ETV Bharat / state

ರಾಷ್ಟ್ರಪತಿಗಳ ಬೀಳ್ಕೊಡುಗೆ ಔತಣಕೂಟದಲ್ಲಿ ಭಾಗಿಯಾಗಲು ಸಿಎಂ ದೆಹಲಿ ಪ್ರವಾಸ..! - ನಾಳೆದೆಹಲಿಗೆ ಹೋಗಲಿದ್ದಾರೆ ಸಿಎಂ

ರಾಷ್ಟ್ರಪತಿಯಾಗಿ ನಾಳೆ ಅಧಿಕಾರವಧಿ ಪೂರ್ಣಗೊಳಿಸುತ್ತಿರುವ ರಾಮನಾಥ್ ಕೋವಿಂದ್ ಅವರ ಬೀಳ್ಕೊಡುಗೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಔತಣಕೂಟ ಏರ್ಪಡಿಸಿದ್ದಾರೆ.

ರಾಷ್ಟ್ರಪತಿಗಳ ಬೀಳ್ಕೊಡುಗೆ ಔತಣಕೂಟದಲ್ಲಿ ಭಾಗಿಯಾಗಲು ನಾಳೆ ಸಿಎಂ ದೆಹಲಿ ಪ್ರವಾಸ

author img

By

Published : Jul 21, 2022, 3:12 PM IST

ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬೀಳ್ಕೊಡುಗೆ ಔತಣಕೂಟದಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ನಾಳೆ ನವದೆಹಲಿಗೆ ತೆರಳುತ್ತಿದ್ದಾರೆ.

ರಾಷ್ಟ್ರಪತಿಯಾಗಿ ನಾಳೆ ಅಧಿಕಾರವಧಿ ಪೂರ್ಣಗೊಳಿಸುತ್ತಿರುವ ರಾಮನಾಥ್ ಕೋವಿಂದ್ ಅವರ ಬೀಳ್ಕೊಡುಗೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಔತಣಕೂಟ ಏರ್ಪಡಿಸಿದ್ದು, ಔತಣಕೂಟದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ನಾಳೆ ಮಧ್ಯಾಹ್ನ 2.55 ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣಿಸಲಿರುವ ಸಿಎಂ ಬೊಮ್ಮಾಯಿ‌, ರಾತ್ರಿ 8 ಗಂಟೆಗೆ ಖಾಸಗಿ ಹೋಟೆಲ್‌ನಲ್ಲಿ ನಡೆಯಲಿರುವ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ.

ನಂತರ ನಾಳೆ ರಾತ್ರಿ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಶನಿವಾರ ಬೆಳಗ್ಗೆ 8 ಗಂಟೆಗೆ ದೆಹಲಿಯಿಂದ ಹೊರಡಲಿರುವ ಸಿಎಂ, 10.50 ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಈ ದೆಹಲಿ ಭೇಟಿ ವೇಳೆ ಸರ್ಕಾರದ ಒಂದು ವರ್ಷದ ಸಾಧನಾ ಸಮಾವೇಶಕ್ಕೆ ಆಗಮಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಬೊಮ್ಮಾಯಿ‌ ಆಹ್ವಾನಿಸಲಿದ್ದಾರೆ. ನಂತರ ಅವಕಾಶ ಸಿಕ್ಕರೆ ಹೈಕಮಾಂಡ್ ನಾಯಕರ ಜೊತೆ ಸಚಿವ ಸಂಪುಟ ವಿಸ್ತರಣೆ ಕುರಿತು ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ : ಸಿದ್ದರಾಮಯ್ಯನವ್ರು ಬಿಜೆಪಿಗೆ ಮಾತ್ರ ಹೋಗಬೇಡ ಎಂದಿದ್ದರು - ಜಿ.ಟಿ. ದೇವೇಗೌಡ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.