ETV Bharat / state

ಪ್ರತಿಯೊಬ್ಬರೂ ಘನತೆಯಿಂದ ಕೆಲಸ ಮಾಡಬೇಕು.. ಅದೇ ಬಸವಣ್ಣನವರ ಕಾಯಕವೇ ಕೈಲಾಸದ ಅರ್ಥ: ಸಿದ್ದರಾಮಯ್ಯ - ಸವಿತಾ ಸಮಾಜ

ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸವಿತಾ ಸಮಾಜ(ರಿ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ ಮಾತನಾಡಿದರು.

Etv Bharat
Etv Bharat
author img

By ETV Bharat Karnataka Team

Published : Jan 9, 2024, 3:40 PM IST

ಬೆಂಗಳೂರು : ಯಾವ ಕಾಯಕವೂ ಮೇಲು ಅಲ್ಲ. ಕೀಳೂ ಅಲ್ಲ. ಎಲ್ಲ ಕಾಯಕವೂ ಸಮಾನ ಮತ್ತು ಸಮಾನ ಘನತೆ ಹೊಂದಿವೆ. ಪ್ರತಿಯೊಬ್ಬರೂ ಘನತೆಯಿಂದ ಕಾಯಕ ಮಾಡಬೇಕು. ಇದನ್ನೇ ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ರಾಜ್ಯ ಸವಿತಾ ಸಮಾಜ(ರಿ) ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೇಖಕ ಡಾ.ಎಂ.ಎಸ್.ಮುತ್ತುರಾಜ್ ಅವರ ಮಂಗಳವಾದ್ಯ ಕಾದಂಬರಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ, ನಟರಾಗಿ ಜನಪ್ರಿಯತೆಗಳಿಸಿರುವ ಎಂ ಆರ್ ಮುತ್ತೂರಾಜ್ ಬಹುಮುಖ ಪ್ರತಿಭೆಯಾಗಿದ್ದಾರೆ. ವೃತ್ತಿ ಘನತೆ ಕಾಪಾಡುವ ವ್ಯಕ್ತಿತ್ವದವರಾಗಿದ್ದಾರೆ. ಇವರು ಕಾಯಕ ಜೀವಿ ಎಂದು ಶ್ಲಾಘಿಸಿದರು.

ಕೈಲಾಸ, ಸ್ವರ್ಗ, ನರಕ ಎನ್ನುವುದು ಬೇರೆಲ್ಲೂ ಇಲ್ಲ. ಎಲ್ಲವೂ ಇಲ್ಲೇ ಇದೆ. ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಣ್ಣ ಹೇಳಿದ್ದಾರೆ. ಜನರಿಗೆ ಅರ್ಥ ಆಗುವ ರೀತಿಯಲ್ಲಿ ಸರಳವಾದ ಜನರ ಭಾಷೆಯಲ್ಲಿ ಜೀವನದ ಮೌಲ್ಯಗಳನ್ನು ಬಸವಾದಿ ಶರಣರು ಹೇಳಿದ್ದಾರೆ ಎಂದು ವಿವರಿಸಿದರು.

ಧರ್ಮದ ಹೆಸರಲ್ಲಿ, ಜಾತಿಯ ಹೆಸರಲ್ಲಿ ಮುಸ್ಲಿಮರನ್ನು, ದಲಿತರನ್ನು, ಶೂದ್ರರನ್ನು, ಶ್ರಮಿಕ‌ ವರ್ಗದವರನ್ನು ದ್ವೇಷಿಸುವುದು ಅತ್ಯಂತ ಅಮಾನವೀಯವಾದ ಕೆಟ್ಟ ನಡವಳಿಕೆಯಾಗಿದೆ. ಮನುಷ್ಯರನ್ನು ಮನುಷ್ಯರು ಪರಸ್ಪರ ಗೌರವಿಸುವುದೇ ದೊಡ್ಡ ಮೌಲ್ಯ. ಮನುಷ್ಯ ದ್ವೇಷಕ್ಕಿಂತ ಕೆಟ್ಟ ಮೌಲ್ಯ ಬೇರೊಂದು ಇಲ್ಲ. ಅದಕ್ಕೇ ರಾಷ್ಟ್ರಕವಿ ಕುವೆಂಪು ಅವರು ಸರ್ವ ಜನಾಂಗದ ಶಾಂತಿಯ ತೋಟ ಎಂದಿರುವುದು ಎಂದರು. ದೇವರಿದ್ದಾನೆ, ಆದರೆ ದೇವರು ದೇವಸ್ಥಾನದಲ್ಲಿ ಮಾತ್ರ ಇದ್ದಾನೆ ಎನ್ನುವುದು ಸರಿಯಲ್ಲ. ಎಲ್ಲಾ ಕಡೆಯೂ ದೇವರಿದ್ದಾನೆ. ಅದಕ್ಕೇ ಶರಣರು, ಉಳ್ಳವರು ದೇವಸ್ಥಾನವ ಮಾಡುವರು. ನಾನೇನು ಮಾಡಲಯ್ಯ ಬಡವನಯ್ಯ ಎಂದಿದ್ದಾರೆ ಎಂದು ವಚನಗಳನ್ನು ಉದಾಹರಣೆಯಾಗಿ ನೀಡಿದರು.

ನಾರಾಯಣ ಗುರುಗಳು, ಒಂದೇ ಜಾತಿ - ಒಂದೇ ಮತ-ಒಂದೇ ದೇವರು ಎಂದರು. ಕನಕದಾಸರು ಮತ್ತು ಬಸವಾದಿ ಶರಣರು ಇದೇ ಮೌಲ್ಯವನ್ನು ಜನರಿಗೆ ಹೇಳಿದ್ದಾರೆ. ನಿಮ್ಮನ್ನು ಯಾವ ದೇವಸ್ಥಾನಕ್ಕೆ ಒಳಗೆ ಬಿಡುವುದಿಲ್ಲವೋ ಆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಿ, ನೀವೇ ದೇವಸ್ಥಾನ ಕಟ್ಟಿ, ನೀವೇ ಪೂಜೆ ಮಾಡಿ ಎಂದು ನಾರಾಯಣ ಗುರುಗಳು ಹೇಳಿದ್ದಾರೆ. ಇದನ್ನು ಎಲ್ಲರೂ ಪಾಲಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ಎಚ್.ಎಂ.ರೇವಣ್ಣ, ಪ್ರಗತಿಪರ ಚಿಂತಕ ಎಲ್.ಮುಕುಂದರಾಜ್ ಮತ್ತು ಸವಿತಾ ಸಮಾಜದ ಅಧ್ಯಕ್ಷರಾದ ಕಿರಣ್ ಕುಮಾರ್ ಸೇರಿ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಲೋಕಸಭೆ ಚುನಾವಣೆ : ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ಸಭೆ- ಮಲ್ಲಿಕಾರ್ಜುನ ಖರ್ಗೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.