ETV Bharat / state

ಗಣರಾಜ್ಯೋತ್ಸದಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ಕೋರಿ ಕೇಂದ್ರಕ್ಕೆ ಪತ್ರ: ಸಿಎಂ ಸಿದ್ದರಾಮಯ್ಯ - ಗಣರಾಜ್ಯೋತ್ಸವ ಪೆರೇಡ್​

ಗಣರಾಜ್ಯೋತ್ಸವದಲ್ಲಿ ನಡೆಯುವ ಪಥಸಂಚಲನದಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ ನಿರಾಕರಿಸಿರುವುದರ ಕುರಿತು ಸಿಎಂ ಪ್ರತಿಕ್ರಿಯಿಸಿದ್ದಾರೆ.

CM Siddaramaiah say he will write a letter to Centre regarding Tableau matter

author img

By ETV Bharat Karnataka Team

Published : Jan 10, 2024, 2:47 PM IST

ಬೆಂಗಳೂರು: ಗಣರಾಜ್ಯೋತ್ಸದಲ್ಲಿ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ನಿರಾಕರಿಸಿರುವ ವಿಚಾರ ಕುರಿತು ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷವೂ ಪಥ ಸಂಚಲನದಲ್ಲಿ ನಮ್ಮ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಣೆ ಮಾಡಲಾಗಿತ್ತು. ಇದೀಗ ಮತ್ತೆ ಘಟನೆ ಮರುಕಳಿಸಿದೆ. ಕೇಂದ್ರದ ಈ ನಡೆಯೂ ಕರ್ನಾಟಕಕ್ಕೆ ಮಾಡಿದ ಅನ್ಯಾಯ ಹಾಗೂ ಕನ್ನಡಿಗರಿಗೆ ಮಾಡಿದ ಅವಮಾನ. ಇದೇ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.

ಸ್ತಬ್ಧ ಚಿತ್ರ ನಿರಾಕರಿಸಿದ ಕುರಿತು ನಿನ್ನೆ ಎಕ್ಸ್ ಪೋಸ್ಟ್ ಮಾಡಿದ್ದ ಸಿಎಂ, ಜನವರಿ 26ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅವಕಾಶ ನಿರಾಕರಣೆ ಮಾಡಿದೆ. ಆ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದಿದ್ದಾರೆ.

ಕೇಂದ್ರದಿಂದ ರಾಜಕೀಯ ಪ್ರಹಾರ: ರಾಜ್ಯದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್, ಕಿತ್ತೂರು ಚೆನ್ನಮ್ಮ, ಬ್ರಾಂಡ್ ಬೆಂಗಳೂರು ಹಾಗೂ ಕರ್ನಾಟಕದ ನೈಸರ್ಗಿಕ ವ್ಯವಸ್ಥೆಯ ಕುರಿತಾದ 4 ಸ್ತಬ್ಧಚಿತ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಇದಕ್ಕೆ ಅವಕಾಶ ನೀಡಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರ ಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕ್​, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆ ಹೆಜ್ಜೆಗೂ ಕೇಂದ್ರ ಸರ್ಕಾರ ಕನ್ನಡಿಗರ ಮೇಲೆ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ ಎಂದು ಆರೋಪಿಸಿದ್ದರು.

ಇದರ ಜೊತೆಗೆ ಇದೀಗ ಸ್ತಬ್ಧ ಚಿತ್ರ ಪ್ರದರ್ಶನದಲ್ಲಿ ರಾಜ್ಯಕ್ಕೆ ಅವಕಾಶ ನಿರಾಕರಿಸಿ, ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ. ಕನ್ನಡ - ಕನ್ನಡಿಗ ಮತ್ತು ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿ ಹೋಗಿದ್ದಾರೆ. ಅವರ ತಾಳ್ಮೆ ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು. ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯ ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರದಿಂದ ದುರುದ್ದೇಶವಿಲ್ಲ; ರಾಜ್ಯದ ಟ್ಯಾಬ್ಲೋ ಕೈಬಿಟ್ಟದ್ದನ್ನು ಸಮರ್ಥಿಸಿಕೊಂಡ ಬಿ ವೈ ವಿಜಯೇಂದ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.