ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಸೆಪ್ಟೆಂಬರ್ 15 ರಂದು ಸಿಎಂ ಸಿದ್ದರಾಮಯ್ಯ ಚಾಲನೆ : ಸಚಿವ ಎಚ್ ಸಿ ಮಹದೇವಪ್ಪ - ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ
ಸೆಪ್ಟಂಬರ್ 15ರಂದು ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ ಎಂದು ಸಚಿವ ಎಚ್ ಸಿ ಮಹದೇವಪ್ಪ ಅವರು ತಿಳಿಸಿದ್ದಾರೆ.
Published : Sep 13, 2023, 10:28 PM IST
ಬೆಂಗಳೂರು : ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಸೆಪ್ಟಂಬರ್ 15 ರಂದು ವಿಧಾನಸೌಧದ ಮುಂಭಾಗ ಚಾಲನೆ ನೀಡಲಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್ ಸಿ ಮಹದೇವಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸಂಜೆ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಅಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಹಾಗಾಗಿ, ಸೆ. 15 ರಂದು ಈ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.
ಭಾರತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಹಾಗಾಗಿ ಇದು ಉಪಯೋಗವಾಗಲಿದೆ. ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವಿಕೆ, ಮಕ್ಕಳಲ್ಲಿ ಸಂವಿಧಾನದ ಉದ್ದೇಶ ಅರ್ಥ ಆಗಬೇಕು. ಹಾಗಾಗಿ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದ್ದೇವೆ ಎಂದರು. ಮೂಲಭೂತ ಹಕ್ಕುಗಳು ಎಲ್ಲರಿಗೂ ಗೊತ್ತಿದೆ. ಆದರೆ ಕರ್ತವ್ಯಗಳನ್ನು ಯಾರು ಪಾಲಿಸುತ್ತಿಲ್ಲ. ಹಾಗಾಗಿಯೇ ಈ ಕಾರ್ಯಕ್ರಮ ತಂದಿದ್ದೇವೆ. ಆನ್ಲೈನ್ ಮೂಲಕ ರಿಜಿಸ್ಟ್ರೇಷನ್ ಆಗಿದೆ. ಸುಮಾರು ಎರಡು ಕೋಟಿ ಜನ ಇದರಲ್ಲಿ ಭಾಗವಹಿಸುತ್ತಿದ್ದಾರೆ. ಇದು ಒಂದು ದೊಡ್ಡ ಆಂದೋಲನವಾಗಬೇಕು. ಎಲ್ಲ ಕಡೆಯೂ ಇದನ್ನು ಬಳಸಬೇಕು ಎಂದು ಹೇಳಿದರು.
ಪ್ರಜಾಪ್ರಭುತ್ವದ ಯಶಸ್ಸು ಪೀಠಿಕೆಯಲ್ಲಿದೆ. ಸಂವಿಧಾನದ ಪೀಠಿಕೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಎಲ್ಲರೂ ಸೋದರತೆಯಿಂದ ಬಾಳಲು ಇದು ಉಪಯೋಗ. ನಾವೇ ಒಪ್ಪಿ ನಾವೇ ಇದನ್ನು ತಂದಿದ್ದೇವೆ. ಇದು ಮುಂದಿನ ಪೀಳಿಗೆಗೆ ಅರ್ಥ ಆಗಬೇಕು. ಜಾತಿ, ಧರ್ಮಗಳ ನಡುವೆ ಸಂಘರ್ಷ ತಪ್ಪಿಸಬೇಕು. ಈ ಉದ್ದೇಶ ಇಟ್ಟುಕೊಂಡೇ ಇದನ್ನು ತರಲಾಗಿದೆ ಎಂದರು.
ಸಂವಿಧಾನ ಪೀಠಿಕೆಯನ್ನು ಸುಮ್ಮನೆ ಆರ್ಡರ್ ಮಾಡಲ್ಲ. ಇದನ್ನು ಮ್ಯಾಂಡೇಟ್ ಮಾಡ್ತೇವೆ. ಕಡ್ಡಾಯವಾಗಿ ಇದನ್ನು ಓದುವಂತೆ ಮಾಡ್ತೇವೆ. ಕೇವಲ ಶಾಲಾ ಕಾಲೇಜ್ಗೆ ಮಾತ್ರ ಅನ್ವಯ ಅಲ್ಲ, ಸರ್ಕಾರಿ ಕಚೇರಿಗಳಲ್ಲೂ ಇದು ಅನ್ವಯ. ಸಿಎಂ ಕಚೇರಿಯಲ್ಲೂ ಇದನ್ನು ಓದಬೇಕು. ಜಿಲ್ಲಾ, ತಾಲೂಕು, ಗ್ರಾಮ ಪಂಚಾಯಿತಿಗಳಲ್ಲೂ ಸಂವಿಧಾನ ಪೀಠಿಕೆಯನ್ನು ಜಾರಿಗೊಳಿಸುತ್ತೇವೆ ಎಂದು ತಿಳಿಸಿದರು.
ಇದು ಯಾವುದಕ್ಕೋ ಕೌಂಟರ್ ಅಲ್ಲ, ಸಂವಿಧಾನದಲ್ಲಿ ಎಲ್ಲರೂ ಸಮಾನರೇ. ಯಾರು ಕಡಿಮೆ ಅಲ್ಲ, ಯಾರು ಹೆಚ್ಚಿಲ್ಲ.
ಹಾಗಾಗಿ ಇದನ್ನು ನಾವು ಜಾರಿಗೆ ತರುತ್ತಿದ್ದೇವೆ. ಮಕ್ಕಳಲ್ಲಿ ಯಾವುದೇ ಜಾತಿ, ಧರ್ಮ ಬರಬಾರದು. ಸಂವಿಧಾನದಲ್ಲಿ ಎಲ್ಲರೂ ಸಮಾನರೇ. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪೀಠಿಕೆ ಫೋಟೋ ಹಾಕುತ್ತೇವೆ ಎಂದು ಹೇಳಿದರು.
ಎಲ್ಲವನ್ನು ಸಾಧಿಸಲು ಸಾಧ್ಯ : ಶಿಕ್ಷಣದ ಮೂಲಕ ಎಲ್ಲವನ್ನು ಸಾಧಿಸಲು ಸಾಧ್ಯ. ಆದ್ದರಿಂದಲೇ ನಾವು ಇಂದು ಚಂದ್ರನನ್ನು ಕೂಡಾ ಮುಟ್ಟಿದ್ದೇವೆ ಎಂದು ಸಮಾಜ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಸಿ ಮಹದೇವಪ್ಪ (ಸೆಪ್ಟೆಂಬರ್ 5-2023)ರಂದು ಹೇಳಿದ್ದರು.
ನಗರದ ಕರ್ನಾಟಕ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ್ದರು.
ಇದನ್ನೂ ಓದಿ: ಶಿಕ್ಷಣದ ಮೂಲಕ ಎಲ್ಲವನ್ನೂ ಸಾಧಿಸಲು ಸಾಧ್ಯ: ಸಚಿವ ಡಾ. ಹೆಚ್ ಸಿ ಮಹದೇವಪ್ಪ