ಬೆಂಗಳೂರು: ನಿಮ್ಹಾನ್ಸ್ ಆಸ್ಪತ್ರೆಯಲ್ಲಿನ ಉತ್ತರ ಕ್ಯಾಂಪಸ್ನಲ್ಲಿ ಹೊಸದಾಗಿ ನಿರ್ಮಿಸಲು ಉದ್ದೇಶಿಸಿರುವ ಹೊರ ರೋಗಿಗಳ ವಿಭಾಗಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಆನ್ಲೈನ್ ಮೂಲಕ ಚಾಲನೆ ನೀಡಿದರು.
ಇದೇ ವೇಳೆ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ನಿಮ್ಹಾನ್ಸ್ ನಿರ್ದೇಶಕ ಬಿ.ಎನ್. ಗಂಗಾಧರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.