ETV Bharat / state

ಉಕ್ರೇನ್​​ನಲ್ಲಿರುವ ಕನ್ನಡಿಗರ ಜೊತೆ ದೂರವಾಣಿ ಮೂಲಕ ಮಾತನಾಡಿದ ಸಿಎಂ ಬೊಮ್ಮಾಯಿ

ಯುದ್ಧಪೀಡಿತ ಉಕ್ರೇನ್​ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳು ಸಿಎಂ ಜೊತೆ ಫೋನ್​ನಲ್ಲಿ ಮಾತನಾಡಿದ್ದಾರೆ. ಈ ವೇಳೆ ತಮ್ಮ ಪರಿಸ್ಥಿತಿಯನ್ನು ವಿವರಿಸಿದ ವಿದ್ಯಾರ್ಥಿಗಳು, 'ಕಾರ್ಖೀವ್​ದಿಂದ 30 ಕಿ‌.ಮೀ. ದೂರದ ಪ್ರದೇಶಕ್ಕೆ ನಾವು ನಡೆದುಕೊಂಡು ಬಂದಿದ್ದೇವೆ, ಸದ್ಯಕ್ಕೆ ನಾವು ಸುರಕ್ಷಿತವಾಗಿ ಇದ್ದೇವೆ' ಎಂದು ತಿಳಿಸಿದರು.

CM spoke with karnataka students who stuck in Ukraine

author img

By

Published : Mar 3, 2022, 4:26 PM IST

ಬೆಂಗಳೂರು: ಯುದ್ಧಪೀಡಿತ ಉಕ್ರೇನ್​​​ನಲ್ಲಿ ಸಂಕಷ್ಟಕ್ಕೆ ಸಿಲುಕಿದ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೂರವಾಣಿ ಮೂಲಕ ಮಾತನಾಡಿ, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು. ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಭರವಸೆ ನೀಡಿದ್ದಾರೆ.

ಮಾತುಕತೆ ವೇಳೆ ತಮ್ಮ ಪರಿಸ್ಥಿತಿಯನ್ನು ವಿವರಿಸಿದ ವಿದ್ಯಾರ್ಥಿಗಳು, 'ಕಾರ್ಖೀವ್ ದಿಂದ 30 ಕಿ‌.ಮೀ. ದೂರದ ಪ್ರದೇಶಕ್ಕೆ ನಾವು ನಡೆದುಕೊಂಡು ಬಂದಿದ್ದೇವೆ, ಸದ್ಯಕ್ಕೆ ನಾವು ಸುರಕ್ಷಿತವಾಗಿ ಇದ್ದೇವೆ' ಎಂದು ಮುಖ್ಯಮಂತ್ರಿಗಳಿಗೆ ತಿಳಿಸಿದರು. ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ ಮುಖ್ಯಮಂತ್ರಿ, ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳ ಜತೆ ಕರ್ನಾಟಕ ಸರ್ಕಾರ ನಿರಂತರವಾಗಿ ಸಂಪರ್ಕದಲ್ಲಿದೆ. ನಿಮಗೆ ಎಲ್ಲಾ ರೀತಿಯ ಸಹಕಾರ ಸಿಗುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ. ನಿಮ್ಮನ್ನು ಅಲ್ಲಿಂದ ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಸರ್ವ ಪ್ರಯತ್ನ ಮಾಡುತ್ತೇವೆ ಎಂಬ ಅಭಯ ನೀಡಿದರು.

ಇದನ್ನೂ ಓದಿ: ಉಡುಪಿಯಲ್ಲಿ ಭೀಕರ ಅಪಘಾತ : ಯಾಣ ನೋಡಲು ಬಂದು ಜೀವನದ ಪಯಣ ಮುಗಿಸಿದ ಯುವಕ

ರಾಜ್ಯದ ಸುಮಾರು 200 ಜನ ವಿದ್ಯಾರ್ಥಿಗಳು ಕಾರ್ಖೀವ್​​ನಲ್ಲಿ ಇದ್ದಾರೆ ಎನ್ನಲಾಗ್ತಿದ್ದು, ಸದ್ಯ ಗಗನಗೌಡ ಎಂಬ ಬೆಂಗಳೂರಿರು ಮೂಲದ ವಿದ್ಯಾರ್ಥಿ ಸೇರಿದಂತೆ ಇತರರ ಜತೆ ಸಿಎಂ ಮಾತನಾಡಿದರು. ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ. ಕೆ ಗೋಪಾಲಯ್ಯ ಉಪಸ್ಥಿತರಿದ್ದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.