ETV Bharat / state

'ಹಿಂದುಳಿದವರಿಗೆ ಸಮಾನತೆ ದೊರೆತಾಗ ಮಾತ್ರ ಸ್ವಾತಂತ್ರ್ಯ ಸಾರ್ಥಕ': ಸಿಎಂ ಸಿದ್ದರಾಮಯ್ಯ - Siddaramaiah on Equality

'ನಿಡುಮಾಮಿಡಿ ಶ್ರೀ ಪೀಠಾರೋಹಣ 33 ಸಮಾರಂಭ'ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾನತೆ ಪರಿಕಲ್ಪನೆ ಕುರಿತು ಮಾತನಾಡಿದ್ದಾರೆ.

CM Siddaramaiah Speaks on Equality concept
ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Dec 30, 2023, 2:10 PM IST

ಬೆಂಗಳೂರು: 'ಸಮಾಜದ ಹಿಂದುಳಿದವರಿಗೆ ಆರ್ಥಿಕ-ಸಾಮಾಜಿಕ ಸಮಾನತೆ ದೊರೆತಾಗ ಮಾತ್ರ ಸ್ವಾತಂತ್ರ್ಯ ಸಾರ್ಥಕ ಆಗಲಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದ್ದಾರೆ. ನಗರದಲ್ಲಿಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ 'ನಿಡುಮಾಮಿಡಿ ಶ್ರೀ ಪೀಠಾರೋಹಣ 33 ಸಮಾರಂಭ' ಉದ್ಘಾಟಿಸಿ, 'ಹೋರಾಟಕ್ಕೆ ಸಾವಿಲ್ಲ', 'ಓಲೆ ಒಳದನಿ' ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಸಿಎಂ, ಸ್ವಾತಂತ್ರ್ಯ ಸಾರ್ಥಕವಾಗುವ ಅಂಶವನ್ನು ಗಮನದಲ್ಲಿಟ್ಟುಕೊಂಡು ಕಾರ್ಯ ನಿರ್ವಹಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.

ಮನುಷ್ಯನ ಸ್ವಾರ್ಥದಿಂದ ಸಮಾಜದಲ್ಲಿ ಅಸಮಾನತೆ ಉಂಟಾಗಿದೆ. ಹಾಗಾಗಿ, ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ನೀಗಿಸದೇ ಹೋದಲ್ಲಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದರೂ ಯಾವುದೇ ಪ್ರಯೋಜನವಾಗುವುದಿಲ್ಲ. ಸಾಮಾಜಿಕ ನ್ಯಾಯದ ತಳಹದಿಯ ಪ್ರಜಾಪ್ರಭುತ್ವವಾಗಿ ನಿಲ್ಲಬೇಕು ಎಂದು ಹೇಳಿದರು.

CM Siddaramaiah Speaks on Equality concept
'ನಿಡುಮಾಮಿಡಿ ಶ್ರೀ ಪೀಠಾರೋಹಣ 33 ಸಮಾರಂಭ'

ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ದುರ್ಬಲ ವರ್ಗದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಮಾಜ ಬದಲಾವಣೆಯಾಗಬೇಕು. ಸಮಾಜದಲ್ಲಿನ ವೈರುಧ್ಯಗಳು, ಜಾತೀಯತೆ, ಅಸಮಾನತೆಗಳು ತೊಲಗಬೇಕು. ಆಗ ಮಾತ್ರ ಸಮಾಜ ಪರಿವರ್ತನೆಯಾಗಲು ಸಾಧ್ಯ. ಸಮಸಮಾಜ ನಿರ್ಮಾಣವಾಗಲು ಅಸಮಾನತೆ ತೊಲಗಿಸುವುದೇ ಮುಖ್ಯ ಉದ್ದೇಶವಾಗಿರಬೇಕು ಎಂದು ಹೇಳಿದರು.

ಮನುಷ್ಯತ್ವ ಅಂತಿಮ ಗುರಿಯಾಗಬೇಕು. ಅಲ್ಪಮಾನವರಾಗದೇ, ವಿಶ್ವಮಾನವರಾಗುವತ್ತ ನಮ್ಮೆಲ್ಲರ ಪ್ರಯತ್ನವಿರಬೇಕು. ಸಾಮಾಜಿಕ ಹಾಗೂ ಆರ್ಥಿಕ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ಚಲನೆ ಉಂಟಾಗುತ್ತದೆ. ಸಮಾಜದಲ್ಲಿ ಬದಲಾವಣೆ ಆಗುವವರೆಗೂ ಹೋರಾಟ ನಡೆಸುವ ಗುರಿಯಿಂದಲೇ 'ಹೋರಾಟಕ್ಕೆ ಸಾವಿಲ್ಲ' ಎಂಬ ಕೃತಿಯನ್ನು ಹೊರತರಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟವನ್ನು ಹತ್ತಿಕ್ಕಬಾರದು. ಆದರೆ, ಹೋರಾಟಗಳು ಅಹಿಂಸಾತ್ಮಕವಾಗಿರಬೇಕು ಎಂದರು.

ಇದನ್ನೂ ಓದಿ: ರಾಮಮಂದಿರದಲ್ಲಿ ಪ್ರತಿಷ್ಠಾಪಿಸುವ ಬಾಲರಾಮ ವಿಗ್ರಹ ಆಯ್ಕೆ ; ಕರ್ನಾಟಕದ ಮೂರ್ತಿಗೆ ಸ್ಥಾನ?

ಅಲ್ಲದೇ, ಚಿಕ್ಕಬಳ್ಳಾಪುರ ನಿಡುಮಾಮಿಡಿ ಮಠದ ವತಿಯಿಂದ ಧಾರ್ಮಿಕ ಚಟುವಟಿಕೆಗಳು, ಶಿಕ್ಷಣ ಸಂಸ್ಥೆಗಳು ನಡೆಯುತ್ತವೆ. ಮಠವು ಯಾವುದೇ ಜಾತಿ, ಧರ್ಮ, ಸಂಸ್ಕೃತಿಗಳಿಗೆ ಮೀಸಲಾಗದ ಜಾತ್ಯಾತೀತವಾದ ಮಾನವ ಧರ್ಮ ಪೀಠ ಎನಿಸಿಕೊಂಡಿದೆ. ಸ್ವಾಮೀಜಿಗಳು ನಿರ್ಭೀತಿಯಿಂದ ನಿಷ್ಕಲ್ಮಶವಾಗಿ ಜಾತ್ಯಾತೀತ ಮಾನವೀಯ ಸಮಾಜ ಸ್ಥಾಪನೆಯಾಗಬೇಕೆಂಬ ಆಶಯವನ್ನು ಹೊಂದಿದ್ದು, ತಮ್ಮ ಜೀವನದುದ್ದಕ್ಜೂ ಆ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಮಾನವ ಧರ್ಮ ಸ್ಥಾಪಿಸುವ ಶ್ರೀಮಠದ ಗುರಿ ಈಡೇರಿಕೆಗೆ ಸರ್ಕಾರ ಎಲ್ಲಾ ರೀತಿಯ ಸಹಕಾರವನ್ನು ನೀಡಲಿದೆ ಎಂದರು.

ಕಾರ್ಯಕ್ರಮದಲ್ಲಿ ವೀರಭದ್ರ ಚನ್ನಮಲ್ಲ ದೇಶೀಕೇಂದ್ರ ಮಹಾಸ್ವಾಮೀಜಿ, ಸಾರಂಗಧರ ದೇಶೀಕೆಂದ್ರ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಸಂಸ್ಕೃತಿ ಚಿಂತಕರಾದ ರಂಜಾನ್ ದರ್ಗಾ, ಲೇಖಕ ಡಾ. ನಟಾಜ್ ಹುಳಿಯಾರ್ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.