ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೆ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ಸಿಎಂ ಯಡಿಯೂರಪ್ಪ, ಸಚಿವರು ಹಾಗೂ ವಲಯ ಉಸ್ತುವಾರಿಗಳ ಸಭೆ ಕರೆದಿದ್ದಾರೆ.
ನಾಳೆ ಸಂಜೆ 5 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಹೆಚ್ಚುತ್ತಿರುವ ಸೊಂಕಿನ ಪ್ರಮಾಣ ತಡೆಯುವ ಸಂಬಂಧ ಚರ್ಚೆ ನಡೆಸಲಿದ್ದಾರೆ. ನಾಳೆಯ ಸಭೆಯಲ್ಲಿ ಸರ್ಕಾರ ಮುಂದೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಮತ್ತಷ್ಟು ಟಫ್ ರೂಲ್ಸ್ ಮಾಡುವ ಸಂಬಂಧ ಸಮಾಲೋಚನೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ನೆರೆ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ರಾಜ್ಯದ ಮೇಲೆಯೂ ಅದು ಪರಿಣಾಮ ಬೀರುತ್ತಿದೆ. ರಾಜ್ಯದಲ್ಲಿಯೂ ಎರಡನೇ ಅಲೆಯ ಸೂಚನೆ ಸ್ಪಷ್ಟವಾಗುತ್ತಿದೆ. ಹೀಗಾಗಿ ರಾಜ್ಯ ಪ್ರವೇಶಕ್ಕೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ ಸೇರಿದಂತೆ ಕಠಿಣ ನಿಯಮಗಳ ಮೂಲಕ ಕೊರೊನಾ ನಿಯಂತ್ರಣ ಕುರಿತು ಚರ್ಚೆ ನಡೆಯಲಿದೆ.
ಇದನ್ನೂ ಓದಿ:ಭಾರತದಲ್ಲಿ 62,714 ಹೊಸ ಕೊರೊನಾ ಪ್ರಕರಣ ಪತ್ತೆ: 24 ಗಂಟೆಯಲ್ಲಿ 312 ಸೋಂಕಿತರು ಸಾವು