ETV Bharat / state

CM Siddaramaiah: ನಾನು 12 ಬಾರಿ ಚಾಮರಾಜನಗರಕ್ಕೆ ಹೋಗಿ ಎರಡನೇ ಬಾರಿ ಮುಖ್ಯಮಂತ್ರಿಯಾದೆ: ಸಿಎಂ ಸಿದ್ದರಾಮಯ್ಯ

ಇಂದು ವಿದ್ಯಾವಂತರೂ ಜಾತಿ ವ್ಯವಸ್ಥೆಗೆ ಈಡಾಗುತ್ತಿರುವುದು ಬೇಸರದ ಸಂಗತಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

cm-siddaramaiah-reaction-on-superstition-and-cast-system
ನಾನು 12 ಬಾರಿ ಚಾಮರಾಜನಗರಕ್ಕೆ ಹೋಗಿ ಎರಡನೇ ಬಾರಿ ಮುಖ್ಯಮಂತ್ರಿಯಾದೆ: ಸಿಎಂ ಸಿದ್ದರಾಮಯ್ಯ
author img

By

Published : Jul 2, 2023, 8:19 PM IST

ಬೆಂಗಳೂರು: ನಾನು 12 ಬಾರಿ ಚಾಮರಾಜನಗರಕ್ಕೆ ಹೋಗಿ ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ದೇಶದ ಪ್ರಥಮ ವಚನ ಸಂಸ್ಕೃತಿ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಚಾಮರಾಜನಗರಕ್ಕೆ ಹೋದರೆ ಸಿಎಂ ಕುರ್ಚಿ ಹೋಗುತ್ತದೆ ಎನ್ನುವ ಮೌಢ್ಯವನ್ನು ವಿದ್ಯಾವಂತರೇ ಹೆಚ್ಚು ನಂಬುತ್ತಾರೆ. ನಾನು 12 ಬಾರಿ ಚಾಮರಾಜನಗರಕ್ಕೆ ಹೋಗಿ ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದೇನೆ. ಬಸವಣ್ಣನವರು 12ನೇ ಶತಮಾನದಲ್ಲೇ ಇಂಥ ಮೌಢ್ಯ ಮತ್ತು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದರು. ಜಾಗೃತಿ ಮೂಡಿಸಿದ್ದರು ಎಂದು ತಿಳಿಸಿದರು.

ಎಲ್ಲರಿಗೂ ಶಿಕ್ಷಣ ದೊರೆತರೆ ಜಾತಿ ವ್ಯವಸ್ಥೆ ಹೋಗುತ್ತದೆ ಎಂದುಕೊಂಡಿದ್ದೆ. ಆದರೆ ಅದು ಆಗುತ್ತಿಲ್ಲ. ಶಿಕ್ಷಣ ದೊರೆತರೆ ಜಾತಿ, ಮೌಢ್ಯ ಹೋಗುತ್ತದೆ ಎನ್ನುವ ಮಾತು ಸುಳ್ಳಾಗಿದೆ. ನಮ್ಮ ದೇಶದಲ್ಲಿ ಜಾತಿ ವ್ಯವಸ್ಥೆ ಬಹಳ ಆಳವಾಗಿ ಬೇರುಬಿಟ್ಟಿದೆ. ಯಾವ ಸಮಾಜದಲ್ಲಿ ಚಲನೆಯಿರುವುದಿಲ್ಲವೋ ಆಗ ವ್ಯವಸ್ಥೆ ಬದಲಾವಣೆಯಾಗುವುದಿಲ್ಲ. ಇಂದು ವಿದ್ಯಾವಂತರೂ ಜಾತಿ ವ್ಯವಸ್ಥೆಗೆ ಈಡಾಗುತ್ತಿರುವುದು ಬೇಸರದ ಸಂಗತಿಯಾಗಿದೆ. ವಿದ್ಯೆ ಜ್ಞಾನದ ವಿಕಾಸಕ್ಕೆ ಕಾರಣವಾಗಬೇಕು. ಆದರೆ ಸಂಕುಚಿತ ಭಾವನೆ ಹೆಚ್ಚಾಗುತ್ತಿದೆ. ಕುವೆಂಪು ಅವರು ಹೇಳಿದಂತೆ ಹುಟ್ಟುವಾಗ ಪ್ರತಿ ಮಾನವ ವಿಶ್ವ ಮಾನವನಾಗಿರುತ್ತಾನೆ ಬೆಳೆಯುತ್ತಾ ಅಲ್ಪ ಮಾನವನಾಗುತ್ತಿದ್ದಾನೆ ಎಂದು ಸಿಎಂ ಸಿದ್ದರಾಮಯ್ಯ ವಿಷಾದಿಸಿದರು.

ಜಾತಿಮುಕ್ತ ಸಮಾಜ ನಿರ್ಮಾಣ ಆಗಬೇಕು ಎನ್ನುವ ಬಸವಣ್ಣನವರ ಆಶಯ ಇನ್ನೂ ಈಡೇರಿಲ್ಲ. ವಿದ್ಯಾವಂತರಲ್ಲೇ ಜಾತಿ ತಾರತಮ್ಯ ಹೆಚ್ಚುತ್ತಿದೆ. ಎಲ್ಲರೂ ಮನುಷ್ಯರು ಎಂದು ತಿಳಿದಾಗ ಮಾತ್ರ ನಮ್ಮವರು ಎಂಬ ಭಾವನೆ ಬರುತ್ತದೆ. ಎಲ್ಲರೂ ನಮ್ಮವರು ಎಂದು ಯಾವಾಗ ತಿಳಿಯುವುದಿಲ್ಲವೋ ಅಲ್ಲಿರುವರಿಗೂ ಬದಲಾವಣೆ ಸಾಧ್ಯವಿಲ್ಲ. ಜಾತಿ ವರ್ಗ ಬಿಟ್ಟು ಮನುಷ್ಯರಾಗಬೇಕು. ಪರಸ್ಪರ ಪ್ರೀತಿ ಬಾಂಧವ್ಯದಿಂದ ಬದುಕಬೇಕು ಎಂದು ಕರೆ ನೀಡಿದರು.

ಇದೇ ವೇಳೆ ಮಾತನಾಡಿದ ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಬಸವಣ್ಣನವರು, ಅಲ್ಲಮ ಪ್ರಭುಗಳು ಸೇರಿದಂತೆ ವಚನಕಾರರು ಲೋಕ ಸಂಚಾರದ ಮೂಲಕ ಆತ್ಮ ಸಂಚಾರ ಮಾಡಿದವರು. ಅಂತವರ ಚರಣದ ಸ್ಪರ್ಶದ ಸೆಲೆ ವಿಶ್ವದೆಲ್ಲೆಡೆ ಪಸರಿಸಬೇಕಿತ್ತು. ವಿಶ್ವದ ಜನಾಂಗದ ಕಣ್ಣು ತೆರೆಯಬೇಕಿತ್ತು. ಆದರೆ ಅದಾಗದಿರುವುದು ವಿಷಾದದ ಸಂಗತಿ ಎಂದು ಹೇಳಿದರು.

ಈ ಬಾರಿ ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಅಧಿಕಾರವೇ ಅವರನ್ನು ಹುಡುಕಿಕೊಂಡು ಬಂದಿದೆ. ಮೌಢ್ಯಗಳನ್ನು ವಿಧಾನಸೌಧದ ದಕ್ಷಿಣ ಬಾಗಿಲನ್ನು ತೆಗೆದಿದ್ದಾರೆ. ನಿಷ್ಟ ಪ್ರವೃತ್ತಿಯನ್ನು ಮೈಗೂಡಿಸಿಕೊಂಡಿದ್ದಾರೆ. ಪಠ್ಯದಲ್ಲಿ ಬಸವಣ್ಣ, ಅಂಬೇಡ್ಕರ್, ಕುವೆಂಪು ಸೇರಿದಂತೆ ಹಲವು ಪಾಠಗಳಿವೆ. ಬದಲಾವಣೆ ತರುವುದು ಸಹ ತುಂಬಾ ಇದೆ. ಬದಲಾವಣೆಯಾಗಿ ಬಸವಣ್ಣ ಅವರ ವಚನ ಪಾಠಗಳನ್ನು ಇನ್ನೂ ಹೆಚ್ಚು ಮುನ್ನಲೆಗೆ ತರಬೇಕಿದೆ. ಇಂತಹ ವಚನಗಳನ್ನು ಅಳವಡಿಸುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಮಾಡಿದರು.

ಇದನ್ನೂ ಓದಿ: ಮೂಢನಂಬಿಕೆಗೆ ಸಿಎಂ ಸೆಡ್ಡು.. ವಿಧಾನಸೌಧದಲ್ಲಿ ಐದು ವರ್ಷಗಳಿಂದ ಮುಚ್ಚಿದ್ದ ದಕ್ಷಿಣ ದ್ವಾರವನ್ನು ತೆರೆಸಿದ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.