ETV Bharat / state

ಉಸ್ತುವಾರಿ ಜಿಲ್ಲೆಗಳಲ್ಲೇ ವಾಸ್ತವ್ಯ ಹೂಡಿ, ಮಳೆಹಾನಿ ಪರಿಶೀಲಿಸಿ: ಸಚಿವರಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವರುಗಳಿಗೆ ಸಿಎಂ ದೂರವಾಣಿ ಕರೆ ಮಾಡಿದ್ದಾರೆ. ಈ ವೇಳೆ ಮಳೆಹಾನಿ ಪರಿಶೀಲಿಸಿ, ತುರ್ತು ನಿರ್ಧಾರ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಸಚಿವರಿಗೆ ಸಿಎಂ ಸೂಚನೆ
ಸಚಿವರಿಗೆ ಸಿಎಂ ಸೂಚನೆ
author img

By

Published : Aug 6, 2020, 11:53 AM IST

ಬೆಂಗಳೂರು: ಉಸ್ತುವಾರಿ ಜಿಲ್ಲೆಯಲ್ಲಿಯೇ ವಾಸ್ತವ್ಯ ಹೂಡಿ ಮಳೆಹಾನಿ ವೀಕ್ಷಿಸಬೇಕು. ತುರ್ತು ನಿರ್ಧಾರವನ್ನು ನೀವೇ ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಸದ್ಯ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಸಿಎಂ, ಆಸ್ಪತ್ರೆಯಿಂದಲೇ ಮಲೆನಾಡು ಹಾಗು ಕರಾವಳಿ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರಿಗೆ ದೂರವಾಣಿ ಕರೆ ಮಾಡಿ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಸ್ತುವಾರಿ ಜಿಲ್ಲೆಯಲ್ಲೇ ವಾಸ್ತವ್ಯ ಮಾಡುವಂತೆ ಎಲ್ಲಾ ಸಚಿವರಿಗೆ ಸಿಎಂ ಸೂಚನೆ ನೀಡಿದ್ದಾರೆ. ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಬೇಕು. ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಶಾಸಕರ ಜೊತೆಗೂಡಿ ಅಗತ್ಯ ಕ್ರಮ ಕೈಗೊಳ್ಳಬೇಕು. ತುರ್ತು ತೀರ್ಮಾನಗಳನ್ನು ನೀವೇ ತೆಗೆದುಕೊಳ್ಳಿ ಈಗಾಗಲೇ 50 ಕೋಟಿ ಬಿಡುಗಡೆ ಮಾಡಲು ಸೂಚನೆ ಕೊಟ್ಟಿದ್ದೇನೆ. ಜಿಲ್ಲಾಧಿಕಾರಿಗಳ ಸಂಪರ್ಕದಲ್ಲಿದ್ದು, ಕೆಲಸ ಮಾಡಿ ಎಂದು ಸೂಚಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.