ಬೆಂಗಳೂರು: ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಪತ್ರ ಬರೆದಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ಈ ಸಂದರ್ಭದಲ್ಲಿ ನಾಡಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸುವುದೊಂದೇ ಪರಿಣಾಮಕಾರಿ ಮತ್ತು ಈ ಸಂದರ್ಭಕ್ಕನುಗುಣವಾದ ಪರಿಹಾರವಾಗಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿಗಳಾದ ದೇವೇಗೌಡರ ಮನವಿಯನ್ನು ಪುರಸ್ಕರಿಸಿ, ಕೂಡಲೇ ಮಾತುಕತೆಗೆ ಆಹ್ವಾನಿಸುತ್ತಾರೆಂದು ನಂಬಿದ್ದೇನೆ. ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಹೆಚ್ ಡಿ ದೇವೇಗೌಡರ ಈ ನಿರ್ಧಾರದಿಂದಾದರೂ ಪ್ರೇರಣೆ ಪಡೆದು ರಾಜ್ಯ ಬಿಜೆಪಿ ನಾಯಕರು ಮತ್ತು ಆ ಪಕ್ಷದ ಸಂಸದರು ಸೇರಿ ಪ್ರಧಾನಮಂತ್ರಿ ಮಧ್ಯಪ್ರವೇಶಕ್ಕೆ ಒತ್ತಡ ಹೇರಬೇಕು. ಅತೀ ಶೀಘ್ರದಲ್ಲಿ ರಾಜ್ಯದ ಸರ್ವಪಕ್ಷಗಳ ನಾಯಕರ ನಿಯೋಗವನ್ನು ಪ್ರಧಾನ ಮಂತ್ರಿ ಭೇಟಿಮಾಡುವಂತೆ ಮಾಡಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ ಎಂದಿದ್ದಾರೆ.
-
ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ @narendramodi ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ @H_D_Devegowda ಅವರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ.
— CM of Karnataka (@CMofKarnataka) September 25, 2023 " class="align-text-top noRightClick twitterSection" data="
ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಮೋದಿ ಅವರು ಮಧ್ಯಸ್ಥಿಕೆ… https://t.co/paJrXOtxQ3
">ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ @narendramodi ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ @H_D_Devegowda ಅವರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ.
— CM of Karnataka (@CMofKarnataka) September 25, 2023
ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಮೋದಿ ಅವರು ಮಧ್ಯಸ್ಥಿಕೆ… https://t.co/paJrXOtxQ3ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ @narendramodi ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ @H_D_Devegowda ಅವರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ.
— CM of Karnataka (@CMofKarnataka) September 25, 2023
ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಮೋದಿ ಅವರು ಮಧ್ಯಸ್ಥಿಕೆ… https://t.co/paJrXOtxQ3
ನೆಲ-ಜಲ-ಭಾಷೆಯ ಹಿತಾಸಕ್ತಿಯ ರಕ್ಷಣೆಯ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳು ತಮ್ಮ ಭಿನ್ನಮತಗಳನ್ನು ಮರೆತು ಒಟ್ಟಾಗಿ ಸಮಸ್ಯೆಯ ಪರಿಹಾರಕ್ಕಾಗಿ ಪ್ರಯತ್ನ ಪಟ್ಟಿರುವ ಇತಿಹಾಸ ಕರ್ನಾಟಕ ರಾಜ್ಯಕ್ಕೆ ಇದೆ. ಈ ಪರಂಪರೆಯನ್ನು ಜೆಡಿಎಸ್ ಪಕ್ಷದಂತೆ ಬಿಜೆಪಿ ಕೂಡಾ ಪಾಲಿಸಿಕೊಂಡು ಬರುತ್ತದೆ ಎಂದು ನಾನು ನಂಬಿದ್ದೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕಾವೇರಿ ನೆಪದಲ್ಲಿ ಬಿಜೆಪಿ, ಜೆಡಿಎಸ್ ರಾಜಕೀಯ: ಸಿಎಂ ಸಿದ್ದರಾಮಯ್ಯ
ಮಾಜಿ ಪ್ರಧಾನಿ ಹೆಚ್ಡಿಡಿ ಹೇಳಿದ್ದೇನು?: ಕರ್ನಾಟಕ-ತಮಿಳುನಾಡು ರಾಜ್ಯಗಳ ನಡುವೆ ತಲೆದೋರಿರುವ ಕಾವೇರಿ ಜಲ ವಿವಾದದಲ್ಲಿ ಮಧ್ಯಪ್ರವೇಶ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿರುವುದಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ತಿಳಿಸಿದರು. ಕಾವೇರಿ ನೀರು ಹರಿಸಲು ತೀರ್ಪು ಬಂದಿರುವುದಕ್ಕೆ ಸುಪ್ರೀಂ ಕೋರ್ಟ್ ಅನ್ನು ದೂರುವುದಿಲ್ಲ, ಇದಕ್ಕೆ ರಾಜ್ಯ ಸರ್ಕಾರದ ವೈಫಲ್ಯ ಕಾರಣ ಎಂದು ಆರೋಪಿಸಿದರು.
ಶೇಷಾದ್ರಿಪುರಂನಲ್ಲಿರುವ ಪಕ್ಷದ ಕಚೇರಿ ಜೆ ಪಿ ಭವನದಲ್ಲಿ ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ನಾವು ಪ್ರಧಾನಿಯವರ ಗಮನಕ್ಕೆ ತಂದಿರುವ ವಾಸ್ತವಾಂಶಗಳ ಆಧಾರದಡಿ ಕೇಂದ್ರ ಸರ್ಕಾರ ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್ಗೆ ಒಂದು ಅರ್ಜಿ ಹಾಕಿಸಬೇಕು. ಅವರಿಗೆ ಸಿಕ್ಕಿರುವ ಮಾಹಿತಿ ಆಧಾರದಲ್ಲಿ ನಿಷ್ಪಕ್ಷಪಾತವಾದ ತಜ್ಞರ ಸಮಿತಿಯನ್ನು ಕಳುಹಿಸಿ ಎಲ್ಲಾ ಜಲಾಶಯಗಳ ಪರಿಶೀಲನೆ ಮಾಡಿ ನೀರು ಬಿಡಲು ಸಾಧ್ಯವಾ? ಬೆಳೆ ಸ್ಥಿತಿಗತಿ ಏನು? ಯಾವ ಯಾವ ಜಲಾಶಯಗಳಲ್ಲಿ ಎಷ್ಟು ನೀರಿದೆ? ಎಂಬುದನ್ನು ಅರಿತುಕೊಳ್ಳಬೇಕು. ಈಗಾಗಲೇ ಅನ್ಯಾಯ ಆಗೋಗಿದೆ. ಮುಂದಾದರೂ ಆಗುವ ಅನ್ಯಾಯವನ್ನು ತಡೆಗಟ್ಟಲು ಜಲ ಶಕ್ತಿ ಇಲಾಖೆಗೆ ಹೇಳಿ, ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿ ತಜ್ಞರ ಸಮಿತಿಯನ್ನು ಕಳುಹಿಸಲು ನಿವೇದನೆ ಮಾಡಬೇಕು ಎಂದು ಪ್ರಧಾನಿಗೆ ಪ್ರಾರ್ಥನೆ ಮಾಡುತ್ತೇನೆ ಎಂದರು.