ಬೆಂಗಳೂರು: ರಾಜ್ಯ ಕಂಡ ಅಪರೂಪದ ರಾಜಕಾರಣಿಗಳಲ್ಲಿ ಒಬ್ಬರಾದ ದಿ. ದೇವರಾಜ ಅರಸು ಜನ್ಮ ದಿನದಂದು ಅವರ ಆದರ್ಶಗಳ ಜೊತೆಗೇ ನೆನಪಾಗುವುದು ಅವರು ಬಳಸುತ್ತಿದ್ದ ಬೆಂಜ್ ಕಾರು. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಂದ ಉಡುಗೊರೆಯಾಗಿ ಪಡೆದಿದ್ದ ಈ ಕಾರಿಗೆ ಇದೀಗ 50 ವರ್ಷಗಳು ತುಂಬಿದ್ದು, ಅರಸು ಅವರ ಕಾರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧ ರೌಂಡ್ ಹಾಕುವ ಮೂಲಕ ಸಂಭ್ರಮಿಸಿದರು.
ಇಂದು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಅರಸು ಅವರ ಆದರ್ಶ ಹಾಗೂ ನಾಡಿಗೆ ನೀಡಿದ ಕೊಡುಗೆಗಳನ್ನು ಸಿಎಂ ಸ್ಮರಿಸಿದರು.
ಕಾರ್ಯಕ್ರಮದ ಅಂಗವಾಗಿ ಅರಸು ಬಳಸುತ್ತಿದ್ದ ಎಂಇಒ 777 ನೋಂದಣಿ ಸಂಖ್ಯೆಯ ಮರ್ಸಿಡಿಸ್ ಬೆಂಜ್ ಕಾರನ್ನು ಕೂಡ ವಿಧಾನಸೌಧದ ಬಳಿ ತರಲಾಗಿತ್ತು. ಆ ಕಾರಿನಲ್ಲಿಯೇ ಸಿಎಂ ಸಿದ್ದರಾಮಯ್ಯ ವಿಧಾನಸೌಧ ಸುತ್ತಿದರು. ಈ ಹಿಂದೆಯೂ 2013-2018 ರವರೆಗೂ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಆಗಲೂ ಕೂಡ ಅರಸು ಜನ್ಮದಿನದಂದು ಇದೇ ಕಾರಿನಲ್ಲಿ ವಿಧಾನಸೌಧ ಸುತ್ತಿ ಸಂಭ್ರಮಿಸಿದ್ದರು. ಆದರೆ ಈ ಬಾರಿಯ ಅರಸು ಕಾರು ಸವಾರಿ ವಿಶೇಷವಾಗಿತ್ತು, ಈ ಕಾರಿಗೆ 50 ವರ್ಷವಾಗಿದೆ. ಈ ಸಂದರ್ಭದಲ್ಲಿ ಅರಸು ಕಾರಿನಲ್ಲಿ ಪ್ರಯಾಣಿಸಿದ್ದಕ್ಕೆ ಸಿಎಂ ಹರ್ಷ ವ್ಯಕ್ತಪಡಿಸಿದರು.
-
ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ @siddaramaiah ಅವರು ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಬಳಿಕ ಅರಸು ಅವರ ಕಾರಿನಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣಕ್ಕೆ ತೆರಳಿ ಸದ್ಭಾವನಾ ದಿನಾಚರಣೆಯ… pic.twitter.com/031FXr43r4
— CM of Karnataka (@CMofKarnataka) August 20, 2023 " class="align-text-top noRightClick twitterSection" data="
">ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ @siddaramaiah ಅವರು ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಬಳಿಕ ಅರಸು ಅವರ ಕಾರಿನಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣಕ್ಕೆ ತೆರಳಿ ಸದ್ಭಾವನಾ ದಿನಾಚರಣೆಯ… pic.twitter.com/031FXr43r4
— CM of Karnataka (@CMofKarnataka) August 20, 2023ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ @siddaramaiah ಅವರು ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಬಳಿಕ ಅರಸು ಅವರ ಕಾರಿನಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣಕ್ಕೆ ತೆರಳಿ ಸದ್ಭಾವನಾ ದಿನಾಚರಣೆಯ… pic.twitter.com/031FXr43r4
— CM of Karnataka (@CMofKarnataka) August 20, 2023
ಅರಸುಗೆ ಇಂದಿರಾ ಗಾಂಧಿ ಗಿಫ್ಟ್: 1972ರ ಚುನಾವಣೆಯಲ್ಲಿ ನಡೆದಿದ್ದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ದೇವರಾಜ ಅರಸು ಅವರು ಅಭೂತಪೂರ್ವ ಗೆಲುವು ಸಾಧಿಸಿದ್ದರು. ಇದರಿಂದಾಗಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಸಂತಸಗೊಂಡು ವಿದೇಶದಿಂದ ಮರ್ಸಿಡಿಸ್ ಬೆಂಜ್ ಕಾರು ತರಿಸಿ ಸರ್ಕಾರಕ್ಕೆ ಕೊಡುಗೆಯಾಗಿ ನೀಡಿದ್ದರು. ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪ್ರತಿನಿತ್ಯ ಈ ಕಾರನ್ನೇ ಬಳಸುತ್ತಿದ್ದರು.
ಅರಸು ನಂತರ ಬಂದ ಮುಖ್ಯಮಂತ್ರಿಗಳು ಹೊಸದಾಗಿ ಖರೀದಿಸಿದ ಸರ್ಕಾರಿ ಕಾರನ್ನು ಬಳಸಲು ಶುರು ಮಾಡಿದರು. ಹಾಗಾಗಿ ಮರ್ಸಿಡಿಸ್ ಬೆಂಜ್ ಕಾರನ್ನು ಹರಾಜು ಹಾಕಲಾಯಿತು. ಹರಾಜು ಪ್ರಕ್ರಿಯೆಯಲ್ಲಿ ಅರಸು ಅವರ ಆಪ್ತ ಜಿ.ಎಂ. ಬಾಬು ಈ ಕಾರು ಖರೀದಿಸಿದ್ದು, ಇಲ್ಲಿಯವರೆಗೂ ಬಹಳ ಅಚ್ಚುಕಟ್ಟಾಗಿ ಕಾಪಾಡಿಕೊಂಡು ಬಂದಿದ್ದಾರೆ. ಇಂದಿಗೂ ಕೂಡ ಈ ಕಾರು ಫುಲ್ ಕಂಡೀಷನ್ನಲ್ಲಿದೆ. ಪ್ರತಿ ವರ್ಷ ಅರಸು ಜನ್ಮದಿನದಂದು ವಿಧಾನಸೌಧದ ದೇವರಾಜ ಅರಸು ಪ್ರತಿಮೆ ಮುಂದೆ ಕಾರನ್ನು ಪ್ರದರ್ಶಿಸಲಾಗುತ್ತಿದೆ. ಅದರಂತೆ ಈ ವರ್ಷವೂ ಪ್ರದರ್ಶನಕ್ಕೆ ಇಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಮಾತ್ರ ಎಂದಿನಂತೆ ಕಾರಿನಲ್ಲಿ ಒಂದು ರೌಂಡ್ ಹಾಕಿದರು.
ಸದ್ಭಾವನಾ ದಿನ ಪ್ರತಿಜ್ಞಾವಿಧಿ ಬೋಧನೆ: ಸದ್ಭಾವನಾ ದಿನದ ಅಂಗವಾಗಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಸಚೇತಕ ಅಶೋಕ್ ಪಟ್ಟಣ್ಣವರ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಡಿಪಿಎಆರ್ ಕಾರ್ಯದರ್ಶಿ ಶ್ರೀಕರ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನೆರೆದಿದ್ದ ಎಲ್ಲರೂ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಇದನ್ನೂ ಓದಿ: ರಾಜೀವ್ ಗಾಂಧಿ 79ನೇ ಜನ್ಮದಿನ: 'ವೀರ ಭೂಮಿ'ಗೆ ಸೋನಿಯಾ, ಪ್ರಿಯಾಂಕಾ, ಖರ್ಗೆ ಪುಷ್ಪ ನಮನ