ETV Bharat / state

ಹೆಚ್​ಡಿಕೆ ಆರೋಪಕ್ಕೆ ದಾಖಲೆ ಸಮೇತ ತಿರುಗೇಟು ನೀಡಿದ ಸಿಎಂ

H D Kumaraswamy allegation: ಹೆಚ್​ ಡಿ ಕುಮಾರಸ್ವಾಮಿ ಅವರ ಆರೋಪಕ್ಕೆ ದಾಖಲೆ ಸಮೇತ ಸಿಎಂ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.

author img

By ETV Bharat Karnataka Team

Published : Nov 16, 2023, 5:19 PM IST

Updated : Nov 16, 2023, 5:40 PM IST

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: '‘ತಾ ಕಳ್ಳ ಇತರರ ನಂಬ’’ ಎಂಬ ಗಾದೆ ಮಾತನ್ನು ಒಬ್ಬ ಮಾಜಿ ಮುಖ್ಯಮಂತ್ರಿ ಬಗ್ಗೆ ಬಳಸಬೇಕಾಗಿ ಬಂದದ್ದಕ್ಕೆ ನನಗೆ ವಿಷಾದ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿ ದುರಸ್ತಿಯಾಗಬೇಕಾದ ಶಾಲಾ ಕೊಠಡಿಗಳ ವಿವರದ ದಾಖಲೆಯನ್ನು ಎಕ್ಸ್ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಡಾ. ಯತೀಂದ್ರ ಅವರ ಜೊತೆಗಿನ ಫೋನ್ ಸಂಭಾಷಣೆ ಹಿನ್ನೆಲೆಯನ್ನು ಸ್ಪಷ್ಟಪಡಿಸಿದ ನಂತರವೂ ಹೆಚ್ ಡಿ ಕುಮಾರಸ್ವಾಮಿ ಮತ್ತೆ ತಮ್ಮ ಸಡಿಲ ನಾಲಿಗೆಯಲ್ಲಿ ಸುಳ್ಳುಗಳನ್ನು ಹರಿಬಿಟ್ಟಿದ್ದಾರೆ.

ಫೋನ್ ಸಂಭಾಷಣೆಯಲ್ಲಿ ಡಾ ಯತೀಂದ್ರ ಹೆಸರಿಸಿದ ವಿವೇಕಾನಂದ ಅವರು, ವರುಣಾ ಕ್ಷೇತ್ರಕ್ಕೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ). ವರುಣಾ ಕ್ಷೇತ್ರಕ್ಕೆ ಸೇರಿರುವ ಹಾರೋಹಳ್ಳಿ, ಕೀಳನಪುರ, ದೇವಲಾಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಐದು ಸರ್ಕಾರಿ ಶಾಲೆಗಳ ರಿಪೇರಿಯಾಗಬೇಕಾಗಿರುವ ಕೊಠಡಿಗಳ ವಿವರದ ಪಟ್ಟಿಯನ್ನು ಬಿಇಒ ಅವರೇ ನನ್ನ ಕಚೇರಿಯ ಜಂಟಿ ಕಾರ್ಯದರ್ಶಿಗಳಿಗೆ ಕಳುಹಿಸಿದ್ದರು. ಇದರ ಬಗ್ಗೆಯೇ ನಾನು ಡಾ. ಯತೀಂದ್ರ ಅವರ ಜೊತೆಯಲ್ಲಿ ಮಾತನಾಡಿದ್ದು. ಇದಕ್ಕೆ ಸಂಬಂಧಿಸಿದ ದಾಖಲೆಯನ್ನು ಇಲ್ಲಿ ಲಗತ್ತಿಸಿದ್ದೇನೆ ಎಂದಿದ್ದಾರೆ.

  • ‘’ತಾ ಕಳ್ಳ ಇತರರ ನಂಬ’’ ಎಂಬ ಗಾದೆ ಮಾತನ್ನು ಒಬ್ಬಮಾಜಿ ಮುಖ್ಯಮಂತ್ರಿ ಬಗ್ಗೆ ಬಳಸಬೇಕಾಗಿ ಬಂದದ್ದಕ್ಕೆ ನನಗೆ ವಿಷಾದ ಇದೆ. ಡಾ.ಯತೀಂದ್ರ ಅವರ ಜೊತೆಗಿನ ಪೋನ್ ಸಂಭಾಷಣೆಯ ಹಿನ್ನೆಲೆಯನ್ನು ಸ್ಪಷ್ಟಪಡಿಸಿದ ನಂತರವೂ @hd_kumaraswamy ಅವರು ಮತ್ತೆ ತಮ್ಮ ಸಡಿಲ ನಾಲಿಗೆಯಲ್ಲಿ ಸುಳ್ಳುಗಳನ್ನು ಹರಿಯಬಿಟ್ಟಿದ್ದಾರೆ.

    ಪೋನ್ ಸಂಭಾಷಣೆಯಲ್ಲಿ… pic.twitter.com/xli6QJZ5DJ

    — Siddaramaiah (@siddaramaiah) November 16, 2023 " class="align-text-top noRightClick twitterSection" data=" ">

ಸುಳ್ಳುಕೋರರ ನಂಜಿನ ಆರೋಪಗಳಿಗೆ ವಿವರಣೆ ನೀಡಬೇಕಾದ ಅಗತ್ಯ ಖಂಡಿತ ಇಲ್ಲ. ಆದರೆ, ಮಾಧ್ಯಮಗಳಲ್ಲಿ ಪ್ರಸಾರ, ಪ್ರಕಟವಾಗುತ್ತಿರುವ ಸುಳ‍್ಳು ಸುದ್ದಿಗಳನ್ನು ಅಮಾಯಕ ಜನ ನಂಬಿ ತಪ್ಪು ತಿಳಿದುಕೊಳ್ಳಬಾರದು ಎನ್ನುವ ಕಾರಣಕ್ಕೆ ಈ ವಿವರವನ್ನು ನೀಡಿದ್ದೇನೆ. ಸುಳ್ಳು, ಮೋಸ, ದ್ರೋಹ, ವಚನಭ್ರಷ್ಟತೆಗಳನ್ನೇ ಅಸ್ತ್ರಮಾಡಿಕೊಂಡು ಗಳಿಸಿದ ಅಧಿಕಾರವನ್ನು ಕೇವಲ ಹಣದ ಲೂಟಿಗಾಗಿ ದುರ್ಬಳಕೆ ಮಾಡಿಕೊಂಡ ಕುಮಾರಸ್ವಾಮಿ ಅವರಿಗೆ ಅಭಿವೃದ್ದಿಯ ವಿಚಾರ ಅರ್ಥವಾಗುವಂತಹದ್ದಲ್ಲ ಎಂದು ಟೀಕಿಸಿದ್ದಾರೆ.

ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಆರೋಪ: ’’ರಾಜ್ಯ ಸರ್ಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ‘‘ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಅವರ ಪುತ್ರ ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದರು.

ಇತ್ತೀಚೆಗೆ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಯತೀಂದ್ರ ಸಿದ್ದರಾಮಯ್ಯ ಮಾತನಾಡಿರುವ ವಿಡಿಯೋವೊಂದು ವೈರಲ್‌ ಆಗಿತ್ತು. ಈ ವಿಡಿಯೋದಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರು, "ಯಾಕೆ ಯಾವುದ್ಯಾವುದೋ ಕೊಡ್ತಾ ಇದ್ದೀರಿ?. ನಾನು ಯಾವುದು ನಾಲ್ಕೈದು ಕೊಟ್ಟಿದ್ದೆನೋ ಅಷ್ಟು ಮಾತ್ರ ಮಾಡಿ" ಅಂತ ಹೇಳಿರುವುದು ದಾಖಲಾಗಿದೆ. ಇದೇ ವಿಡಿಯೋವನ್ನು ಹೆಚ್‌.ಡಿ.ಕುಮಾರಸ್ವಾಮಿ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿ ಟೀಕಾಪ್ರಹಾರ ನಡೆಸಿದ್ದರು. "ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಹರಾಜಾಗಿದೆ. ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಪ್ರಿನ್ಸ್ ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕಿಲ್ಲ" ಎಂದು ಕುಮಾರಸ್ವಾಮಿ ಕಿಡಿ ಕಾರಿದ್ದರು.

ಇದನ್ನೂ ಓದಿ: ಯತೀಂದ್ರ ಸಿದ್ದರಾಮಯ್ಯ ವಿಡಿಯೋ ವೈರಲ್ ವಿಚಾರ: ರಾಜ್ಯ ಸರ್ಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ ಎಂದ ಹೆಚ್‌ಡಿಕೆ

Last Updated : Nov 16, 2023, 5:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.