ETV Bharat / state

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಐಎಎಸ್, ಕೆಎಎಸ್ ಅಧಿಕಾರಿಗಳು ಕಣ್ಣು ಮತ್ತು ಕಿವಿಗಳಿದ್ದಂತೆ: ಸಿಎಂ ಸಿದ್ದರಾಮಯ್ಯ

author img

By

Published : Aug 9, 2023, 4:28 PM IST

ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಶಪಥವನ್ನು ಅಧಿಕಾರಿಗಳು ಮಾಡಬೇಕೆಂದು ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ‘ಶತಮಾನೋತ್ಸವ’ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

cm-siddaramaih-spoke-at-centenary-program-of-kas-officers-association
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಐಎಎಸ್, ಕೆಎಎಸ್ ಅಧಿಕಾರಿಗಳು ಕಣ್ಣು ಮತ್ತು ಕಿವಿಗಳಿದ್ದಂತೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು. ವಿದ್ಯಾವಂತರಾದ ಅಧಿಕಾರಿಗಳು, ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಯೊಂದಿಗೆ ಕರ್ತವ್ಯ ನಿರ್ವಹಿಸುವ ಮೂಲಕ ಜಾತ್ಯತೀತ ಹಾಗೂ ಸಮಾನ ಸಮಾಜವನ್ನು ನಿರ್ಮಿಸಬಹುದಾಗಿದೆ. ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಶಪಥವನ್ನು ಅಧಿಕಾರಿಗಳು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ‘ಶತಮಾನೋತ್ಸವ’ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜಕಾರಣಿಗಳು ಕಾನೂನು ಹಾಗೂ ನೀತಿಗಳನ್ನು ನಿರೂಪಿಸಿದರೆ, ಅವುಗಳನ್ನು ಜಾರಿಗೊಳಿಸುವುದು ಅಧಿಕಾರಿಗಳು. ಅಧಿಕಾರಿಗಳು, ಜನರು ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಾರೆ. ಅಧಿಕಾರಿಗಳು ಪ್ರಾಮಾಣಿಕವಾಗಿ, ಜನಪರವಾಗಿ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ಸರ್ಕಾರದ ಅಧಿಕಾರಿ ಹಾಗೂ ನೌಕರರು ಬಡವರ ವಿರೋಧಿ, ಜನವಿರೋಧಿ, ಭ್ರಷ್ಟಾಚಾರದಲ್ಲಿ ತೊಡಗಬಾರದು. ಜಾತಿ ಧರ್ಮಗಳ ಕಲಹದಲ್ಲಿಯೂ ಇರಬಾರದು. ಧರ್ಮಕ್ಕೂ, ಆಡಳಿತಕ್ಕೂ ಸಂಬಂಧವಿಲ್ಲ ಎಂದು ಅಭಿಪ್ರಾಯಪಟ್ಟರು.

ಅಧಿಕಾರಿಗಳು ಯಾವುದೇ ಕಾರಣಕ್ಕೂ ರಾಜಕಾರಣದಲ್ಲಿ ಅಥವಾ ಧರ್ಮ ಕಲಹಗಳಲ್ಲಿ ತೊಡಗಿಕೊಳ್ಳಬಾರದು. ಸಂವಿಧಾನವನ್ನು ರಕ್ಷಿಸಿದರೆ, ಸಂವಿಧಾನ ದೇಶವನ್ನು ರಕ್ಷಿಸುತ್ತದೆ. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಆದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಈ ಸಮಾನತೆ ಇಲ್ಲ. ಹೀಗೆ ಮುಂದುವರೆದರೆ, ಅಸಮಾನತೆಗೆ ಒಳಗಾದ ಜನರು ಸ್ವಾತಂತ್ರ್ಯ ಸೌಧವನ್ನು ಧ್ವಂಸಗೊಳಿಸುವ ಸಾಧ್ಯತೆ ಇದೆ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ. ಇದು ಎಲ್ಲ ನಾಗರಿಕರ ಕರ್ತವ್ಯ. ಇದನ್ನು ಅರ್ಥಮಾಡಿಕೊಳ್ಳುವ ಮೂಲಕ ಸಮಾಜದಲ್ಲಿ ಸುಧಾರಣೆ ತರಬಹುದಾಗಿದೆ. ಈಗ ಶಿಕ್ಷಣ ಅಭಿವೃದ್ಧಿಗೊಳ್ಳುತ್ತಿದೆ. ವಿದ್ಯಾವಂತರು ಜಾತ್ಯತೀತೆ, ವೈಚಾರಿಕತೆಯನ್ನು ಪಾಲಿಸಬೇಕು ಎಂದರು.

ಸಾಮಾಜಿಕ ಸುಧಾರಣೆ : ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಜಾರಿಗೊಳಿಸುವ ಭರವಸೆಯನ್ನು ನೀಡಿದೆ. ಈಗಾಗಲೇ 3 ಗ್ಯಾರಂಟಿ ಜಾರಿಯಾಗಿವೆ. ಆಗಸ್ಟ್ 24ರಂದು 4 ನೇ ಗ್ಯಾರಂಟಿ ಹಾಗೂ 5ನೇ ಗ್ಯಾರಂಟಿ ಡಿಸೆಂಬರ್ ಅಥವಾ ಜನವರಿ 2024ರಲ್ಲಿ ಜಾರಿಯಾಗುವ ಸಾಧ್ಯತೆ ಇದೆ. ಗ್ಯಾರಂಟಿ ಯೋಜನೆಗಳ ಯಶಸ್ಸು ಅಧಿಕಾರಿಗಳ ಮೇಲೆ ಅವಲಂಬಿತವಾಗಿದೆ. ಸ್ವಾತಂತ್ರ್ಯ ಭಾರತದ ಫಲವನ್ನು ಜನರಿಗೆ ತಲುಪಿಸುವ ಮೂಲಕ ಸಾಮಾಜಿಕ ಸುಧಾರಣೆಯನ್ನು ತರಬಹುದಾಗಿದೆ ಎಂದು ಹೇಳಿದರು.

ಇದೇ ದಿನ ಮಹಾತ್ಮ ಗಾಂಧಿಯವರು ಬ್ರಿಟಿಷರಿಗೆ ಅಂತಿಮ ಕರೆ ನೀಡಿದ ಕ್ವಿಟ್ ಇಂಡಿಯಾ ದಿನವನ್ನು ಇಂದು ಆಚರಣೆ ಮಾಡಲಾಗುತ್ತಿದೆ. ಪ್ರತಿಯೊಬ್ಬರೂ ಸಮಾಜಕ್ಕೆ ತಮ್ಮನ್ನು ತಾವು ಅರ್ಪಿಸಿಕೊಳ್ಳಬೇಕೆಂದು ಸಂಕಲ್ಪ ಮಾಡಬೇಕಾದ ದಿನ. ಅಧಿಕಾರಿಗಳಾಗಲಿ, ಜನರಾಗಲಿ, ಸಮಾಜ ನನಗೇನು ಮಾಡಿತು ಎನ್ನುವ ಬದಲು ಸಮಾಜಕ್ಕೆ ನನ್ನ ಕೊಡುಗೆ ಏನು ಎಂಬುದನ್ನು ಅರಿತುಕೊಳ್ಳಬೇಕು. ಸಮಾಜವನ್ನು ಬದಲಾವಣೆ , ಸುಧಾರಣೆ , ಸಮಾನತೆಯ ಸಮಾಜ ನಿರ್ಮಾಣದ ಜವಾಬ್ದಾರಿ ನಮ್ಮ ಮೇಲಿದೆ. ಇದೇ ತತ್ವವನ್ನು ಬಸವ, ಬುದ್ಧ, ಗಾಂಧೀಜಿ, ಅಂಬೇಡ್ಕರ್, ಕುವೆಂಪು, ನಾರಾಯಣಗುರು ಸೇರಿದಂತೆ ಹಲವು ದಾರ್ಶನಿಕರು ಬೋಧಿಸಿದ್ದಾರೆ ಎಂದರು.

ಅರ್ಥಪೂರ್ಣ ಶತಮಾನೋತ್ಸವ: 1919ರಲ್ಲಿ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಇದಕ್ಕೆ ಸ್ಫೂರ್ತಿ ಒಬ್ಬ ಐರ್ಲೆಂಡ್ ಅಧಿಕಾರಿ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತಾವಧಿಯನ್ನು ಸುವರ್ಣ ಯುಗ ಎನ್ನಲಾಗುತ್ತದೆ. ಅವರ ಕಾಲದಲ್ಲಿ ಆದಂತಹ ಅಭಿವೃದ್ಧಿ, ಸಾಮಾಜಿಕ ಕಾರ್ಯಗಳು, ಉದ್ದಿಮೆಗಳು ದೊಡ್ಡಮಟ್ಟದಲ್ಲಿ ಅಭಿವೃದ್ಧಿ ಆಗಿದ್ದವು. ಇದೇ ಅವಧಿಯಲ್ಲಿ ನಾಗರಿಕ ಸೇವೆ ಎಂಬ ಕಲ್ಪನೆಗೆ ಜೀವ ಬಂದಿತು. 1973ರಲ್ಲಿ ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಲಾಯಿತು. ಮೊದಲು ಮೈಸೂರು ಆಡಳಿತ ಸೇವೆ ಎಂದಿದ್ದು, ನಂತರ ಕರ್ನಾಟಕ ಆಡಳಿತ ಸೇವೆ ಎಂದು ಹೆಸರಿಸಲಾಯಿತು. ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ ತನ್ನ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡಿದೆ ಎಂದು ತಿಳಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾತನಾಡಿ, ಸ್ವಾತಂತ್ರ್ಯ ಬಂದು 75 ವರ್ಷವಾಗಿರುವ ಈ ಸಂದರ್ಭದಲ್ಲಿ ಭಾರತ ವಿಶ್ವದ ಐದು ಬಲಿಷ್ಠ ರಾಷ್ಟ್ರಗಳಲ್ಲಿ ಒಂದಾಗಿದೆ ಎಂದು ಹೇಳಿದರು. ಸಮೃದ್ಧ ರಾಷ್ಟ್ರ ಕಟ್ಟಲು ಎಲ್ಲರೂ ತನುಮನ ದುಡಿದು ದೇಶದ ಪ್ರಗತಿಯಲ್ಲಿ ಭಾಗಿಯಾಗಬೇಕು. ಭಾರತ ಬಿಟ್ಟು ತೊಲಗಿ ದಿನದ ಸ್ಮರಣಾರ್ಥ ಐದು ಮಂದಿ ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ಭೇಟಿ ನೀಡಿ ಅವರನ್ನು ಗೌರವಿಸುವುದಾಗಿ ತಿಳಿಸಿದರು.

ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಕೆಎಎಸ್ ಅಧಿಕಾರಿಗಳ ಪಾತ್ರ ಬಹಳ ಮುಖ್ಯವಾಗಿದೆ. ಸಂವಿಧಾನದ ಪ್ರಮುಖ ಅಂಗಗಳಲ್ಲಿ ಕಾರ್ಯಾಂಗವು ಒಂದು. ಕಾರ್ಯಾಂಗ ಉತ್ತಮವಾಗಿ ಕಾರ್ಯನಿರ್ವಹಿಸಿದರೆ, ಆಡಳಿತವೂ ಉತ್ತಮವಾಗಿರುತ್ತದೆ. ಜನರಿಗೂ ಸೇವೆಗಳು ದೊರೆಯುತ್ತವೆ ಎಂದು ಅಭಿಪ್ರಾಯಪಟ್ಟರು.

ಕಂದಾಯ ಸಚಿವ ಕೃಷ್ಣಬೈರೇಗೌಡ ಮಾತನಾಡಿ, ಕೆಎಎಸ್ ಅಧಿಕಾರಿಗಳು ರಾಜ್ಯದ ಆಡಳಿತದ ಬೆನ್ನೆಲುಬು ಇದ್ದಂತೆ. ಪ್ರತಿಯೊಬ್ಬರಿಗೂ ನ್ಯಾಯ ಕೊಡುವುದು ನಮ್ಮ ಗುರಿಯಾಗಿದ್ದು, ಜನರ ಆಶಯಗಳನ್ನು ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು. ಆಡಳಿತ ವ್ಯವಸ್ಥೆಯ ಬಗ್ಗೆ ಜನರು ಮಾತನಾಡುವುದನ್ನು ಗಮನದಲ್ಲಿಟ್ಟುಕೊಂಡು ಜನಪರ ಆಡಳಿತಕ್ಕೆ ಅಧಿಕಾರಿಗಳು ನಮ್ಮೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು. ದೇಶದ ಇತಿಹಾಸದಲ್ಲಿ ನೂರು ವರ್ಷ ಪೂರ್ಣಗೊಳಿಸಿದ ಸಂಘ ಇದಾಗಿದೆ. ಕೆಎಎಸ್ ಅಡಳಿತ ಸೇವೆ ನೂರು ವರ್ಷ ಪೂರೈಸಿದೆ. ಇದಕ್ಕೆ ಮೈಸೂರು ರಾಜರು ಅಡಿಪಾಯ ಹಾಕಿಕೊಟ್ಟಿದ್ದಾರೆ ಎಂದರು.

ಸಾಮಾಜಿಕ ನ್ಯಾಯಕ್ಕೆ ಆಗಿನ ಮೈಸೂರು ರಾಜಮನೆತನ ಇಡೀ ದೇಶಕ್ಕೆ ಮಾದರಿ ಆಗಿತ್ತು. ಮೈಸೂರು ಸಿವಿಲ್ ಸರ್ವಿಸ್ ಆರಂಭ ಮಾಡಿ ನಾಗರಿಕ ಆಡಳಿತ ಸೇವೆ ಸಿಗಲು ಅಡಿಪಾಯ ಹಾಕಿದರು. ಸ್ವಾತಂತ್ರ್ಯ ನಂತರ ಬಂದ ಸರ್ಕಾರಗಳು ಆಡಳಿತಕ್ಕೆ ಹೆಚ್ಚು ಗಮನ ಕೊಟ್ಟಿವೆ. ಜನಾದೇಶ ಕಾರ್ಯರೂಪಕ್ಕೆ ಬಂದ್ರೆ ಮಾತ್ರ ಒಳ್ಳೆಯ ಆಡಳಿತ ಆಗಿದೆ. ಜನರು ಬದಲಾವಣೆ ಬಯಸಿ ಕಾಂಗ್ರೆಸ್‌ಗೆ ಅಧಿಕಾರ ಕೊಟ್ಟಿದ್ದಾರೆ. ನಿಮ್ಮ ಸಹಕಾರ ಇದ್ದರೆ ಜನರ ಆಶೋತ್ತರಗಳನ್ನು ಈಡೇರಿಸಬಹುದು ಎಂದು ಸಿಎಂ ತಿಳಿಸಿದರು.

ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಡಾ. ಇ ವಿ ರಮಣರೆಡ್ಡಿ, ಕೆ.ಎ.ಎಸ್. ಅಧಿಕಾರಿಗಳ ಸಂಘದ ಅಧ್ಯಕ್ಷ ರವಿ ತಿರ್ಲಾಪೂರ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ : 'ಸರ್ಕಾರದ ರೈತ ವಿರೋಧಿ ಧೋರಣೆ': ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ; ಸಿ.ಟಿ.ರವಿ ಸೇರಿ ಹಲವರು ವಶಕ್ಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.