ETV Bharat / state

ಕಾರ್ಮಿಕ ಕಾಯ್ದೆ ತಿದ್ದುಪಡಿ: ಈ ಬಗ್ಗೆ ಸಿಎಂ ಸ್ಪಷ್ಟನೆ ನೀಡ್ತಾರೆ - ಸಚಿವ ಶೆಟ್ಟರ್​ - ಜಗದೀಶ್‌ ಶೆಟ್ಟರ್‌ ಲೇಟೆಸ್ಟ್ ನ್ಯೂಸ್

ಇಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್ ಎಫ್​ಕೆಸಿಸಿಐ ಸದಸ್ಯರೊಂದಿಗೆ ಸಭೆ ನಡೆಸಿ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡರು.

Jagdish Shetter
ಜಗದೀಶ್ ಶೆಟ್ಟರ್​
author img

By

Published : May 16, 2020, 6:10 PM IST

ಬೆಂಗಳೂರು: ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಇಂದು ಎಫ್​ಕೆಸಿಸಿಐ ಸದಸ್ಯರಿಗೆ ಕೈಗಾರಿಕೆಗಳನ್ನು ಪ್ರಾರಂಭಿಸುವಂತೆ ಸೂಚನೆ ನೀಡಿದರು.

ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌

ನಗರದಲ್ಲಿಂದು ಎಫ್‌ಕೆಸಿಸಿಐ ಆಯೋಜಿಸಿದ್ದ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಮ್‌ಎಸ್‌ಎಂಇ ಹಾಗೂ ಕೈಗಾರಿಕೆಗಳ ಪುನಶ್ಚೇತನಕ್ಕೆ ಅಗತ್ಯವಿರುವ ಪ್ಯಾಕೇಜ್‌ಗಳನ್ನು ಘೋಷಣೆ ಮಾಡಿದೆ. ಸರ್ಕಾರ ಲಾಕ್‌ಡೌನ್‌ ಪ್ರಾರಂಭವಾದ ಸಮಯದಿಂದಲೂ ಕೂಡಾ ಕೈಗಾರಿಕಾ ಸಂಘ ಸಂಸ್ಥೆಗಳ ಜೊತೆ ಸಂವಾದ ನಡೆಸುತ್ತಿದೆ. ಅವರ ಕಷ್ಟಗಳನ್ನು ಅರಿತುಕೊಂಡು ಕೈಗಾರಿಕೆಗಳ ಪುನಶ್ಚೇತನಕ್ಕೆ ಅಗತ್ಯವಿರುವ ಕ್ರಮಗಳನ್ನು ಹಾಗೂ ಆದೇಶಗಳನ್ನು ನೀಡುತ್ತಾ ಬಂದಿದೆ ಎಂದರು.

ಲಾಕ್​​ಡೌನ್‌ ಸಂದರ್ಭದಲ್ಲಿ ಅಗತ್ಯ ಕೈಗಾರಿಕೆಗಳು ಕಾರ್ಯ ನಿರ್ವಹಿಸಲು ಹಾಗೂ ಲಾಕ್‌ಡೌನ್‌ ಸಡಿಲಿಕೆಯ ನಂತರ ಬಹುತೇಕ ಕೈಗಾರಿಕೆಗಳು ಪ್ರಾರಂಭಿಸಲು ನಾವು ಅಗತ್ಯ ಸಹಕಾರ ನೀಡುತ್ತ ಬಂದಿದ್ದೇವೆ. ಕೇಂದ್ರ ಸರ್ಕಾರ ಈಗಾಗಾಲೇ ಐತಿಹಾಸಿಕ ಪ್ಯಾಕೇಜ್​​​​​ ಘೋಷಣೆ ಮಾಡಿದೆ. ರಾಜ್ಯ ಸರಕಾರ ಕೂಡಾ ಎಮ್‌ಎಸ್‌ಎಂಇಗಳ ಪುನಶ್ಚೇತನಕ್ಕೆ ಪ್ಯಾಕೇಜ್‌ ಘೋಷಿಸಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಕೋವಿಡ್​ ನಿಯಂತ್ರಣ ಮಾಡುವಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಜನ ಸಾಮಾನ್ಯರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ನಾವು ಆರ್ಥಿಕ ಚಟುವಟಿಕೆಗಳಿಗೂ ಚಾಲನೆ ನೀಡಬೇಕಾಗಿದೆ. ಇಂತಹ ಸವಾಲಿನ ಸಂದರ್ಭದಲ್ಲಿ ಸಾರ್ಕರದ ಜೊತೆ ಕೈ ಜೋಡಿಸಿದ ಕೈಗಾರಿಕೋದ್ಯಮಿಗಳೂ ಹಾಗೂ ಸಂಘ ಸಂಸ್ಥೆಗಳಿಗೆ ಧನ್ಯವಾದಗಳು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲಿ ಕೇಂದ್ರ ಸರಕಾರ ನಮ್ಮ ಮುಂದಿನ ಗುರಿಗಳನ್ನು ಸ್ಪಷ್ಟಪಡಿಸಿದ್ದಾರೆ. ಸ್ಥಳೀಯವಾಗಿ ಉತ್ಪಾದನೆ ಮಾಡುವ ಹಾಗೂ ಹೊಸತನಕ್ಕೆ ತೆರೆದುಕೊಳ್ಳುವ ಮೂಲಕ ಹೊಸದನ್ನು ಸಾಧಿಸಬೇಕಾಗಿದೆ ಎಂದರು.

ಲಾಕ್​​ಡೌನ್​​ನಿಂದ ಸಾಮಾನ್ಯ ಪರಿಸ್ಥಿತಿಗೆ ನಾವು ಹೊಂದಿಕೊಳ್ಳಬೇಕಾಗಿದೆ. ಈ ಸಂಕಷ್ಟದ ಸಮಯವನ್ನು ಸಾಧನೆಯ ಮೆಟ್ಟಿಲಾಗಿ ಪರಿವರ್ತಿಸಿಕೊಳ್ಳಬೇಕಾಗಿದೆ. ಕೈಗಾರಿಕೋದ್ಯಮಿಗಳು ತಮ್ಮನ್ನ ತಾವು ಈ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿಸಿಕೊಳ್ಳಬೇಕು. ಕೈಗಾರಿಕೆಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು. ತಮ್ಮ ಕೈಗಾರಿಕೆಗಳನ್ನು ಪ್ರಾರಂಭಿಸಿ ದೇಶದ ಆರ್ಥಿಕತೆ ಪುನಶ್ಚೇತನಗೊಳ್ಳಲು ತಮ್ಮ ಸಹಕಾರ ನೀಡಬೇಕೆಂದು ಕರೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.