ಬೆಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿಯವರ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ನಾಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವದೆಹಲಿಗೆ ತೆರಳುತ್ತಿದ್ದಾರೆ.
ನಾಳೆ ಬೆಳಗ್ಗೆ 9.45ಕ್ಕೆ ದಹಲಿಗೆ ತೆರಳಲಿರುವ ಯಡಿಯೂರಪ್ಪ, ಮಧ್ಯಾಹ್ನ 12.35ಕ್ಕೆ ದೆಹಲಿ ತಲುಪಲಿದ್ದಾರೆ. ದಿ. ಅರುಣ್ ಜೇಟ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲಿದ್ದಾರೆ. ನಾಲ್ಕೂವರೆ ಗಂಟೆವರೆಗೂ ಜೇಟ್ಲಿ ನಿವಾಸದಲ್ಲೇ ಇರಲಿರುವ ಸಿಎಂ ಯಡಿಯೂರಪ್ಪ, ಸಂಜೆ 5.35ಕ್ಕೆ ದೆಹಲಿಯಿಂದ ಬೆಂಗಳೂರಿನ ಕಡೆಗೆ ಪ್ರಯಾಣ ಬೆಳೆಸಲಿದ್ದು, ನಾಳೆ ರಾತ್ರಿ 8.20ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ.