ETV Bharat / state

ಕೊರೊನಾ ಗುಣಮುಖರಾದವರ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ ಸಿಎಂ - Dollars Colony Residence

ಕೊರೊನಾ ವೈರಸ್ ಮುಕ್ತರಾಗಿ ಬಂದ ಆರು ಜನರೊಂದಿಗೆ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತುಕತೆ ನಡೆಸಲಿದ್ದಾರೆ.

CM
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
author img

By

Published : Mar 31, 2020, 12:24 PM IST

ಬೆಂಗಳೂರು: ಕೊರೊನಾ ಸೋಂಕಿಗೆ ಸಿಲುಕಿ ಗುಣಮುಖರಾದವರ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಲಿದ್ದಾರೆ.
ಡಾಲರ್ಸ್ ಕಾಲೋನಿ ನಿವಾಸದಲ್ಲಿ ವಿಡಿಯೋ ಕಾನ್ಫರೆನ್ಸ್‌ ವ್ಯವಸ್ಥೆ ಮಾಡಿದ್ದು, ಆರು ಜನರೊಂದಿಗೆ ಸಿಎಂ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಅವರು ಕೊರೊನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ಬಗ್ಗೆ ವಿಚಾರ ವಿನಿಮಯ ಮಾಡಲಿದ್ದಾರೆ.
ಈ ನಡುವೆ ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್ ಕುಮಾರ್ ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದು, ಉಸ್ತುವಾರಿ ಹೊತ್ತಿರುವ ಚಾಮರಾಜನಗರ ಜಿಲ್ಲೆ ಹಾಗೂ ತಮ್ಮ ಸ್ವಕ್ಷೇತ್ರ ರಾಜಾಜಿನಗರದ ಪರಿಸ್ಥಿತಿ ಮತ್ತು ಕೈಗೊಂಡಿರುವ ವ್ಯವಸ್ಥೆ ಬಗ್ಗೆ ವಿವರಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.