ETV Bharat / state

CM Siddaramaiah: ರಾಹುಲ್ ಗಾಂಧಿ ವಿರುದ್ಧದ ಕ್ರಮ ನಿಮಗೆ ಅನ್ವಯವಾಗುವುದಿಲ್ಲವೇ? ಮೋದಿ ವಿರುದ್ಧ ಸಿದ್ದರಾಮಯ್ಯ ಟೀಕೆ - ಈಸ್ಟ್ ಇಂಡಿಯಾ ಕಂಪನಿಗೆ ಹೋಲಿಸಿದ ಮೋದಿ

CM Siddaramaiah tweet against modi: ನೂತನ ಪ್ರತಿಪಕ್ಷದ ಮೈತ್ರಿಕೂಟ ‘ಇಂಡಿಯಾ’ವನ್ನು ಈಸ್ಟ್ ಇಂಡಿಯಾ ಕಂಪನಿಗೆ ಹೋಲಿಸಿದ ಪ್ರಧಾನಿ ಮೋದಿ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್​ ಮೂಲಕ ತಿರುಗೇಟು ನೀಡಿದ್ದಾರೆ.

CM Siddaramaiah tweeted
CM Siddaramaiah tweeted
author img

By

Published : Jul 26, 2023, 2:14 PM IST

ಬೆಂಗಳೂರು: ಪ್ರತಿಪಕ್ಷದ ಮೈತ್ರಿಕೂಟದ ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್ (INDIA) ಅನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಇಂಡಿಯನ್‌ ಮುಜಾಹಿದ್ದೀನ್‌ ಭಯೋತ್ಪಾದನಾ ಸಂಘಟನೆಗಳಿಗೆ ಹೋಲಿಕೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

  • ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ವನ್ನು ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಗೆ ಹೋಲಿಸಿರುವ ಸನ್ಮಾನ ಪ್ರಧಾನಿ @narendramodi ಅವರೇ.
    ಭಾರತೀಯರ ನೂರಾರು ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿ ದೇಶ ಬಿಟ್ಟು ಓಡಿಹೋಗಿರುವ ನೀರವ್ ಮೋದಿ ಮತ್ತು ಲಲಿತ್ ಮೋದಿ ಅವರ ಹೆಸರಿನಲ್ಲಿಯೂ ನಿಮ್ಮ ಹೆಸರಿನ ಮೋದಿ ಇದೆಯಲ್ಲಾ? ಅವರನ್ನು…

    — Siddaramaiah (@siddaramaiah) July 26, 2023 " class="align-text-top noRightClick twitterSection" data=" ">

ಟ್ವೀಟ್​ ಮಾಡಿರುವ ಸಿದ್ದರಾಮಯ್ಯ, ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ವನ್ನು ಈಸ್ಟ್ ಇಂಡಿಯಾ ಕಂಪನಿ ಮತ್ತು ಇಂಡಿಯನ್ ಮುಜಾಹಿದ್ದೀನ್​ಗೆ ಹೋಲಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಭಾರತೀಯರ ನೂರಾರು ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿ ದೇಶ ಬಿಟ್ಟು ಓಡಿಹೋಗಿರುವ ನೀರವ್ ಮೋದಿ ಮತ್ತು ಲಲಿತ್ ಮೋದಿ ಅವರ ಹೆಸರಿನಲ್ಲಿಯೂ ನಿಮ್ಮ ಹೆಸರಿನ ಮೋದಿ ಇದೆಯಲ್ಲಾ? ಅವರನ್ನು ನಿಮ್ಮ ಜೊತೆ ಹೋಲಿಸಬಹುದಾ? ಲಲಿತ್ ಮತ್ತು ನೀರವ್ ಹೆಸರಲ್ಲಿಯೂ ಮೋದಿ ಇದೆಯಲ್ಲ ಎಂಬ ಸಾಮಾನ್ಯ ಪ್ರಶ್ನೆ ಕೇಳಿದ ರಾಹುಲ್​ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿ, ಎರಡು ವರ್ಷ ಜೈಲು ಶಿಕ್ಷೆ ನೀಡಿ, ಲೋಕಸಭೆಯಿಂದ ಅನರ್ಹಗೊಳಿಸಲಾಯಿತು. ಈಗ ಇಂಡಿಯಾವನ್ನು ಈಸ್ಟ್ ಇಂಡಿಯಾ ಕಂಪನಿ ಮತ್ತು ಇಂಡಿಯನ್ ಮುಜಾಹಿದ್ದೀನ್​ಗೆ ಹೋಲಿಸಿರುವ ನಿಮ್ಮ ಹೋಲಿಕೆಗೆ ರಾಹುಲ್ ಗಾಂಧಿಯವರ ವಿರುದ್ಧದ ಕ್ರಮ ಅನ್ವಯವಾಗುವುದಿಲ್ಲವೇ?.

  • ಪ್ರಧಾನಿ @narendramodi ಅವರೇ, ಇಂಡಿಯಾ ಎಂಬ ಸುಂದರ, ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ?

    ಇಂಡಿಯಾ ಹೆಸರಿನ ಬಗ್ಗೆ ಇಷ್ಟೊಂದು ಅಸಹನೆ ಹೊಂದಿರುವ ನೀವು ನಿಮ್ಮದೇ ಸರ್ಕಾರದ ಕಾರ್ಯಕ್ರಮಗಳಾದ ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ, ಸ್ಕಿಲ್ ಇಂಡಿಯಾ ಮೊದಲಾದ ಕಾರ್ಯಕ್ರಮಗಳ ಹೆಸರನ್ನೂ ಬದಲಾಯಿಸುವಿರಾ?…

ಪ್ರಧಾನಿ ನರೇಂದ್ರ ಮೋದಿ ಅವರೇ, ಇಂಡಿಯಾ ಎಂಬ ಸುಂದರ, ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ? ಇಂಡಿಯಾ ಹೆಸರಿನ ಬಗ್ಗೆ ಇಷ್ಟೊಂದು ಅಸಹನೆ ಹೊಂದಿರುವ ನೀವು ನಿಮ್ಮದೇ ಸರ್ಕಾರದ ಕಾರ್ಯಕ್ರಮಗಳಾದ ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ, ಸ್ಕಿಲ್ ಇಂಡಿಯಾ ಮೊದಲಾದ ಕಾರ್ಯಕ್ರಮಗಳ ಹೆಸರನ್ನೂ ಬದಲಾಯಿಸುವಿರಾ?.

ಮಂಗಳವಾರ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ್ದ ಮೋದಿ, ಇದೊಂದು ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹುಟ್ಟಿಕೊಂಡ ಮೈತ್ರಿಕೂಟ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಇಂಡಿಯನ್‌ ಮುಜಾಹಿದ್ದೀನ್‌ ಸೇರಿದಂತೆ ಹಲವು ಭಯೋತ್ಪಾದನಾ ಸಂಘಟನೆಗಳಲ್ಲಿಯೂ ಇದೇ ಇಂಡಿಯಾ ಎಂಬ ಹೆಸರಿದೆ ಎಂದು ಪ್ರತಿಪಕ್ಷ ನಾಯಕರ ವಿರುದ್ಧ ಹರಿಹಾಯ್ದಿದ್ದರು.

ರಾಜ್ಯದಲ್ಲಿ ಉತ್ತಮ ಮಳೆ: ಇಂದು ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಹುತಾತ್ಮ ಯೋಧರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇ 100ರಷ್ಟು ಬಿತ್ತನೆಯಾಗಲಿದೆ ಎಂದರು.

CM Siddaramaiah tweeted against Modi comparing India to East India Company
ಹುತಾತ್ಮ ಸೈನಿಕರಿಗೆ ಗೌರವ ನಮನ ಸಲ್ಲಿಕೆ

ಮಳೆಯಿಂದಾಗಿ ಕೈಮೀರಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಕೆ.ಆರ್.ಎಸ್, ಕಬಿನಿ, ಹಾರಂಗಿ, ಹೇಮಾವತಿ, ಆಲಮಟ್ಟಿ, ಸೇರಿದಂತೆ ಎಲ್ಲಾ ಜಲಾಶಯಗಳಿಗೆ ನೀರು ಬರುತ್ತಿರುವುದು ರೈತರಿಗೆ ಹಾಗೂ ಸರ್ಕಾರಕ್ಕೆ ಸಂತೋಷ ತಂದಿದೆ. ಹಾವೇರಿಯಲ್ಲಿ 87% ಬಿತ್ತನೆಯಾಗಿದೆ ಎಂದು ಅವರು ಮಾಹಿತಿ ನೀಡಿದರು.

ವಿವಿಧ ಜಿಲ್ಲೆಗಳ ಪ್ರವಾಸ: ಮಳೆ ಹಿನ್ನೆಲೆಯಲ್ಲಿ ಮಂಗಳೂರು, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಲಿದ್ದು, ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಜನರನ್ನು ಭೇಟಿಯಾಗಿ ಅವರ ಕಷ್ಟಗಳನ್ನು ಆಲಿಸಲಾಗುವುದು. ಸಚಿವ ಕೃಷ್ಣ ಬೈರೇಗೌಡರು ನಿನ್ನೆ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದಾರೆ. ಎಲ್ಲೆಡೆ ಮಳೆಯಾಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಟ್ಯಾಂಕರ್ ನೀರಿನ ಸರಬರಾಜು ಮಾಡಲಾಗುತ್ತಿತ್ತು. ಆದರೆ, ಈಗ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಭಯೋತ್ಪಾದನಾ ಸಂಘಟನೆಗಳಲ್ಲಿಯೂ ಇದೇ ಇಂಡಿಯಾ ಎಂಬ ಹೆಸರು ಇದೆ.. ಪ್ರತಿಪಕ್ಷದ ಮೈತ್ರಿಕೂಟಕ್ಕೆ ಪ್ರಧಾನಿ ಮೋದಿ ತಿರುಗೇಟು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.