ETV Bharat / state

ಬೆಂಗಳೂರು - ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಅಪಘಾತ ಹೆಚ್ಚಳ: ಇಂದು ಸಿಎಂ ಸಿದ್ದರಾಮಯ್ಯ ಪರಿಶೀಲನೆ - ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರು - ಮೈಸೂರು ಎಕ್ಸ್​ಪ್ರೆಸ್ ವೇ ಪರಿಶೀಲನೆ ನಡೆಸಲಿದ್ದಾರೆ. ಅಪಘಾತ ತಡೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಲಿದ್ದಾರೆ.

cm-siddaramaiah-to-inspect-bengaluru-mysore-expressway-on-saturday
ಬೆಂಗಳೂರು - ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಅಪಘಾತ ಹೆಚ್ಚಳ : ಶನಿವಾರ ಸಿಎಂ ಸಿದ್ದರಾಮಯ್ಯ ಪರಿಶೀಲನೆ
author img

By

Published : Jul 28, 2023, 11:05 PM IST

Updated : Jul 29, 2023, 6:46 AM IST

ಬೆಂಗಳೂರು: ಉದ್ಘಾಟನೆ ಆದಾಗಿನಿಂದ ಬೆಂಗಳೂರು - ಮೈಸೂರು ಎಕ್ಸ್​ಪ್ರೆಸ್ ವೇ ಸುದ್ದಿಯಾಗುತ್ತಲೇ ಇದೆ. ಇತ್ತೀಚೆಗಷ್ಟೇ ಈ ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳು, ಟ್ರ್ಯಾಕ್ಟರ್​ನಂತಹ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿತ್ತು. ಇಲ್ಲಿನ ಅಪಘಾತ ಸ್ಥಳಗಳ ವೀಕ್ಷಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನಡೆಸಲಿದ್ದಾರೆ. ಹೆದ್ದಾರಿಯಲ್ಲಿ ಅಪಘಾತ ನಡೆಯುವ ಸ್ಥಳಗಳು, ರಸ್ತೆ ಅಪಘಾತ ತಡೆಗೆ ಹೆದ್ದಾರಿ ಪ್ರಾಧಿಕಾರ ಮತ್ತು ಪೊಲೀಸ್ ಇಲಾಖೆ ತೆಗೆದುಕೊಂಡ ಕ್ರಮಗಳು, ಹೆದ್ದಾರಿ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ಹಾಗೂ ರಸ್ತೆ ಸಂಚಾರ ಮಾಡುವ ಪ್ರಯಾಣಿಕರ ಸೌಲಭ್ಯಗಳ ಕುಂದು ಕೊರತೆಯೂ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಸಿಎಂ ಪರಿಶೀಲನೆ ಮಾಡಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗ್ಗೆ 10.30ಕ್ಕೆ ಬೆಂಗಳೂರಿನಿಂದ ರಸ್ತೆ ಮಾರ್ಗದಲ್ಲಿಯೇ ಭದ್ರತೆಯೊಂದಿಗೆ ತೆರಳಿ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ​ವೇ ವೀಕ್ಷಣೆ ಮಾಡಲಿದ್ದಾರೆ. ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮುಂತಾದೆಡೆ ಹೆದ್ದಾರಿ ಪರಿಶೀಲಿಸಲಿದ್ದಾರೆ. ಬೆಂಗಳೂರಿನಿಂದ 93 ಕಿಲೋ ಮೀಟರ್ ಅಂತರದಲ್ಲಿರುವ ಮಂಡ್ಯದ ಅಮರಾವತಿ ಹೋಟೆಲ್ ಸಮೀಪ ಹಾಗೂ ಗಣಂಗೂರು ಟೋಲ್ ಪ್ಲಾಜಾ ಸಮೀಪ ಸಿಎಂ ಸಿದ್ದರಾಮಯ್ಯ ಖುದ್ದಾಗಿ ಪರಿಶೀಲನೆ ಕೈಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರು, ಮುಖಂಡರುಗಳು ಹಾಜರಿರಲಿದ್ದಾರೆ.

ಎಕ್ಸ್​ಪ್ರೆಸ್ ವೇಯಲ್ಲಿ ಅಪಘಾತ ತಡೆಗೆ ಪೊಲೀಸ್ ಇಲಾಖೆ ತೆಗೆದುಕೊಂಡ ಕ್ರಮಗಳು, ಅತಿ ವೇಗದ ಚಾಲನೆ ಗುರುತಿಸಿ ಸಂಚಾರ ನಿಯಮ ಉಲ್ಲಂಘನೆಗೆ ದಂಡ ಹಾಕಲು ಕ್ಯಾಮರಾಗಳ ಅಳವಡಿಕೆ ಕ್ರಮಗಳ ಕುರಿತಂತೆ ಮುಖ್ಯಮಂತ್ರಿಗಳು ಪರಿಶೀಲಿಸಲಿದ್ದಾರೆ. ಕ್ಯಾಮರಾ ಅಳವಡಿಸಿದ ನಂತರ ಅಪಘಾತಗಳ ಸಂಖ್ಯೆಯಲ್ಲಿ ಕಡಿಮೆಯಾಗಿರುವುದು ಸೇರಿದಂತೆ ಹಲವಾರು ಮಾಹಿತಿಯನ್ನು ಅಧಿಕಾರಿಗಳು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗೆ ನೀಡಲಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಹ ಹಾಜರಿದ್ದು, ಮಾಹಿತಿ ನೀಡಲಿದ್ದಾರೆ.

ಸರಣಿ ಅಪಘಾತ: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ ಹೆದ್ದಾರಿ ಉದ್ಘಾಟನೆ ಆದ ಬಳಿಕ ಕೆಲವೇ ತಿಂಗಳಲ್ಲಿ ನೂರಕ್ಕೂ ಹೆಚ್ಚು ಜನರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಳೆದ ಮಾರ್ಚ್ ತಿಂಗಳಿನಿಂದ ಜೂನ್ ತಿಂಗಳವರೆಗೆ ಒಟ್ಟು 303 ಅಪಘಾತಗಳು ಸಂಭವಿಸಿ 100ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. 300ಕ್ಕೂ ಹೆಚ್ಚಿನ ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದರು. ಅಲ್ಲದೆ, ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಹೆದ್ದಾರಿಯಲ್ಲಿ ಕೆಲ ವಾಹನಗಳ ಸಂಚಾರವನ್ನು ನಿಷೇಧಿಸಲು ಹೆದ್ದಾರಿ ಪ್ರಾಧಿಕಾರ ಇಲಾಖೆ ಕ್ರಮ ತೆಗೆದುಕೊಂಡಿದೆ.

ಇದನ್ನೂ ಓದಿ: ಕಾನೂನು ಸಲಹೆ ಪಡೆದು ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಆಯೋಗ ತೀರ್ಮಾನ: ಸಿಎಂ ಭರವಸೆ

Last Updated : Jul 29, 2023, 6:46 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.