ETV Bharat / state

ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್: ಡಿಕೆಶಿ ಸೇರಿ 16 ಸಚಿವರಿಗೆ ಆಹ್ವಾನ

ತಮ್ಮ ಸರ್ಕಾರಿ ನಿವಾಸ ಕಾವೇರಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಸಂಪುಟ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ಏರ್ಪಡಿಸಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

meeting at cm siddaramaiah house
ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್
author img

By ETV Bharat Karnataka Team

Published : Nov 4, 2023, 10:18 AM IST

ಬೆಂಗಳೂರು: ಮುಂದಿನ‌ ಐದು ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಇದೀಗ ತಮ್ಮ ಸರ್ಕಾರಿ ನಿವಾಸ ಕಾವೇರಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಸಂಪುಟ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ಏರ್ಪಡಿಸಿದ್ದಾರೆ.

16 ಮಂದಿ ಸಚಿವರು ಉಪಹಾರ ಕೂಟದಲ್ಲಿ ಇಂದು ಭಾಗಿಯಾಗಲಿದ್ದಾರೆ. ಉಳಿದ 16 ಮಂದಿ ಸಚಿವರಿಗೆ ಮುಂದಿನ ಶನಿವಾರ ಉಪಹಾರ ಮೀಟಿಂಗ್ ನಿಗದಿ ಮಾಡಲಾಗಿದೆ ಎಂದು ಹೇಳಲಾಗಿದೆ. ಸಿಎಂ ಗದ್ದುಗೆ ಗುದ್ದಾಟದ ಗೊಂದಲದ ಮಧ್ಯೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ಕರೆದಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ತಮ್ಮ ಹೇಳಿಕೆಯಿಂದ ಉಂಟಾದ ಗೊಂದಲ ನಿವಾರಣೆ ಸೇರಿ ಇತರ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಈ ಉಪಹಾರದ ಸಭೆ ನಡೆಸುತ್ತಿದ್ದಾರೆ ಎನ್ನಲಾಗ್ತಿದೆ.

ಇಂದು ನಡೆಯುತ್ತಿರುವ ಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್​​ನಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಗೃಹ ಸಚಿವ ಡಾ. ಜಿ ಪರಮೇಶ್ವರ್, ಸಚಿವರಾದ ಬೈರತಿ ಸುರೇಶ್, ಕೃಷ್ಣ ಬೈರೇಗೌಡ, ಜಮೀರ್ ‌ಅಹಮದ್ ಖಾನ್, ಎಂ ಬಿ ಪಾಟೀಲ್, ಹೆಚ್ ಸಿ ಮಹದೇವಪ್ಪ, ಪ್ರಿಯಾಂಕ್​ ಖರ್ಗೆ, ರಾಮಲಿಂಗಾ ರೆಡ್ಡಿ , ಕೆ ಎನ್ ರಾಜಣ್ಣ, ದಿನೇಶ್ ಗುಂಡೂರಾವ್ ಮತ್ತು ಕೆ ಜೆ ಜಾರ್ಜ್ ಪಾಲ್ಗೊಳ್ಳಲಿದ್ದಾರೆ.

ಇನ್ನು ಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್​​ಗೆ ಸಚಿವ ಸತೀಶ್ ಜಾರಕಿಹೊಳಿ ಅನಾರೋಗ್ಯದ ಕಾರಣ ಗೈರಾಗಲಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲೇ ಇರುವ ಸಚಿವರು, ಸಭೆಗೆ ಬರಲು ಸಾಧ್ಯವಿಲ್ಲ ಎಂಬ ಮಾಹಿತಿ‌ಯನ್ನು ಸಿಎಂಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸಭೆಯಲ್ಲಿ ಪ್ರಮುಖವಾಗಿ ಸಿಎಂ ಗದ್ದುಗೆ ಗೊಂದಲ, ಬಹಿರಂಗ ಹೇಳಿಕೆ, ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚೆ ನಡೆಸುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆ ಸಂಬಂಧ ಕೆಪಿಸಿಸಿ ಅಧ್ಯಕ್ಷರು ನೀಡಿದ್ದ ಜವಾಬ್ದಾರಿಯನ್ನೂ ಸರಿಯಾಗಿ ಸಚಿವರು ನಿರ್ವಹಿಸಿಲ್ಲ ಎಂಬ ಆರೋಪವೂ ಕೇಳಿಬಂದಿತ್ತು. ಕಾಟಾಚಾರಕ್ಕೆ ಸಮೀಕ್ಷೆ ನಡೆಸಿ ಆಕಾಂಕ್ಷಿತ ಅಭ್ಯರ್ಥಿಗಳ ವರದಿ ನೀಡಿದ್ದರು ಎಂಬ ಕೂಗು ಇದೆ. ಸಚಿವರ ನಡೆ ಬಗ್ಗೆ ರಣದೀಪ ಸಿಂಗ್ ಸುರ್ಜೇವಾಲ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು.

ಮತ್ತೊಮ್ಮೆ ಕ್ಷೇತ್ರದ ಶಾಸಕರು, ಜಿಲ್ಲಾಧ್ಯಕ್ಷರು, ಮಾಜಿ‌ ಶಾಸಕರು, ಪ್ರಮುಖ ನಾಯಕರು, ಪದಾಧಿಕಾರಿಗಳ ಸಭೆ ನಡೆಸಿ ‌ವರದಿ ಸಿದ್ಧಪಡಿಸಲು ಸೂಚಿಸಲಾಗಿದೆ. ಸಚಿವರಿಗೆ ನೀಡಿದ ಟಾಸ್ಕ್ ಬಗ್ಗೆ ಉಪಹಾರ ಕೂಟದ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಮುಂಬರುವ ಲೋಕಸಭಾ ಚುನಾವಣೆ, ಕಾಂಗ್ರೆಸ್ ಕಾರ್ಯತಂತ್ರ, ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆಯೂ ಚರ್ಚೆ ಸಾಧ್ಯತೆ ಇದೆ.

ಇದನ್ನೂ ಓದಿ: ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಜೆಡಿಎಸ್ ಮಹತ್ವದ ಸಭೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.