ಬೆಂಗಳೂರು: ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ ವೇಳೆ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿ ಹುತಾತ್ಮರಾದ ರಾಜ್ಯದ ಹೆಮ್ಮೆಯ ವೀರಯೋಧ ಪ್ರಾಂಜಲ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ಘೋಷಣೆಯಂತೆ 50 ಲಕ್ಷ ರೂಪಾಯಿಗಳ ಪರಿಹಾರ ಧನ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಸಿಎಂ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆ.
-
ಜಮ್ಮು - ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.
— CM of Karnataka (@CMofKarnataka) December 4, 2023 " class="align-text-top noRightClick twitterSection" data="
ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ… pic.twitter.com/HgJQ9FlqXo
">ಜಮ್ಮು - ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.
— CM of Karnataka (@CMofKarnataka) December 4, 2023
ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ… pic.twitter.com/HgJQ9FlqXoಜಮ್ಮು - ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.
— CM of Karnataka (@CMofKarnataka) December 4, 2023
ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ… pic.twitter.com/HgJQ9FlqXo
ನ. 22ರಂದು ರಜೌರಿ ಸೆಕ್ಟರ್‌ನಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 63ನೇ ರಾಷ್ಟ್ರೀಯ ರೈಫಲ್ಸ್‌ನ 29 ವರ್ಷದ ಕರುನಾಡ ವೀರ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರು ತಮ್ಮ ಪ್ರಾಣ ಕಳೆದುಕೊಂಡಿದ್ದರು. ದೇಶಕ್ಕಾಗಿ ಕ್ಯಾಪ್ಟನ್ ಪ್ರಾಂಜಲ್ ಪ್ರಾಣತ್ಯಾಗಕ್ಕೆ ಗೌರವಾರ್ಥವಾಗಿ ಅವರ ಕುಟುಂಬಕ್ಕೆ ರಾಜ್ಯ ಸರಕಾರದಿಂದ 50 ಲಕ್ಷ ರೂಪಾಯಿಗಳ ಪರಿಹಾರ ಧನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದರು. ಅದರಂತೆ ಹಣವನ್ನು ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಯಾ.ಪ್ರಾಂಜಲ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸುವ ಸಂದರ್ಭದಲ್ಲಿ ಅವರ ಹೋರಾಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.
ದೇಶಕ್ಕಾಗಿ ಪ್ರಾಣವನ್ನು ಲೆಕ್ಕಿಸದೇ ಉಗ್ರಗಾಮಿಗಳ ಜೊತೆ ಹೋರಾಡಿ ಬಲಿಯಾದ ಪ್ರಾಂಜಲ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 50 ಲಕ್ಷ ರೂಪಾಯಿಗಳ ಧನಸಹಾಯ ಮಾಡುವುದಾಗಿ ಪ್ರಕಟಿಸಿದ್ದರು. ಮುಖ್ಯಮಂತ್ರಿಗಳ ಆದೇಶದಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ 50 ಲಕ್ಷ ರೂಪಾಯಿಗಳ ಪರಿಹಾರ ಧನದ ಚಕ್ ಸಿದ್ಧಪಡಿಸಿದ್ದು, ಇಂದು ಮಂಗಳವರ ಪ್ರಾಂಜಲ್ ಅವರ ಕುಟುಂಬಕ್ಕೆ ಹಸ್ತಾಂತರ ಮಾಡಲಿದೆ.
ರಾಜ್ಯ ಸರಕಾರದಿಂದ ಹುತಾತ್ಮ ಯೋಧ ಪ್ರಾಂಜಲ್ ಅವರ ಕುಟುಂಬಕ್ಕೆ 50 ಲಕ್ಷ ರೂಗಳ ಪರಿಹಾರ ಧನವನ್ನು ಮಂಜೂರು ಮಾಡಿ ಆದೇಶ ಹೊರಡಿಸಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸರಕಾರಿ ಆದೇಶದೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. 'ದೇಶದ ರಕ್ಷಣೆಗಾಗಿ ಪ್ರಾಣವನ್ನು ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧರ ಬಗ್ಗೆ ತಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ ಬಲಿದಾನಕ್ಕೆ ಬೆಲೆ ಕಟ್ಟಲಾಗದು. ದೇಶದ ಕೋಟ್ಯಂತರ ಜನರ ಪರವಾಗಿ ಈ ಸಂದರ್ಭದಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾಗಿರುವುದು ಸರಕಾರದ ಕರ್ತವ್ಯ ಎಂದು ಭಾವಿಸಿದ್ದೇವೆ ಎಂದು ಸಿದ್ದರಾಮಯ್ಯ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಜತೆಗೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶ ಸೇವೆ, ಸಮರ್ಪಣ ಭಾವವನ್ನು ಗೌರವದಿಂದ ಸ್ಮರಿಸುವುದಾಗಿಯೂ ಹಾಗೂ ಅವರಿಗೆ ಗೌರವ ನಮನ ಸಲ್ಲಿಸುವುದಾಗಿಯೂ ಪೋಸ್ಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ