ETV Bharat / state

ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ: ಸಿಎಂ ಸಿದ್ದರಾಮಯ್ಯ - ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಟ್ವೀಟ್

ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡುವ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ ಕಮಿಷನ್ ಹಿಂದಿರುವ ಭ್ರಷ್ಟರನ್ನು ಬೇಟೆಯಾಡುವುದಾಗಿ ತಿಳಿಸಿದ್ದಾರೆ.

cm siddaramaiah
ಸಿಎಂ ಸಿದ್ದರಾಮಯ್ಯ
author img

By

Published : Aug 11, 2023, 12:13 PM IST

ಬೆಂಗಳೂರು : ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಸಿಎಂ, "ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು. ನಾಡಿನ ಮತದಾರರು ನಮ್ಮ ಮಾತಿನ ಮೇಲೆ ನಂಬಿಕೆಯಿಟ್ಟು ಬಿಜೆಪಿಯ ಭ್ರಷ್ಟಾಚಾರ, ಕಮಿಷನ್ ಹಾವಳಿ, ತೆರಿಗೆ ಲೂಟಿಯ ವಿರುದ್ಧ ಮತ ಚಲಾಯಿಸಿ 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಸುಭದ್ರ, ಸುಸ್ಥಿರ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ. ಈಗ ಜನರಿಗೆ ನೀಡಿದ್ದ ವಚನ ಪಾಲನೆ ನಮ್ಮ ಕರ್ತವ್ಯವಾಗಿದ್ದು, ಬಿಜೆಪಿ ಸರ್ಕಾರದ ಶೇ40ರಷ್ಟು ಕಮಿಷನ್ ಹಗರಣವನ್ನು ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ‘‘ ಎಂದು ತಿಳಿಸಿದ್ದಾರೆ.

  • ಈಗಾಗಲೇ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನನ್ನೊಂದಿಗೆ ಚರ್ಚಿಸಿದ್ದಾರೆ, P.O.W ಕಾಮಗಾರಿಗಳ ಬಿಲ್ ಅನ್ನು ಬಿಡುಗಡೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ. ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ…

    — Siddaramaiah (@siddaramaiah) August 11, 2023 " class="align-text-top noRightClick twitterSection" data=" ">

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೇ, ಹಳೆಯ ಕೆಲಸಕ್ಕೆ ಹಾಗೂ ಕೆಲವು ಕಡೆ ಅರ್ಧಂಬರ್ಧ ಕೆಲಸ ಮಾಡಿ ಬಿಲ್​ನ ಮೊತ್ತವನ್ನು ಪಡೆಯಲಾಗಿದೆ. ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ಸಮಿತಿಯು ಈ ಎಲ್ಲ ಹಗರಣಗಳ ಕುರಿತು ತನಿಖೆ ನಡೆಸುತ್ತಿದ್ದು, ಪೂರ್ಣ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್​ಗಳಿಗೆ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲ ಎಂದು ತಿಳಿಸಿದ್ದಾರೆ.

  • ರಾಜ್ಯ ಸರ್ಕಾರ ಗುತ್ತಿಗೆದಾರರಿಗೆ ಬಾಕಿ ಬಿಲ್ ಹಣ ಪಾವತಿ ಮಾಡುತ್ತಿಲ್ಲ, ಹೀಗಾಗಿ ರಾಹುಲ್ ಗಾಂಧಿಯವರು ಮಧ್ಯಪ್ರವೇಶಿಸಿ ಬಿಲ್ ಹಣ ಬಿಡುಗಡೆ ಮಾಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒತ್ತಾಯಿಸಿದ್ದಾರೆ. ಆದರೆ ರಾಜ್ಯ ಸರ್ಕಾರಗಳಿಗೆ ಸೂಚನೆ, ನಿರ್ದೇಶನ ನೀಡುವ ಅಧಿಕಾರವಿರುವುದು ದೇಶದ ಪ್ರಧಾನಿಗಳಿಗೆ, @narendramodi

ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವೊಬ್ಬ ಗುತ್ತಿಗೆದಾರನಿಗೂ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ಈ ಬಗ್ಗೆ ಗುತ್ತಿಗೆದಾರರಿಗೆ ಭಯ ಬೇಡ. ಆದರೆ, ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ. ನಮ್ಮ ಸರ್ಕಾರದ ವಿರುದ್ಧ ಮಾಜಿ ಸಚಿವರಾದ ಆರ್. ಅಶೋಕ್ ಅವರು ಮಾಡಿರುವ ಶೇ 15ರಷ್ಟು ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದೇ ಆದರೂ ಅದರಲ್ಲಿ ಅವರು ಕಮಿಷನ್ ದರವನ್ನು ಶೇ 40 ರಿಂದ ಶೇ 15 ಕ್ಕೆ ಇಳಿಸಿರುವುದು ಸಂತೋಷದ ವಿಷಯ. ಅಶೋಕ್ ಅವರ ಈ ಹೇಳಿಕೆಯಿಂದ ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರ ಉತ್ತಮ ಎಂಬುದು ಅವರ ಮನಸ್ಸಿನಲ್ಲೇ ಇದೆ ಎನ್ನುವುದನ್ನು ತೋರಿಸುತ್ತದೆ‌ ಎಂದು ತಿರುಗೇಟು ನೀಡಿದರು.

  • ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ದ ಕೆಲಸ ಮಾಡಿ ಬಿಲ್ ಹಣ ಪಡೆಯಲಾಗಿದೆ. ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ಸಮಿತಿಯು ಈ ಎಲ್ಲಾ ಹಗರಣಗಳ ಕುರಿತು ತನಿಖೆ ನಡೆಸುತ್ತಿದ್ದು, ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣ…

ನಮ್ಮ ಮೇಲಿನ ಆರೋಪಗಳನ್ನು ಸವಾಲಿನಂತೆ ಸ್ವೀಕರಿಸಿ, ಈ ಅಗ್ನಿಪರೀಕ್ಷೆಯಲ್ಲಿ ಗೆದ್ದು ನಮ್ಮದು ಬರೀ ಉತ್ತಮವಲ್ಲ ಅತ್ಯುತ್ತಮ, ಪಾರದರ್ಶಕ, ಜನಪರ ಸರ್ಕಾರ ಎಂಬುದನ್ನು ನಾಡಿನ ಜನತೆಯೆದುರು ಸಾಬೀತು ಮಾಡುತ್ತೇವೆ. ರಾಜ್ಯ ಸರ್ಕಾರ ಗುತ್ತಿಗೆದಾರರಿಗೆ ಬಾಕಿ ಬಿಲ್ ಹಣ ಪಾವತಿ ಮಾಡುತ್ತಿಲ್ಲ. ಹೀಗಾಗಿ, ರಾಹುಲ್ ಗಾಂಧಿಯವರು ಮಧ್ಯಪ್ರವೇಶಿಸಿ ಬಿಲ್ ಹಣ ಬಿಡುಗಡೆ ಮಾಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒತ್ತಾಯಿಸಿದ್ದಾರೆ. ಆದರೆ, ರಾಜ್ಯ ಸರ್ಕಾರಗಳಿಗೆ ಸೂಚನೆ, ನಿರ್ದೇಶನ ನೀಡುವ ಅಧಿಕಾರವಿರುವುದು ದೇಶದ ಪ್ರಧಾನಿಗಳಿಗೆ. ಪ್ರಧಾನಿ ಮೋದಿ ಅವರು ಮಾಡಬೇಕಿರುವ ಕೆಲಸವನ್ನು ರಾಹುಲ್ ಗಾಂಧಿಯವರಿಗೆ ಮಾಡಿ ಎಂದು ಒತ್ತಾಯಿಸುತ್ತಿರುವುದು ನೋಡಿದರೆ ಸ್ವತಃ ಬೊಮ್ಮಾಯಿಯವರಿಗೆ ಮೋದಿ ಅವರ ಕಾರ್ಯದಕ್ಷತೆ ಬಗ್ಗೆ ನಂಬಿಕೆ ಇದ್ದಂತೆ ಕಾಣುತ್ತಿಲ್ಲ ಎಂದು ಟಾಂಗ್ ನೀಡಿದರು.

ಇದನ್ನೂ ಓದಿ : ಸುಲಿಗೆ ಮನಸ್ಥಿತಿಗೂ ಸೂಕ್ತ ಚಿಕಿತ್ಸೆ ಬೇಡವೇ? : ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್​​ಡಿಕೆ ಕಿಡಿ

ಈಗಾಗಲೇ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನನ್ನೊಂದಿಗೆ ಚರ್ಚಿಸಿದ್ದಾರೆ, ಕಾಮಗಾರಿಗಳ ಬಿಲ್ ಅನ್ನು ಬಿಡುಗಡೆ ಮಾಡುವಂತೆ ಸೂಚನೆ ನೀಡಲಾಗಿದೆ. ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

ಈ ನಡುವೆ ಕೆಲವೇ ಕೆಲವು ಗುತ್ತಿಗೆದಾರರು ತಮ್ಮ ಸ್ವಾರ್ಥ ಹಾಗೂ ದುರುದ್ದೇಶ ಈಡೇರಿಕೆಗಾಗಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಸ್ವತಃ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎನ್ನಲು ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು?‌ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : ಸಚಿವರ ವಿರುದ್ಧದ ನಕಲಿ ಪತ್ರದ ಸೃಷ್ಟಿಕರ್ತರು ಬಿಜೆಪಿಯವರೋ ಅಥವಾ ನಿಮ್ಮ 'ಬ್ರದರ್ರೋ': ಸಿಎಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.