ಬೆಂಗಳೂರು : ಚಿಕ್ಕಬಳ್ಳಾಪುರ ಹಾಗು ಮಂಡ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉಭಯ ಜಿಲ್ಲಾಡಳಿತದ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತುರ್ತು ವಿಡಿಯೋ ಸಂವಾದ ನಡೆಸಿದ್ದಾರೆ
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಸಂವಾದದ ಮೂಲಕ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಉಪಸ್ಥಿತಿಯಲ್ಲಿ ಅಲ್ಲಿನ ಜಿಲ್ಲಾಡಳಿತದ ಜೊತೆ ಸಿಎಂ ಸಮಾಲೋಚನೆ ನಡೆಸಿದರು.
ಮಹಾರಾಷ್ಟ್ರದಿಂದ ಬಂದವರಲ್ಲಿಯೇ ದೊಡ್ಡ ಪ್ರಮಾಣದಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿದ್ದು,ಕ್ವಾರಂಟೈನ್ ವ್ಯವಸ್ಥೆ, ಚಿಕಿತ್ಸಾ ವ್ಯವಸ್ಥೆ ಸೇರಿದಂತಹ ಕೋವಿಡ್ ಮುಂಜಾಗ್ರತಾ ಕ್ರಮಗಳ ಕುರಿತು ಮಾತುಕತೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡಿದರು. ಇದರ ಜೊತೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ಜೊತೆಯಲ್ಲಿಯೂ ಸಿಎಂ ವೀಡಿಯೋ ಸಂವಾದ ನಡೆಸಿದರು.
45 ಪ್ರಕರಣ ಇಂದು ಪತ್ತೆಯಾಗಿದ್ದು, ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತು ಸಿಎಂ ಸಮಾಲೋಚನೆ ನಡೆಸಿದರು.