ETV Bharat / state

ಕ್ವಾರಿ ಸ್ಫೋಟದಲ್ಲಿ ಐವರ ಸಾವು: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಕೊಡಲು ಸಿಎಂ ಸೂಚನೆ - ಶಿವಮೊಗ್ಗ ಕಲ್ಲು ಕ್ವಾರಿ ದುರಂತ

ಶಿವಮೊಗ್ಗ ಸಮೀಪ ಹುಣಸೋಡು ಗ್ರಾಮದಲ್ಲಿ ಕಲ್ಲುಗಣಿಗಾರಿಕೆಯಲ್ಲಿ ಸ್ಫೋಟ ಸಂಭವಿಸಿದೆ ಐದು ಜನ ಮೃತರಾಗಿದ್ದಾರೆ ಎಂದು ಸಿಎಂ ಬಿಎಸ್​ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರಧನ ನೀಡುವುದಾಗಿ ಘೋಷಿಸಿದ್ದಾರೆ. ಇನ್ನು ನಾಳೆ ಯಡಿಯೂರಪ್ಪ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

cm yadiyurappa announces 5 lakh for quarry blast victims family
ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಕೊಡಲು ಸಿಎಂ ಸೂಚನೆ
author img

By

Published : Jan 22, 2021, 12:46 PM IST

ಬೆಂಗಳೂರು: ಶಿವಮೊಗ್ಗ ಕಲ್ಲು ಕ್ವಾರಿ ಸ್ಫೋಟ ಪ್ರಕರಣದ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹೇಳಿದ್ದಾರೆ.

ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಕೊಡಲು ಸಿಎಂ ಸೂಚನೆ
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ರಾತ್ರಿ ಶಿವಮೊಗ್ಗ ಸಮೀಪ ಹುಣಸೋಡು ಗ್ರಾಮದಲ್ಲಿ ಕಲ್ಲುಗಣಿಗಾರಿಕೆಯಲ್ಲಿ ಸ್ಫೋಟ ಸಂಭವಿಸಿದೆ ಐದು ಜನ ಮೃತರಾಗಿದ್ದಾರೆ. ನಮ್ಮ ಸಂಸತ್ ಸದಸ್ಯ ರಾಘವೇಂದ್ರ ಸ್ಥಳದಲ್ಲಿದ್ದು ಎಲ್ಲವನ್ನು ವಿಚಾರಿಸುತ್ತಿದ್ದಾರೆ ಎಂದರು.
ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಕೂಡ ಅಲ್ಲಿಗೆ ಹೋಗುತ್ತಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಮತ್ತು ಬಾಂಬ್​ ಪತ್ತೆ ದಳವನ್ನು ಕಳುಹಿಸಿಕೊಡಲಾಗಿದೆ. ತನಿಖೆಯಾದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಕೊಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದರು.
ಈ ರೀತಿಯ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಏನೆಲ್ಲಾ ಕ್ರಮ ಕೈಗೊಳ್ಳಬೇಕೋ ತೆಗೆದುಕೊಳ್ಳುತ್ತೇವೆ ನಮ್ಮ ಅಧಿಕಾರಿಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದು ತನಿಖೆ ಮಾಡುತ್ತಿದ್ದಾರೆ ಎಂದರು. ಈಗಾಗಲೇ ನಾಲ್ಕಾರು ಕಡೆ ಅಕ್ರಮ ಗಣಿಗಾರಿಕೆಯ ನಿಲ್ಲಿಸಲಾಗಿದೆ. ಎಲ್ಲೆಲ್ಲಿ ಈ ರೀತಿಯ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆಯೋ ತಡೆಯಲು ಬಿಗಿಯಾದ ಕ್ರಮ ಕೈಗೊಳ್ಳುತ್ತೇವೆ, ಈ ತರಹದ ದುರ್ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸುತ್ತೇವೆ. ತನಿಖೆಯಾಗಿ ವರದಿ ಬರಲಿ ನಂತರ ತಪ್ಪಿತಸ್ಥರು ಯಾರದೇನು? ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಕ್ವಾರಿ ಲೀಸ್ ಪಡೆದಿದ್ದ ಸುಧಾಕರ್ ಸೇರಿ ಇಬ್ಬರನ್ನು ಬಂಧಿಸಲಾಗಿದೆ ಎಂದರು.

ನಾಳೆ ಶಿವಮೊಗ್ಗಕ್ಕೆ ತೆರಳುತ್ತಿದ್ದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಇದನ್ನೂ ಓದಿ:ಗೂಳಿಯ ಓಟಕ್ಕೆ ಕರಡಿ ಬ್ರೇಕ್: 152 ಅಂಕ ಕುಸಿದ ಸೆನ್ಸೆಕ್ಸ್​

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.