೇಲು ಅಲ್ಲ, ಕೀಳೂ ಅಲ್ಲ. ಈ ಕಾರಣಕ್ಕೇ ಕಾಯಕವೇ ಕೈಲಾಸ ಎಂದು ಶರಣರು ಹೇಳಿದ್ದಾರೆ. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ವಿತರಣೆ. ಎಲ್ಲರೂ ಉತ್ಪಾದನೆಯಲ್ಲಿ ಭಾಗವಹಿಸಬೇಕು. ಅದನ್ನು ಎಲ್ಲರಿಗೂ ವಿತರಿಸಬೇಕು ಎನ್ನುವುದು ಬಸವಾದಿ ಶರಣರ ಆಶಯವಾಗಿತ್ತು. ನಮ್ಮ ಸರ್ಕಾರದ ಕಾರ್ಯಕ್ರಮಗಳೂ ಈ ಆಶಯಕ್ಕೆ ಪೂರಕವಾಗಿವೆ. ಸಾಮಾಜಿಕ, ಆರ್ಥಿಕ ಚಟುವಟಿಕೆಗಳು ಎಲ್ಲ ಸಮುದಾಯಕ್ಕೆ ಸಿಕ್ಕರೆ ಮಾತ್ರ ಜಾತಿಗ್ರಸ್ಥ ಸಮಾಜ ಚಲನಶೀಲವಾಗುತ್ತದೆ. ಇಲ್ಲವಾದರೆ ಸ್ಥಗಿತಗೊಂಡ ಸಮಾಜ ಆಗುತ್ತದೆ. ಭೋವಿ ಸಮುದಾಯದ ಬೇಡಿಕೆಯಂತೆ ಅಧ್ಯಯನ ಪೀಠ ಸ್ಥಾಪನೆ ಸೇರಿ ನನ್ನ ಮುಂದಿಟ್ಟಿರುವ ಎಲ್ಲ ಬೇಡಿಕೆಗಳನ್ನು ಈಡೇರಿಸಲಾಗುವುದು" ಎಂದು ಭರವಸೆ ನೀಡಿದರು.

ಇದನ್ನೂ ಓದಿ: ದಾವಣಗೆರೆ: ಸರಳವಾಗಿ ನೆರವೇರಿದ ಹರ ಜಾತ್ರಾ ಮಹೋತ್ಸವ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.