ETV Bharat / state

ಬರಪೀಡಿತ ಪ್ರದೇಶ ಘೋಷಣೆಗೆ ಇರುವ ಮಾನದಂಡ ಬದಲಾಯಿಸುವಂತೆ ಶೀಘ್ರ ಕೇಂದ್ರಕ್ಕೆ ಪತ್ರ: ಸಚಿವ ಕೃಷ್ಣಬೈರೇಗೌಡ

ನೈರುತ್ಯ ಮುಂಗಾರು ಮಳೆ ಕೊರತೆಯಿಂದಾಗಿ ಬೆಳೆ ಹಾನಿ ಉಂಟಾಗಿದ್ದು, ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಈ ಕೂಡಲೇ ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡುವಂತೆ ಆಡಳಿತ ಪಕ್ಷದ ಶಾಸಕರು ವಿಧಾನಸಭೆಯಲ್ಲಿ ಒತ್ತಾಯಿಸಿದರು. ಇದಕ್ಕೆ ಕಂದಾಯ ಸಚಿವ ಕೃಷ್ಣಬೈರೇಗೌಡ ಉತ್ತರ ನೀಡಿದರು.

Minister Krishna Byre gowda spoke in the assembly.
ವಿಧಾನಸಭೆಯಲ್ಲಿ ಕಂದಾಯ ಸಚಿವ ಕೃಷ್ಣಭೈರೇಗೌಡ ಮಾತನಾಡಿದರು.
author img

By

Published : Jul 21, 2023, 3:54 PM IST

Updated : Jul 21, 2023, 5:24 PM IST

ಕಂದಾಯ ಸಚಿವ ಕೃಷ್ಣಬೈರೇಗೌಡ ವಿಧಾನಸಭೆಯಲ್ಲಿ ಮಾತನಾಡಿದರು.

ಬೆಂಗಳೂರು: ನೈರುತ್ಯ ಮುಂಗಾರು ಮಳೆ ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆಯಾಗಿರುವ ಹಿನ್ನೆಲೆ ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಲು ಇರುವ ಮಾನದಂಡಗಳನ್ನು ಬದಲಾಯಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒಂದೆರಡು ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆಯಲಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಯಲ್ಲಿ ಇಂದು ತಿಳಿಸಿದರು.

ಬರಗಾಲ ಘೋಷಣೆ ಮಾಡಬೇಕು ಎಂದು ಶಾಸಕರು ಒತ್ತಾಯಿಸಿದ ವಿಚಾರಕ್ಕೆ ಉತ್ತರ ನೀಡಿದ ಸಚಿವರು, ರಾಜ್ಯದ ಹಲವೆಡೆ ಎದುರಾಗಿರುವ ಬರಪರಿಸ್ಥಿಯನ್ನು ನಿಭಾಯಿಸಲು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಲು ಆಯಾ ಜಿಲ್ಲೆಗಳಿಗೆ ಅನುಗುಣವಾಗಿ ಹೆಚ್ಚುವರಿ ಹಣ ಬಿಡುಗಡೆ ಮಾಡುವ ಬಗ್ಗೆಯೂ ಮುಖ್ಯಮಂತ್ರಿ ಘೋಷಣೆ ಮಾಡಲಿದ್ದಾರೆ ಎಂದು ಹೇಳಿದರು.

ಬರಗಾಲ ಘೋಷಣೆ ಸಂಬಂಧ ರಾಜ್ಯ ಸರ್ಕಾರ ಏಕಾಏಕಿ ಘೋಷಣೆ ಮಾಡಲು ಅವಕಾಶವಿಲ್ಲ. ಕೇಂದ್ರ ಸರ್ಕಾರ 2016ರಲ್ಲಿ ರೂಪಿಸಿದ್ದ ಮಾನದಂಡಗಳನ್ನು 2020ರಲ್ಲಿ ಪರಿಷ್ಕರಣೆ ಮಾಡಿ ಪ್ರಕಟಿಸಿದೆ. ಇದರ ಪ್ರಕಾರ ವಾಡಿಕೆ ಮಳೆಗಿಂತ ಶೇ.60ರಷ್ಟು ಮಳೆ ಕೊರತೆಯಾಗಿರಬೇಕು. ಕನಿಷ್ಠ ಮೂರು ವಾರ ಸತತವಾಗಿ ಮಳೆ ಬಂದಿರಬಾರದು ಎಂಬ ಷರತ್ತುಗಳನ್ನು ವಿಧಿಸಿದೆ. ಇದರ ಪ್ರಕಾರ ಮುಂಗಾರು ಹಂಗಾಮಿನ ಮಧ್ಯೆ ಮಳೆಯಾಗದಿದ್ದರೆ, ಆಗಸ್ಟ್​​ನ ಮೊದಲು ಬರ ಘೋಷಣೆ ಮಾಡಲು ಅವಕಾಶವಿಲ್ಲ. ಆದರೆ, ಪರಿಸ್ಥಿತಿ ತೀವ್ರ ವಿಕೋಪಕ್ಕೆ ತಿರುಗಿದರೆ ಮಾತ್ರವೇ ಅಕ್ಟೋಬರ್ ಮೊದಲ ವಾರದಲ್ಲಿ ಬರಗಾಲ ಪರಿಸ್ಥಿತಿ ಘೋಷಣೆ ಮಾಡಬಹುದು ಎಂದು ರಾಜ್ಯಗಳಿಗೆ ಸೂಚಿಸಿದೆ ಎಂದರು.

ಈ ಮಾನದಂಡಗಳಿಗೆ ರಾಜ್ಯದಲ್ಲಿನ ಕೆಲವು ತಾಲೂಕುಗಳಲ್ಲಿ ಎದುರಾಗಿರುವ ತಳಮಟ್ಟದ ಪರಿಸ್ಥಿತಿಗೆ ಹೋಲಿಕೆ ಮಾಡಿದರೆ ತಾಳಮೇಳ ಇಲ್ಲದಂತಾಗಿದೆ. ಕೇಂದ್ರದ ನಿಯಮಗಳನ್ನು ಪಾಲಿಸಬೇಕು ಎಂದು ಕಾದು ಕುಳಿತರೆ, ಸಂಕಷ್ಟದಲ್ಲಿರುವ ಜನರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ. ಈ ಹಿನ್ನೆಲೆ ಮಾನದಂಡಗಳನ್ನು ಬದಲಾಯಿಸಬೇಕು ಎಂದು ಕೇಂದ್ರಕ್ಕೆ ಒಯತ್ತಾಯಿಸುವ ಪತ್ರ ಸಿದ್ಧವಾಗಿದೆ. ಮುಖ್ಯಮಂತ್ರಿಗಳು ವಿತ್ತಿಯ ಕಲಾಪದಲ್ಲಿ ಬ್ಯುಸಿಯಾಗಿದ್ದು, ಅವರು ಬಿಡುವಾದ ಕೂಡಲೇ ಕೇಂದ್ರಕ್ಕೆ ಪತ್ರವನ್ನು ಕಳುಹಿಸಿಕೊಡಲಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

ಜೂನ್​​​ನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಆಗದ ಮಳೆ: ಮುಂಗಾರು ಮಳೆ ಜೂನ್‍ ತಿಂಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಆಗಲಿಲ್ಲ. ಜುಲೈ ತಿಂಗಳಲ್ಲಿ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಮುಖ್ಯಮಂತ್ರಿಗಳು ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​​ ನಡೆಸಿ, ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಜಿಲ್ಲೆಗಳಿಗೆ ಒಂದು ಕೋಟಿ ರೂ. ಹಣವನ್ನು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಒದಗಿಸಲು ತೀರ್ಮಾನಿಸಲಾಗಿದೆ.

ಪ್ರಸ್ತುತ 110 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತಿದ್ದು, ಈ ಹಣವನ್ನು ಸರ್ಕಾರವೇ ಭರಿಸುತ್ತಿದೆ. ಗ್ರಾಮ ಪಂಚಾಯ್ತಿಗಳಿಗೆ ಹೊರೆ ಹಾಕಿಲ್ಲ. 330 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸಲು 400 ಕ್ಕೂ ಹೆಚ್ಚು ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಒದಗಿಸುತ್ತಿದ್ದು, ಇದರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮಾಹಿತಿ ನೀಡಿದರು.

ಸಚಿವರ ಅಸಮಾಧಾನ: ಚುನಾವಣೆಗೆ ಮುನ್ನ ಜಲಾಶಯಗಳಲ್ಲಿನ ನೀರನ್ನು ಅಧಿಕಾರಿಗಳು ಅಶಿಸ್ತಿನಿಂದ ಬಳಕೆ ಮಾಡಿದ್ದಾರೆ. ಕಾಲುವೆಗಳಿಗೆ ಮನಸೋ ಇಚ್ಛೆ ಬಿಡುಗಡೆ ಮಾಡಿದ್ದಾರೆ. ಕಳೆದ ನವೆಂಬರ್ ವರೆಗೂ ಕೆಲವು ಜಲಾಶಯಗಳು ತುಂಬಿ ತುಳುಕುತ್ತಿದ್ದವು. ಜನವರಿಯಿಂದ ಮೇ ವರೆಗೆ ನೀರನ್ನು ಯದ್ವಾತದ್ವಾ ಬಳಕೆ ಮಾಡಿದ್ದರಿಂದ ಜಲಾಶಯಗಳ ನೀರಿನ ಮಟ್ಟ ಕೆಳಮಟ್ಟಕ್ಕೆ ಇಳಿದಿದೆ. ನಮ್ಮ ಪುಣ್ಯ ಎಂಬಂತೆ ಜುಲೈನಲ್ಲಿ ಮಳೆ ಬಂದಿದ್ದರಿಂದ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾವೇರಿ ನದಿಪಾತ್ರದ ನಾಲ್ಕು ಜಲಾಶಯಗಳಲ್ಲಿ 18,687 ಕ್ಯೂಸೆಕ್​​​ನಷ್ಟು ನೀರಿನ ಒಳಹರಿವು ಇದೆ. ಕೃಷ್ಣಾ ನದಿ ಪಾತ್ರದ 6 ಜಲಾಶಯಗಳಲ್ಲಿ 76,264 ಕ್ಯೂಸೆಕ್​ನಷ್ಟು ನೀರಿನ ಒಳಹರಿವು ಇದೆ. ಹಾಗಾಗಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಿದೆ. ಅಧಿವೇಶನ ಮುಗಿದ ಬಳಿಕ ಕಲಬುರಗಿ ಮತ್ತು ಮೈಸೂರು ಕಂದಾಯ ವಿಭಾದ ಸಭೆ ನಡೆಸುವುದಾಗಿ ಸಚಿವರು ಹೇಳಿದರು.

ಸ್ಪೀಕರ್ ಸಲಹೆ : ತಾಲೂಕಿನ ಪರಿಸ್ಥಿತಿಗೆ ಅನುಗುಣವಾಗಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಹಣ ನೀಡಬೇಕು ಹಾಗೂ ಶಾಸಕರ ಅಧ‍್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸುವುದು ಸೂಕ್ತ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ಸಲಹೆ ಮಾಡಿದರು. ರಾಜ್ಯದ ಒಂದೊಂದು ಕ್ಷೇತ್ರದಲ್ಲಿ ಒಂದು ರೀತಿಯ ಕುಡಿವ ನೀರಿನ ಸಮಸ್ಯೆ ಇದೆ. ಕೆಲವು ತಾಲೂಕಿನಲ್ಲಿ ಸಮಸ್ಯೆ ಇರುವುದಿಲ್ಲ. ಕೆಲವು ತಾಲೂಕಿನಲ್ಲಿ ಸಮಸ್ಯೆ ಹೆಚ್ಚಾಗಿರುತ್ತದೆ. ಪರಿಸ್ಥಿತಿಗೆ ಅನುಗುಣವಾಗಿ ಹಣ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ನಂತರ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾತನಾಡಿ, ಮುಂದಿನವಾರ ಸಚಿವ ಸಂಪುಟ ಉಪಸಮಿತಿ ಸಭೆ ನಡೆಸಿ ಹೆಚ್ಚಿನ ಅನುದಾನ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು. ನರೇಗಾ ಯೋಜನೆಯಡಿ ವಾರ್ಷಿಕ 100 ದಿನ ಕೆಲಸ ನೀಡಲು ಅವಕಾಶವಿದೆ. ಇದಕ್ಕಿಂತ ಹೆಚ್ಚು ದಿನ ಕೆಲಸ ನೀಡುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು. ಅವರು ಅನುಮತಿ ಕೊಟ್ಟ ತಕ್ಷಣ ಹೆಚ್ಚು ದಿನಗಳ ಕೆಲಸ ನೀಡುವ ಭರವಸೆ ನೀಡಿದರು.

ಬರಪೀಡಿತ ಪ್ರದೇಶ ಘೋಷಣೆಗೆ ಶಾಸಕರು ಒತ್ತಾಯ: ಮುಂಗಾರು ಮಳೆ ಕೊರತೆಯಿಂದಾಗಿ ಬೆಳೆ ಹಾನಿ ಉಂಟಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದೆ. ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಆಡಳಿತ ಪಕ್ಷದ ಶಾಸಕರು ವಿಧಾನಸಭೆಯಲ್ಲಿ ಒತ್ತಾಯಿಸಿದ್ದಾರೆ.
ಇಂದು ನಿಯಮ 69ರ ಮೇರೆಗೆ ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಕುಡಿಯುವ ನೀರು ಹಾಗೂ ರೈತರಿಗೆ ಬಿತ್ತನೆಯಲ್ಲಿ ಸಮಸ್ಯೆಯಾಗಿರುವ ಕುರಿತು ಪ್ರಸ್ತಾಪ ಮಾಡಿದ ಶಾಸಕ ಜೆ.ಟಿ.ಪಾಟೀಲ್, ಎಂ.ವೈ.ಪಾಟೀಲ್, ರಾಜು ಕಾಗೆ, ಪುಟ್ಟರಂಗಶೆಟ್ಟಿ, ಯು.ಬಿ.ಬಣಕಾರ್ ಮತ್ತಿತರರು ಮಾತನಾಡಿ, ಬರಪೀಡಿತ ಪ್ರದೇಶ ಘೋಷಣೆ ಮಾಡುವಂತೆ ಕೋರಿದರು.

ಮಳೆ ಕೊರತೆಯಿಂದ ಬೆಳೆ ಹಾನಿ: ಆರಂಭದಲ್ಲಿ ಮಾತನಾಡಿದ ಜೆ.ಟಿ.ಪಾಟೀಲ್ ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆ ಕೊರತೆಯಿಂದಾಗಿ ಬೆಳೆ ಹಾಳಾಗಿದೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳು ಮಳೆ ಕೊರತೆಯಿಂದ ಬರಪೀಡಿತ ಪ್ರದೇಶಗಳಾಗಿವೆ. ಇತ್ತೀಚೆಗೆ ಕಲ್ಯಾಣ ಕರ್ನಾಟಕದಲ್ಲಿ ಮಳೆಯಾಗುತ್ತಿದೆ. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ 18 ಸಕ್ಕರೆ ಕಾರ್ಖಾನೆಗಳಿವೆ. ಮಳೆ ಕೊರತೆಯಿಂದಾಗಿ ಕಬ್ಬು ಬೆಳೆ ಹಾಳಾಗಿದೆ.ಏತ ನೀರಾವರಿ ಮೂಲಕವು ನೀರು ಒದಗಿಸುತ್ತಿಲ್ಲ. ಹೀಗಾಗಿ ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಬೇಕು ಹಾಗೂ ಬೆಳೆಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ತೊಗರಿ ಬಿತ್ತನೆ ಆಗಿಲ್ಲ: ಮುಂಗಾರು ವೈಫಲ್ಯದಿಂದ ಕಲಬುರಗಿ ಜಿಲ್ಲೆ ಅಫ್ಜಲ್‍ಪುರ ಕ್ಷೇತ್ರದಲ್ಲಿ ತೊಗರಿ ಬಿತ್ತನೆಯಾಗಿಲ್ಲ. ಭೀಮಾನದಿಯಲ್ಲಿ ನೀರಿಲ್ಲದೆ ಸಮಸ್ಯೆ ಉಂಟಾಗಿದೆ. ಮಹಾರಾಷ್ಟ್ರದಿಂದ ನೀರು ಬಿಡಿಸಬೇಕು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ 200 ದಿನಗಳಿಗೆ ಉದ್ಯೋಗವನ್ನು ಹೆಚ್ಚಿಸಬೇಕು. 15 ಸಾವಿರ ಹೆಕ್ಟೇರ್ ಕಬ್ಬು ಬೆಳೆದಿದ್ದು, ಅರ್ಧದಷ್ಟು ಒಣಗಿದೆ. ಹಾನಿಗೆ ಪರಿಹಾರ ನೀಡಬೇಕು ಹಾಗೂ ಬರಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಎಂ.ವೈ.ಪಾಟೀಲ್ ಮನವಿ ಮಾಡಿದರು.

8 ತಿಂಗಳಿಂದ ಮಳೆಯೇ ಆಗಿಲ್ಲ: ಹಾವೇರಿ ಜಿಲ್ಲೆಯಲ್ಲಿ 8 ತಿಂಗಳಿನಿಂದ ಮಳೆಯೇ ಆಗಿಲ್ಲ. ಮುಂಗಾರು ಆರಂಭ ವಿಳಂಬವಾಯಿತು. ಇತ್ತೀಚೆಗೆ ಮಳೆಯಾಗುತ್ತಿದ್ದು, ಬಿತ್ತನೆ ಶುರುವಾಗಿದೆ. ಆದರೆ ಕುಡಿಯುವ ನೀರಿನ ಸಮಸ್ಯೆಯಿದೆ. ಯಾವುದೇ ತಾಲೂಕಿಗೆ ಹೋಗಿ ಸಭೆ ಮಾಡಿಲ್ಲ. ನರೇಗಾ ಯೋಜನೆಯಡಿ ನೀಡುವ ಉದ್ಯೋಗವನ್ನು 200 ದಿನಕ್ಕೆ ಹೆಚ್ಚಳ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಶಾಸಕ ಯು ಬಿ ಬಣಕಾರ ಒತ್ತಾಯಿಸಿದರು.

ಕಬಿನಿ ಜಲಾಶಯದಲ್ಲೂ ನೀರಿಲ್ಲ: ಬರ ಬಂದಾಗ ಮೊದಲು ಕಾಣಿಸುವುದೇ ಚಾಮರಾಜನಗರ ಜಿಲ್ಲೆ. ಕಬಿನಿ ಜಲಾಶಯದಲ್ಲೂ ನೀರಿಲ್ಲ. ಬೆಳೆ ಎಲ್ಲ ಹಾಳಾಗಿದೆ. ಚಾಮರಾಜನಗರ ಜಿಲ್ಲೆಯನ್ನು ಬರಪೀಡಿತವೆಂದು ಘೋಷಿಸಬೇಕು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಶಾಸಕ ಅಶೋಕ್ ಮನಗುಳಿ ಮಾತನಾಡಿ, ವಿಜಯಪುರ ಅಮೆರಿಕಾದ ಕ್ಯಾಲಿಫೋರ್ನಿಯಾ ಆಗಬೇಕಿತ್ತು. ಆದರೆ ಮಳೆ ಕೊರತೆಯಿಂದ ದ್ರಾಕ್ಷಿ, ದಾಳಿಂಬೆ, ನಿಂಬೆ ಬೆಳೆ ಹಾಳಾಗುತ್ತಿದೆ. ಈ ಬೆಳೆಗಳಿಗೆ ಟ್ಯಾಂಕರ್ ಮೂಲಕ ನೀರು ಒದಗಿಸಲು ಹಣಕಾಸಿನ ನೆರವು ನೀಡಬೇಕು. ತೋಟಗಾರಿಕೆ ಇಲಾಖೆಯಿಂದ ಬೆಳೆ ಹಾನಿ ಸರ್ವೆ ಮಾಡಿಸಿ ಪರಿಹಾರ ನೀಡಬೇಕು. ಜಾನುವಾರುಗಳಿಗೆ ನೀರು ಒದಗಿಸಬೇಕೆಂದು ಶಾಸಕ ಶಾಸಕ ಪುಟ್ಟರಂಗ ಶೆಟ್ಟಿ ಕೋರಿದರು.

ಕಾಂಗ್ರೆಸ್ ಪಕ್ಷದ ರಾಜು ಕಾಗೆ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಬಂದಾಗ ಹಳ್ಳಿಗಳ ಮುಳುಗಡೆ ಸಮಸ್ಯೆಯಾಗುತ್ತದೆ. ಇನ್ನರ್ಧ ಭಾಗ ಬರ ಪರಿಸ್ಥಿತಿ ಇರುತ್ತದೆ. ಕೃಷ್ಣಾ ನದಿಯಲ್ಲಿ ಎರಡುಮೂರು ತಿಂಗಳಿನಿಂದ ನೀರಿಲ್ಲದೆ ಕಬ್ಬು ಹಾಳಾಗಿದ್ದು, ರೈತರು ಕಂಗಾಲಾಗಿದ್ದಾರೆ. ಅಥಣಿ, ಕಾಗವಾಡ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿ ಕಬ್ಬು ಬೆಳೆಗಾರರಿಗೆ ಪರಿಹಾರ ನೀಡಬೇಕೆಂದು ಮನವಿ ಮಾಡಿದರು.

ರಾಜ್ಯಕ್ಕೆ ಬರಬೇಕಾದ ನೀರು ಬರುತ್ತಿಲ್ಲ: ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಜಲಾಶಯ ನಿರ್ಮಾಣ ಮಾಡಿದ್ದು, ರಾಜ್ಯಕ್ಕೆ ಬರಬೇಕಾದ ನೀರು ಬರುತ್ತಿಲ್ಲ. ಭೀಮಾ, ಬೆಣ್ಣೆತೊರ, ಅಮರ್ಗ ನದಿಗಳಲ್ಲಿ ನೀರಿಲ್ಲ. ಮಳೆ ಕೈಕೊಟ್ಟ ಮೇಲೆ ಏನೂ ಮಾಡಲು ಸಾಧ್ಯವಿಲ್ಲ. ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ತಕ್ಷಣಕ್ಕೆ ಕುಡಿಯುವ ನೀರಿನ ಸಮಸ್ಯೆಗೆ ಆದ್ಯತೆ ನೀಡಬೇಕು. ಅಂತರ್ಜಲ ಹೆಚ್ಚಳಕ್ಕೆ ಕ್ರಮ ಕೈಗೊಂಡು ಅರಣ್ಯವನ್ನು ಬೆಳೆಸಬೇಕು ಎಂಬ ಸಲಹೆಯನ್ನು ಶಾಸಕ ಬಿ.ಆರ್.ಪಾಟೀಲ್ ನೀಡಿದರು.

ಇದನ್ನೂಓದಿ:ಬಿಜೆಪಿ ಶಾಸಕರಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ

Last Updated : Jul 21, 2023, 5:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.