ಬೆಂಗಳೂರು:ಅಕ್ಟೋಬರ್ 16 ಮತ್ತು 17ರಂದು ಎರಡು ದಿನ ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭಾಗಿಯಾಗಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಲಿದ್ದಾರೆ.
ಅಕ್ಟೋಬರ್ 21ರಂದು ಮಹಾರಾಷ್ಟ್ರದಲ್ಲಿ ಚುನಾವಣೆ ನಡೆಯುತ್ತಿದ್ದು, ಮಹಾರಾಷ್ಟ್ರದ ಸೊಲ್ಲಾಪುರದಿಂದ ಸಿಎಂ ಬಿಎಸ್ವೈ ಪ್ರಚಾರ ಮಾಡಲಿದ್ದಾರೆ. ನಾಳೆ ಮಧ್ಯಾಹ್ನ ಬೆಳಗಾವಿಗೆ ತೆರಳಲಿರುವ ಸಿಎಂ ರಾತ್ರಿ ಬೆಳಗಾವಿಯಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ನಾಡಿದ್ದು ಬೆಳಗ್ಗೆ ಸೊಲ್ಲಾಪುರದಿಂದ ಪ್ರಚಾರ ಆರಂಭಿಸಲಿದ್ದಾರೆ.
ಸೊಲ್ಲಾಪುರ, ಹಿಂಗೋಳಿ, ಸಾಂಗ್ಲಿ, ಲಾತೂರ್, ಬೀಡ್ ಮತ್ತು ಕೊಲ್ಲಾಪುರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಬಿಎಸ್ವೈ ಮತಯಾಚಿಸಲಿದ್ದಾರೆ. ಸಿಎಂ ಯಡಿಯೂರಪ್ಪಗೆ ಡಿಸಿಎಂ ಲಕ್ಷ್ಮಣ ಸವದಿ ಸಾಥ್ ನೀಡಲಿದ್ದಾರೆ. ಲಿಂಗಾಯತರು ಇರುವ ಕಡೆ ಸಿಎಂ ಬಿಎಸ್ವೈ ಅವರಿಂದ ಪ್ರಚಾರ ನಡೆಸುವ ಮೂಲಕ ಲಿಂಗಾಯತ ಮತಗಳನ್ನು ಸೆಳೆಯಲು ಮಹಾರಾಷ್ಟ್ರ ಸಿಎಂ ಮುಂದಾಗಿದ್ದಾರೆ ಎನ್ನಲಾಗಿದೆ. ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ಮುಗಿಸಿ ಅಕ್ಟೋಬರ್ 17ರ ರಾತ್ರಿ ಸಿಎಂ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.