ಬೆಂಗಳೂರು: ವೈಕುಂಠ ಏಕಾದಶಿ ಹಿನ್ನೆಲೆ ರಾಜಾಜಿನಗರದಲ್ಲಿರುವ ಇಸ್ಕಾನ್ ದೇವಾಲಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದರು.
ವಿಧಾನಸೌಧಕ್ಕೆ ತೆರಳುವ ಮುನ್ನ ಇಸ್ಕಾನ್ ದೇಗುಲಕ್ಕೆ ಭೇಟಿ ನೀಡಿದ ಸಿಎಂ ಬಿಎಸ್ವೈ ಅವರನ್ನು ಇಸ್ಕಾನ್ ಆಡಳಿತ ಮಂಡಳಿ ಆತ್ಮೀಯವಾಗಿ ಸ್ವಾಗತಿಸಿತು.
ದೇವಾಲಯದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ನಡೆಸಲಾಗುತ್ತಿರುವ ವಿಶೇಷ ಅಲಂಕಾರ, ಪೂಜಾ ಕೈಂಕರ್ಯಗಳ ವಿವರ ನೀಡಲಾಯಿತು. ನಂತರ ವಿಶೇಷ ಪೂಜೆ ಸಲ್ಲಿಕೆ ಮಾಡಿ ಪ್ರಾರ್ಥನೆ ಸಲ್ಲಿಸಿದ ಸಿಎಂ ವಿಧಾನಸೌಧಕ್ಕೆ ತೆರಳಿದ್ದಾರೆ.