ಬೆಂಗಳೂರು: ಕೊರೊನಾ ಸೋಂಕು ತಗುಲಿದ್ದ ವೇಳೆ ವೈದ್ಯಕೀಯ ಆರೈಕೆ ಮಾಡಿದ್ದ ಸಿಬ್ಬಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೃತಜ್ಞತೆ ಸಲ್ಲಿಸಿದ್ದು, ಕೋವಿಡ್-19 ನಂತರ ಕ್ಲಿಷ್ಟಕರ ಸನ್ನಿವೇಶದಲ್ಲಿಯೂ ಕರ್ತವ್ಯ ಮರೆಯದ ಆರೋಗ್ಯ ಸಿಬ್ಬಂದಿಗೆ ಸಿಎಂ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೋವಿಡ್-19 ನಿಂದ ಪೂರ್ಣ ಗುಣಮುಖರಾಗಿ ಇಂದು ಮಣಿಪಾಲ ಆಸ್ಪತ್ರೆಯಿಂದ ಬಿಡುಗಡೆಯಾದರು. ಆಸ್ಪತ್ರೆಯಿಂದ ಮರಳುವ ವೇಳೆ ತಮಗೆ ಚಿಕಿತ್ಸೆ ನೀಡಿದ ವೈದ್ಯರು, ಶುಶ್ರೂಷಕರು, ಸಿಬ್ಬಂದಿಗೆ ಮುಖ್ಯಮಂತ್ರಿ ಬಿಎಸ್ವೈ ಧನ್ಯವಾದ ಸಲ್ಲಿಸಿದ್ದಾರೆ.
ಕೊರೊನಾದಂತಹ ಕ್ಲಿಷ್ಟಕರ ಸನ್ನಿವೇಶದಲ್ಲಿ ತಮ್ಮ ಜೀವವನ್ನು ಲೆಕ್ಕಿಸಿದೇ ಚಿಕಿತ್ಸಾ ಕಾರ್ಯದಲ್ಲಿ ತೊಡಗಿರುವ ವೈದ್ಯಕೀಯ ಸಿಬ್ಬಂದಿ ಹಾಗೂ ನಾನ್ ಕೋವಿಡ್ ರೋಗಿಗಳಿಗೆ ಆರೈಕೆ ಮಾಡುತ್ತಿರುವ ಆರೋಗ್ಯ ಕ್ಷೇತ್ರದ ಎಲ್ಲ ಕೊರೊನಾ ವಾರಿಯರ್ಸ್ಗೂ ಕೃತಜ್ಞತೆ ಸಲ್ಲಿಸಿದರು. ಇನ್ನು ಇದೇ ವೇಳೆ ತಮ್ಮ ಚೇತರಿಕೆಗಾಗಿ ಹಾರೈಸಿದ ಸಮಸ್ತ ನಾಡಿದ ಜನರಿಗೆ ಕೃತಜ್ಞತೆ ಸಲ್ಲಿಸಲು ಸಿಎಂ ಮರೆಯಲಿಲ್ಲ.