ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿಗಳು ಹಾಗೂ ಐಪಿಎಸ್ ಅಧಿಕಾರಿಗಳು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಹೊಸ ವರ್ಷದ ಶುಭ ಕೋರಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್, ಹಿರಿಯ ಐಎಎಸ್ ಅಧಿಕಾರಿಗಳಾದ ಶಾಲಿನಿ ರಜನೀಶ್, ಅನ್ಬುಕುಮಾರ್, ಡಿಜಿಪಿ ನೀಲಮಣಿ ಎನ್.ರಾಜು, ಗುಪ್ತಚರ ಇಲಾಖೆ ಎಡಿಜಿಪಿ ಕಮಲ್ ಪಂತ್ ಸೇರಿ ಹಿರಿಯ ಅಧಿಕಾರಿಗಳು ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿ ಸಿಎಂ ಬಿಎಸ್ವೈಗೆ ಹೊಸ ವರ್ಷದ ಶುಭ ಕೋರಿದರು. ಈ ವೇಳೆ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಅಭಿನಂದನೆ ಸಲ್ಲಿಸಿದರು.