ಬೆಂಗಳೂರು: ನಾಡಿನ ಸಮಸ್ತ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಗರಪಂಚಮಿ ಹಬ್ಬದ ಹಾರ್ದಿಕ ಶುಭಕಾಮನೆಗಳನ್ನ ತಿಳಿಸಿದ್ದಾರೆ.
ದೇವರು ಎಲ್ಲ ದುರಿತಗಳನ್ನು ಪರಿಹರಿಸಿ, ಎಲ್ಲರಿಗೂ ಸುಖ, ಸಂತೋಷ, ನೆಮ್ಮದಿ, ಆರೋಗ್ಯಗಳನ್ನು ಕರುಣಿಸಲಿ, ನಾಡಿಗೆ ಮಂಗಳವನ್ನು ಉಂಟುಮಾಡಲಿ ಎಂದು ಪ್ರಾರ್ಥಿಸೋಣ. ಮನೆಗಳಲ್ಲಿಯೇ ದೇವರನ್ನು ಪ್ರಾರ್ಥಿಸಿ, ಸಾಮಾಜಿಕ ಅಂತರ ಸೇರಿದಂತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಎಂದು ರಾಜ್ಯದ ಜನರಲ್ಲಿ ಸಿಎಂ ಮನವಿ ಮಾಡಿದ್ದಾರೆ.