ETV Bharat / state

ಇನ್ಮುಂದೆ ರಾಜ್ಯದೆಲ್ಲೆಡೆ ಕೃಷಿ ಪಂಪ್​ಸೆಟ್​ಗಳಿಗೆ ಏಳು ತಾಸು ನಿರಂತರ ವಿದ್ಯುತ್ ಪೂರೈಕೆ: ಸಿಎಂ ಘೋಷಣೆ

ರಾಜ್ಯದೆಲ್ಲೆಡೆ ಕೃಷಿ ಪಂಪ್​ಸೆಟ್​ಗಳಿಗೆ ಏಳು ತಾಸು ನಿರಂತರ ವಿದ್ಯುತ್ ಪೂರೈಕೆ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Nov 6, 2023, 3:22 PM IST

ಬೆಂಗಳೂರು : ಕೃಷಿ ಪಂಪ್​ಸೆಟ್​ಗೆ ಇನ್ನು ಮುಂದೆ ನಿರಂತರ 7 ತಾಸು ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆ ಪರಿಶೀಲನೆ ನಡೆಸಿ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮೂರು ವಾರಗಳ ಹಿಂದೆ ಇಂಧನ ಇಲಾಖೆಯಲ್ಲಿ ಪರಿಶೀಲನೆ ಮಾಡಲಾಗಿತ್ತು. ಆಗಲೇ ಕೃಷಿ ಪಂಪ್​ಸೆಟ್​ಗೆ ಏಳು ಗಂಟೆ ವಿದ್ಯುತ್ ಕೊಡುತ್ತೇವೆ ಎಂದು ಭರವಸೆ ಕೊಟ್ಟಿದ್ದೆವು. ಆಗ ನಮಗೆ ಐದು ಗಂಟೆ ವಿದ್ಯುತ್ ಕೊಟ್ಟರೆ ಸಾಕು ಎಂದು ಕೆಲವರು ಹೇಳಿದ್ದರು. ಅದರ ಪ್ರಕಾರ ಐದು ಗಂಟೆ ವಿದ್ಯುತ್ ಕೊಡಲು ಸೂಚಿಸಿದ್ದೆ. ಬಳಿಕ ಐದು ಗಂಟೆ ಸಾಕಾಗಲ್ಲ ಏಳು ಗಂಟೆ ಕೊಡಬೇಕು ಎಂದು ಕೆಲವರು ಆಗ್ರಹಿಸಿದ್ದಾರೆ. ಅದರಂತೆ ಯಾದಗಿರಿ, ಕೊಪ್ಪಳ, ರಾಯಚೂರಿನಲ್ಲಿ ಏಳು ಗಂಟೆ ವಿದ್ಯುತ್ ಕೊಡಲು ಸೂಚನೆ ನೀಡಿದ್ದೆ. ಈಗ ವಿದ್ಯುತ್ ಉತ್ಪಾದನೆಯಲ್ಲಿ ಸುಧಾರಣೆಯಾಗಿದ್ದು, ರಾಜ್ಯದ ಉಳಿದ ಎಲ್ಲಾ ಕಡೆಯೂ ಏಳು ಗಂಟೆ ವಿದ್ಯುತ್ ಕೊಡಲು ನಿರ್ಧರಿಸಿದ್ದೇವೆ ಎಂದು ಸಿಎಂ ಇದೇ ವೇಳೆ ಸ್ಪಷ್ಟಪಡಿಸಿದರು.

ರಾಯಚೂರು, ಬಳ್ಳಾರಿ ಉಷ್ಣವಿದ್ಯುತ್ ಘಟಕಗಳಲ್ಲಿ ಹೆಚ್ಚಿನ ವಿದ್ಯುತ್ ಉತ್ಪಾದನೆ ಆಗುತ್ತಿದೆ. ಸುಮಾರು 1,000 ಮೆ.ವಾ.ರಷ್ಟು ವಿದ್ಯುತ್ ಉತ್ಪಾದನೆ ಹೆಚ್ಚಾಗಿದೆ. 2,400 ಮೆ.ವ್ಯಾ.ರಿಂದ 3,200 ಮೆ.ವ್ಯಾ. ವರೆಗೆ ವಿದ್ಯುತ್ ಉತ್ಪಾದನೆ ಹೆಚ್ಚಾಗಿದೆ. 450 ಮೆ.ವ್ಯಾ. ಕೊ ಜೆನ್ ರಿಂದ ವಿದ್ಯುತ್ ಲಭ್ಯವಾಗುತ್ತಿದೆ. ಉತ್ತರ ಪ್ರದೇಶ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಿಂದ ವಿನಿಮಯ ರೂಪದಲ್ಲಿ ವಿದ್ಯುತ್‌ ಪಡೆಯಲಾಗುತ್ತಿದೆ ಎಂದು ಸಿಎಂ ಮಾಹಿತಿ ನೀಡಿದರು.

7 ಗಂಟೆ ನಿರಂತರ ವಿದ್ಯುತ್​ಗಾಗಿ 600 ಮೆ.ವ್ಯಾ/ಗಂಟೆ ವಿದ್ಯುತ್ ಅಗತ್ಯ: ವಿವಿಧ ವಿದ್ಯುತ್‌ ಸರಬರಾಜು ಕಂಪನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ ಐದರಿಂದ ಏಳು ಗಂಟೆಗಳ ಅವಧಿಗೆ ನಿರಂತರ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಐಪಿ ಸೆಟ್‌ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್‌ ಒದಗಿಸಲು 600 ಮೆಗಾವ್ಯಾಟ್‌/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್‌ ಯುನಿಟ್‌ಗಳ ಅಗತ್ಯವಿದೆ.

ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ನಿತ್ಯ ಏಳು ತಾಸು ವಿದ್ಯುತ್‌ ನೀಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಅನುದಾನದ ಉಳಿತಾಯ, ಮರು ಹಂಚಿಕೆ ಮೂಲಕ ಈ ವೆಚ್ಚ ಭರಿಸಲಾಗುವುದು. ಬಜೆಟ್​ನಲ್ಲಿ ಸುಮಾರು 13,000 ಕೋಟಿ ರೂ. ಇಂಧನ ಇಲಾಖೆಗೆ ಹಂಚಿಕೆ ಮಾಡಲಾಗಿತ್ತು. ಈಗ ವಿದ್ಯುತ್ ಖರೀದಿಗಳ ಮೂಲಕ ಇನ್ನೂ ಸ್ವಲ್ಪ ಹೆಚ್ಚು ವೆಚ್ಚ ಆಗಬಹುದು ಎಂದು ಇದೇ ವೇಳೆ ಸಿಎಂ ತಿಳಿಸಿದರು.

ಸೆಕ್ಷನ್‌ 11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್‌ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್‌ ಪಡೆಯಲಾಗುತ್ತಿದೆ. ಆ ಮೂಲಕ ವಿದ್ಯುತ್‌ ವಿತರಣೆ ಸಹಜ ಸ್ಥಿತಿಗೆ ಬಂದಿದೆ. ಉಡುಪಿ ಥರ್ಮಲ್ ಘಟಕದಿಂದ 1000 ಮೆ.ವಾ. ವಿದ್ಯುತ್ ಖರೀದಿ ಮಾಡಲಿದ್ದು, ಪ್ರತಿ ಯುನಿಟ್ ಗೆ 6.50 ರೂ. ನಂತೆ ವಿದ್ಯುತ್ ಖರೀದಿ ಮಾಡುತ್ತಿದ್ದೇವೆ. ಉಳಿದಂತೆ ಖಾಸಗಿಯವರಿಂದ ಯಾವುದೇ ವಿದ್ಯುತ್ ಖರೀದಿ ಮಾಡುತ್ತಿಲ್ಲ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಅವರು ತಿಳಿಸಿದರು.

ಕುಟೀರ, ಭಾಗ್ಯ ಹಾಗೂ ಅಮೃತ ಜ್ಯೋತಿಯ 389.66 ಕೋಟಿ ಬಾಕಿ ಮನ್ನಾ: ಭಾಗ್ಯ ಜ್ಯೋತಿ, ಕುಟಿರ ಜ್ಯೋತಿ, ಅಮೃತ ಜ್ಯೋತಿ ಸಹ ಗೃಹ ಜ್ಯೋತಿ ಯೋಜನೆಗೆ ವಿಲೀನ ಮಾಡಲಾಗಿದೆ. ಇದರೊಂದಿಗೆ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಗೃಹಜ್ಯೋತಿಯ ನೇರ ಲಾಭ ದಕ್ಕಲಿದೆ. ಸದ್ಯ ಜಾರಿಯಲ್ಲಿರುವ ಭಾಗ್ಯಜ್ಯೋತಿ ಮತ್ತು ಕುಟೀರ, ಅಮೃತ ಜ್ಯೋತಿ ಯೋಜನೆಗಳ ಫಲಾನುಭವಿ ಕುಟುಂಬಗಳಿಗೆ 40 ಯೂನಿಟ್‌ ವಿದ್ಯುತ್‌ ಉಚಿತವಾಗಿ ನೀಡಲಾಗುತ್ತಿತ್ತು. ಈಗ ಈ ಮೂರು ಯೋಜನೆಗಳ ಫಲಾನುಭವಿಗಳನ್ನು ಗೃಹಜ್ಯೋತಿ ಯೋಜನೆಯಡಿ ತರಲಾಗಿದ್ದು, ರಾಜ್ಯದ ಸರಾಸರಿ ವಿದ್ಯುತ್‌ ಬಳಕೆಯಾದ 53 ಯೂನಿಟ್‌ ಹಾಗೂ ಶೇ.10 ರಷ್ಟು ಹೆಚ್ಚುವರಿ ಯೂನಿಟ್‌ ವಿದ್ಯುತ್‌ ಉಚಿತವಾಗಿ ನೀಡಲಾಗುವುದು ಎಂದು ಸಿಎಂ ತಿಳಿಸಿದರು.

ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿಗಳಡಿ 389.66 ಕೋಟಿ ರೂ. ಬಾಕಿ ಉಳಿದಿತ್ತು. ಇವರ ಬಾಕಿ ಹಣವನ್ನು ನಾವು ಒನ್ ಟೈಂ ಮನ್ನಾ ಮಾಡಿದ್ದೇವೆ. ಸರ್ಕಾರಿ ಪ್ರಾಥಮಿಕ ಸ್ಕೂಲ್, ಜೂನಿಯರ್ ಕಾಲೇಜುಗಳಿಗೆ ಉಚಿತ ವಿದ್ಯುತ್, ನೀರು ನೀಡುವುದಾಗಿ ನ.1ರಂದೇ ಘೋಷಿಸಿದ್ದೆ. ಸರ್ಕಾರವೇ ಅದರ ವೆಚ್ಚ ಭರಿಸಲಿದೆ ಎಂದರು.

ಪ್ರಸಕ್ತ 2022 ಸಾಲಿಗೆ ಹೋಲಿಸಿದರೆ 2023ರಲ್ಲಿ ವಿದ್ಯುತ್‌ ಬೇಡಿಕೆ ಸರಾಸರಿ ಶೇ. 43 ರಷ್ಟು ಹೆಚ್ಚಿದೆ. ಅಕ್ಟೋಬರ್‌ ತಿಂಗಳಲ್ಲಿ 15,978 ಮೆಗಾವ್ಯಾಟ್‌ ಬೇಡಿಕೆ ದಾಖಲಾಗಿದೆ. ವಿದ್ಯುತ್‌ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 45ರಷ್ಟು ಹೆಚ್ಚಾಗಿದೆ. ಕೃಷಿ ಬಳಕೆಯಲ್ಲಿ ಶೇ.55ರಿಂದ 119 ರಷ್ಟು ಹೆಚ್ಚಳವಾಗಿದೆ. ಇತರ ವಿಭಾಗಗಳಲ್ಲಿ ಶೇ. 9 ರಿಂದ 14 ರಷ್ಟು ಹೆಚ್ಚಳವಾಗಿದೆ. ಮಳೆ ಕೊರತೆ, ವಾಡಿಕೆಗಿಂತ ಮೊದಲೇ ಐಪಿ ಸೆಟ್​ಗಳ ಬಳಕೆ ಪ್ರಾರಂಭವಾಗಿರುವುದು ಹಾಗೂ ಕೋವಿಡ್‌ 19 ರ ನಂತರದ ಆರ್ಥಿಕ ಪುನಶ್ಚೇತನ ಇದಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ರೈತರಿಗೆ ನಿತ್ಯ 5 ತಾಸು ವಿದ್ಯುತ್ ಪೂರೈಕೆ ಮಾಡಿ, ಲೋಡ್ ಶೆಡ್ಡಿಂಗ್ ಆಗದಂತೆ ಎಚ್ಚರಿಕೆ ವಹಿಸಿ: ಸಿಎಂ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.