ETV Bharat / state

ಸಿಎಂ ಆದ ನಾಲ್ಕು ಗಂಟೆಯಲ್ಲಿ ಹಿರಿಯ ನಾಗರಿಕರ ಮಾಸಾಶನ ಹೆಚ್ಚಿಸಿದ್ದೇನೆ: ಬೊಮ್ಮಾಯಿ

ಹಿರಿಯ ನಾಗರಿಕರ ಮಾಸಾಶನವನ್ನು ಮುಖ್ಯಮಂತ್ರಿಯಾದ ನಾಲ್ಕು ಗಂಟೆಯಲ್ಲಿ ಹೆಚ್ಚಿಗೆ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಹೇಳಿದ್ದಾರೆ.

KN_BNG_01
ಕಾರ್ಯಕ್ರಮ ಉದ್ಘಾಟಿಸಿದ ಸಿಎಂ
author img

By

Published : Oct 1, 2022, 5:58 PM IST

ಬೆಂಗಳೂರು: ಪ್ರತಿಯೊಬ್ಬರಿಗೂ ಆರೋಗ್ಯ ಬಹಳ ಮುಖ್ಯ. ಆರೋಗ್ಯ ಗಟ್ಟಿಯಾಗಿದ್ದರೆ ಎಲ್ಲ ಕೆಲಸಗಳನ್ನು ಮಾಡಬಹುದು. ಹೀಗಾಗಿ ಹಿರಿಯರ ಆರೋಗ್ಯಕ್ಕಾಗಿ ಹತ್ತು ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದೇವೆ. ಹಿರಿಯ ನಾಗರಿಕರ ಸೇವಾಭತ್ಯೆಯನ್ನು ಹೆಚ್ಚಿಗೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿರಿಯ ನಾಗರಿಕರ ಮಾಶಾಸನವನ್ನು ನಾನು ಮುಖ್ಯಮಂತ್ರಿಯಾದ ನಾಲ್ಕು ಗಂಟೆಯಲ್ಲಿ ಹೆಚ್ಚಿಗೆ ಮಾಡಿದ್ದೇನೆ. ಅಂಗವಿಕಲರ ಮಾಶಾಸನ ಹೆಚ್ಚಿಗೆ ಮಾಡಿದ್ದೇನೆ. ಅವರು ಸ್ವಾಭಿಮಾನದಿಂದ ಬದುಕುವಂತೆ ಮಾಡಲು ಮಾಶಾಸನ ಹೆಚ್ಚಳ ಮಾಡಿದ್ದೇನೆ. ಆರೋಗ್ಯ ಇಲಾಖೆಯಿಂದ 60 ವರ್ಷ ಆದವರಿಗೆ ಉಚಿತ ಆರೋಗ್ಯ ತಪಾಸಣೆಯನ್ನು ವರ್ಷದಲ್ಲಿ ಎರಡು ಬಾರಿ ಮಾಡಲಾಗುತ್ತಿದೆ.

ಈ ತಪಾಸಣೆಯ ವೇಳೆಯಲ್ಲಿ ಅವರಿಗೆ ಆರೋಗ್ಯ ತೊಂದರೆಯಿದ್ದರೆ, ಅದಕ್ಕೆ ಸರ್ಕಾರದ ವೆಚ್ಚದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. ಅಲ್ಲದೇ ರಾಜ್ಯದಲ್ಲಿ ಉಚಿತವಾಗಿ ಕಣ್ಣಿನ ತಪಾಸಣೆಯನ್ನು ಮಾಡುತ್ತಿದ್ದೇವೆ. ಈ ಸಂದರ್ಭದಲ್ಲಿ ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ನೀಡುವ ಮೂಲಕ ದೃಷ್ಠಿ ಸಮಸ್ಯೆ ನಿವಾರಣೆಗೆ ಕಾರ್ಯಕ್ರಮ ರೂಪಿಸಿದ್ದೇವೆ.

ಕಿವಿ ಕೇಳಿಸದ ಹಿರಿಯ ನಾಗರಿಕರಿಗೆ 500 ಕೋಟಿ ರೂ. ವೆಚ್ಚದಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ನೀಡುವ ಕಾರ್ಯಕ್ರಮ ಮಾಡಿದ್ದೇವೆ. ವಯಸ್ಸಾದ ಮೇಲೆ ಡಯಾಲಿಸಸ್​ಗೆ ಹಿರಿಯರು ಹೋಗುತ್ತಾರೆ. ಹಿರಿಯ ನಾಗರಿಕರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲು ಹೇಳಿ, 30 ಸಾವಿರ ಸೈಕಲ್ ಇತ್ತು. ಅದನ್ನು 60 ಸಾವಿರಕ್ಕೆ ಹೆಚ್ಚಿಸಲಾಗಿದೆ. ರಾಜ್ಯದಲ್ಲಿ ಕ್ಯಾನ್ಸರ್ ಕಿಮಿಯೋಥೆರಪಿ ಎರಡು ಪಟ್ಟು ಹೆಚ್ಚಿಸಿದ್ದೇವೆ. 12 ಹೊಸ ಕ್ಯಾನ್ಸರ್ ಕೇಂದ್ರಗಳನ್ನು ಪ್ರಾರಂಭ ಮಾಡುತ್ತಿದ್ದೇವೆ ಎಂದರು.

ಎಲ್ಲ ದೇಶದಲ್ಲಿಯೂ ಕೂಡ ವಯಸ್ಸಾದ ಕ್ರೀಯಾಶೀಲ ಹಿರಿಯರಿದ್ದಾರೆ. ಅವರ ಅನುಭವ ಮತ್ತು ಶಕ್ತಿಯನ್ನು ಬಳಕೆ ಮಾಡುವುದು ಜಾಣತನ. ಹೀಗಾಗಿ ನಾನು ವಿಶ್ವ ಹಿರಿಯ ನಾಗರಿಕರ ದಿನದಂದು ಒಂದು ತೀರ್ಮಾನವನ್ನು ಮಾಡಿದ್ದೇನೆ. ಎಲ್ಲೆಲ್ಲಿ ಸಾಧ್ಯವಿದೆ ಅಲ್ಲಿ ಹಿರಿಯ ನಾಗರಿಕರ ಸೇವೆಯನ್ನು ಸರ್ಕಾರದ ಸಹಾಯ, ಸಲಹೆಗಳಿಗಾಗಿ ತೆಗೆದುಕೊಳ್ಳುವ ಕೆಲಸವನ್ನು ನಾವು ಮಾಡುತ್ತೇವೆ.

ಇದರಿಂದ ಯಾವುದೇ ಯುವಕರಿಗೆ ತೊಂದರೆ ಆಗುವುದಿಲ್ಲ. ಖಾಲಿಯಾದ ಹುದ್ದೆಗಳಿಗೆ ಯುವಕರನ್ನೇ ತುಂಬುತ್ತೇವೆ. ಹಿರಿಯರ ಅನುಭವ ಬುತ್ತಿಯನ್ನು ನಾವು ಈ ನಾಡು ಕಟ್ಟಲು ಬಳಕೆ ಮಾಡಿಕೊಳ್ಳುತ್ತೇವೆ. ಇದರ ಸಲಹೆಯನ್ನು ನಾನು ನಮ್ಮ ಇಲಾಖೆಯ ಅಧಿಕಾರಿಗಳಿಗೆ ನೀಡಿ, ವಿಶೇಷವಾದ ಯೋಜನೆಯನ್ನು ರೂಪಿಸಲು ಸೂಚಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಸಚಿವರಾದ ಹಾಲಪ್ಪ ಆಚಾರ್, ವಿ. ಸೋಮಣ್ಣ, ಶಂಕರ್ ಪಾಟೀಲ ಮುನೇನಕೊಪ್ಪ, ಶಾಸಕರಾದ ಉದಯ್ ಗರುಡಾಚಾರ್ಯ, ರವಿ ಸುಬ್ರಹ್ಮಣ್ಯ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ರಾಜ್ಯಸಭೆ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಖರ್ಗೆ ರಾಜೀನಾಮೆ: ಯಾರಾಗ್ತಾರೆ ಪ್ರತಿಪಕ್ಷ ನಾಯಕ.. ಕೈ ಮುಂದಿರುವ ಸವಾಲುಗಳೇನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.