ದಾವೋಸ್/ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ದಸ್ಸಾಲ್ಸ್ ಸಿಸ್ಟಮ್ಸ್ ಹಾಗೂ ನೆಸ್ಟ್ಲೇ ಸಂಸ್ಥೆಯ ಮುಖ್ಯಸ್ಥರೊಂದಿಗೆ ಕರ್ನಾಟಕದಲ್ಲಿ ಹೂಡಿಕೆ ಅವಕಾಶಗಳ ಬಗ್ಗೆ ಚರ್ಚಿಸಿದರು.
ದಸ್ಸಾಲ್ಸ್ ಸಿಸ್ಟಮ್ಸ್: ರಾಜ್ಯದಲ್ಲಿ ವಿದ್ಯುತ್ ವಾಹನಗಳು ಮತ್ತು ಕೇಂದ್ರ ಉತ್ಪಾದನಾ ತಾಂತ್ರಿಕ ಸಂಸ್ಥೆಯ ಸಹಯೋಗದಲ್ಲಿ ಆಧುನಿಕ ಉತ್ಪಾದನೆ ಕ್ಷೇತ್ರ , ವಿದ್ಯಾರ್ಥಿಗಳಿಗೆ ಕೈಗಾರಿಕೆ 4.0, ಡಿಜಿಟಲ್ ತಂತ್ರಜ್ಞಾನದ ಬಗ್ಗೆ ತರಬೇತಿ, ರಾಜ್ಯದ ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಹೂಡಿಕೆ ಮಾಡಲು ದಸ್ಸಾಲ್ಸ್ ಸಿಸ್ಟಮ್ಸ್ ಉತ್ಸುಕತೆ ತೋರಿದರು.
ನೆಸ್ಟ್ಲೆ ಸಂಸ್ಥೆ: ನಂಜನಗೂಡಿನಲ್ಲಿ ನೆಸ್ಟ್ಲೆ ಇನ್ಸೆಂಟ್ ಕಾಫಿ ಕಾರ್ಖಾನೆ ನವೀಕರಣ ಹಾಗೂ ವಿಸ್ತರಣಾ ಕಾರ್ಯಕ್ಕೆ ನೆಸ್ಟ್ಲೆ ಸಂಸ್ಥೆ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಉಪಸ್ಥಿತರಿದ್ದರು.
ಇದನ್ನೂ ಓದಿ: ಪರಿಷತ್ ಚುನಾವಣೆ: ರಾತ್ರಿ ಅಥವಾ ನಾಳೆ ಅಭ್ಯರ್ಥಿ ಘೋಷಣೆ, ಹೊರಟ್ಟಿ ವಿರುದ್ಧ ಅಭ್ಯರ್ಥಿ ಕಣಕ್ಕೆ - ಹೆಚ್ಡಿಕೆ