ಬೆಂಗಳೂರು: ನನ್ನ ಮತ್ತು ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ ಮತ್ತು ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ ಅಂತ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ, ಹಿರಿಯರು ಕಿರಿಯರಿಗೆ ಆಶೀರ್ವಾದ ಮಾಡಬೇಕು, ಶಾಪ ಕೊಡಬಾರದು. ದಶಕಗಳ ಕಾಲ ಜಾತ್ಯತೀತತೆಯ ಕಿರೀಟ ಧರಿಸಿಕೊಂಡು ಬಂದಿದ್ದ ಗೌಡರು ಇಳಿಗಾಲದಲ್ಲಿ ಅದನ್ನು ಕೆಳಗೆಸೆದು ಕೋಮುವಾದಿ ಕಿರೀಟವನ್ನು ಧರಿಸಿಕೊಳ್ಳಬೇಕಾಗಿ ಬಂದಿರುವುದರಿಂದ ನೊಂದು ಹತಾಶೆಯಿಂದ ಇಂತಹ ಹೇಳಿಕೆ ನೀಡಿರಬಹುದೆಂದು ಭಾವಿಸಿದ್ದೇನೆ. ತಾವು ಹೇಳಿದ್ದು ತಪ್ಪು ಎಂದು ಅವರಿಗೆ ಪ್ರಾಮಾಣಿಕವಾಗಿ ಅನಿಸಿದರೆ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬಹುದು ಎಂದಿದ್ದಾರೆ.
-
ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಅದೇ ರೀತಿ @H_D_Devegowda ಅವರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡಾ ನಾನು ಬಯಸುತ್ತೇನೆ. ಆದರೆ ಜೆಡಿಎಸ್ ಮತ್ತು ಅವರ ಹೊಸ ಮಿತ್ರ @BJP4Karnataka ಶಾಶ್ವತವಾಗಿ ವಿರೋಧ ಪಕ್ಷದಲ್ಲಿಯೇ ಇರಬೇಕೆಂದು ನಾನು ಬಯಸುತ್ತೇನೆ. ನಮ್ಮ…
— Siddaramaiah (@siddaramaiah) January 6, 2024 " class="align-text-top noRightClick twitterSection" data="
">ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಅದೇ ರೀತಿ @H_D_Devegowda ಅವರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡಾ ನಾನು ಬಯಸುತ್ತೇನೆ. ಆದರೆ ಜೆಡಿಎಸ್ ಮತ್ತು ಅವರ ಹೊಸ ಮಿತ್ರ @BJP4Karnataka ಶಾಶ್ವತವಾಗಿ ವಿರೋಧ ಪಕ್ಷದಲ್ಲಿಯೇ ಇರಬೇಕೆಂದು ನಾನು ಬಯಸುತ್ತೇನೆ. ನಮ್ಮ…
— Siddaramaiah (@siddaramaiah) January 6, 2024ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಅದೇ ರೀತಿ @H_D_Devegowda ಅವರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡಾ ನಾನು ಬಯಸುತ್ತೇನೆ. ಆದರೆ ಜೆಡಿಎಸ್ ಮತ್ತು ಅವರ ಹೊಸ ಮಿತ್ರ @BJP4Karnataka ಶಾಶ್ವತವಾಗಿ ವಿರೋಧ ಪಕ್ಷದಲ್ಲಿಯೇ ಇರಬೇಕೆಂದು ನಾನು ಬಯಸುತ್ತೇನೆ. ನಮ್ಮ…
— Siddaramaiah (@siddaramaiah) January 6, 2024
ಯಾವ ರಾಜಕೀಯ ಪಕ್ಷ ಕೂಡ ಮತ್ತೊಂದು ರಾಜಕೀಯ ಪಕ್ಷದ ಅಂತ್ಯವನ್ನು ಬಯಸಬಾರದು. ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ ದೇವೇಗೌಡರಿಗೂ ಸೋಕಿದ ಹಾಗಿದೆ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಇದು ಸಂಘ ದೋಷದ ಫಲ. ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಅದೇ ರೀತಿ ದೇವೇಗೌಡರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡ ನಾನು ಬಯಸುತ್ತೇನೆ. ಹಾಗು ಜೆಡಿಎಸ್ ಮತ್ತು ಅವರ ಹೊಸ ಮಿತ್ರ ಪಕ್ಷ ಬಿಜೆಪಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿಯೇ ಇರಬೇಕು. ನಮ್ಮ ಕಾಂಗ್ರೆಸ್ ಪಕ್ಷ ಈ ಬಯಕೆ ಈಡೇರಿಕೆಗೆ ನಿರಂತರ ಪ್ರಯತ್ನ ಮಾಡಲಿದೆ ಎಂದು ತಿಳಿಸಿದ್ದಾರೆ.
-
ಯಾವ ರಾಜಕೀಯ ಪಕ್ಷ ಕೂಡಾ ಮತ್ತೊಂದು ರಾಜಕೀಯ ಪಕ್ಷದ ಅಂತ್ಯವನ್ನು ಬಯಸಬಾರದು. "ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ" ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ @H_D_Devegowda ಅವರಿಗೂ ಸೋಕಿದ ಹಾಗಿದೆ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಇದು "ಸಂಘ"ದೋಷದ ಫಲ. 3/5#JanatadalNotSecular
— Siddaramaiah (@siddaramaiah) January 6, 2024 " class="align-text-top noRightClick twitterSection" data="
">ಯಾವ ರಾಜಕೀಯ ಪಕ್ಷ ಕೂಡಾ ಮತ್ತೊಂದು ರಾಜಕೀಯ ಪಕ್ಷದ ಅಂತ್ಯವನ್ನು ಬಯಸಬಾರದು. "ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ" ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ @H_D_Devegowda ಅವರಿಗೂ ಸೋಕಿದ ಹಾಗಿದೆ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಇದು "ಸಂಘ"ದೋಷದ ಫಲ. 3/5#JanatadalNotSecular
— Siddaramaiah (@siddaramaiah) January 6, 2024ಯಾವ ರಾಜಕೀಯ ಪಕ್ಷ ಕೂಡಾ ಮತ್ತೊಂದು ರಾಜಕೀಯ ಪಕ್ಷದ ಅಂತ್ಯವನ್ನು ಬಯಸಬಾರದು. "ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ" ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ @H_D_Devegowda ಅವರಿಗೂ ಸೋಕಿದ ಹಾಗಿದೆ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಇದು "ಸಂಘ"ದೋಷದ ಫಲ. 3/5#JanatadalNotSecular
— Siddaramaiah (@siddaramaiah) January 6, 2024
ಇದನ್ನೂ ಓದಿ : ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ದೇವೇಗೌಡ - ಸಿಎಂ ಸಿದ್ದರಾಮಯ್ಯ ಅನಿರೀಕ್ಷಿತ ಭೇಟಿ
ಜಾತ್ಯತೀತ ಜನತಾ ಪಕ್ಷ ಎನ್ನುವುದು 'ಬಿಜೆಪಿಯ ಬಿ ಟೀಮ್' ಎಂದು ಹಿಂದಿನಿಂದಲೇ ನಾನು ಹೇಳಿಕೊಂಡು ಬಂದಿದ್ದೇನೆ. ನನ್ನ ಮಾತನ್ನು ಒಪ್ಪಿಕೊಂಡು ತಮ್ಮ ಸೈದ್ಧಾಂತಿಕ ನಿಲುವನ್ನು ಸ್ಪಷ್ಟಪಡಿಸಿದ್ದಕ್ಕೆ ಜೆಡಿಎಸ್ ಪಕ್ಷವನ್ನು ಅಭಿನಂದಿಸುತ್ತೇನೆ. ಈ ಪಕ್ಷದ ಜಾತ್ಯತೀತ ಮುಖವನ್ನು ನಿಜ ಎಂದು ನಂಬಿ ಒಂದಷ್ಟು ಸೆಕ್ಯುಲರ್ ಮತದಾರರು ದಾರಿ ತಪ್ಪುವುದನ್ನು ಜೆಡಿಎಸ್ ಪಕ್ಷದ ಈ ನಿಲುವು ತಪ್ಪಿಸಿದೆ. ಇದು ಮುಂದಿನ ಚುನಾವಣೆಯನ್ನು ಜಾತ್ಯತೀತ ಮತ್ತು ಕೋಮುವಾದಿ ಶಕ್ತಿಗಳ ನಡುವಿನ ನೇರ ಸಂಘರ್ಷವಾಗಿ ಪರಿವರ್ತಿಸಿದೆ. ಜಾತ್ಯತೀತತೆ ಮತ್ತು ಸೌಹಾರ್ದತೆಯ ಪರಂಪರೆ ನಡುವೆ ಕರ್ನಾಟಕದ ಮತದಾರರು ಮುಂದಿನ ಚುನಾವಣೆಗಳಲ್ಲಿ ಸರಿಯಾದ ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸ ನನಗೆ ಇದೆ ಎಂದಿದ್ದಾರೆ.