ETV Bharat / state

ಲಾಕ್​​ಡೌನ್​​​ ಬಗ್ಗೆ ಬಳಿಕ ತೀರ್ಮಾನ.. ಸದ್ಯ ಹಳ್ಳಿಗಳಲ್ಲಿ ಕೋವಿಡ್​​ ನಿಯಂತ್ರಣವೇ ಸರ್ಕಾರದ ಮೊದಲ ಆದ್ಯತೆ ಎಂದ ಸಿಎಂ

ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಸಿಎಂ ಯಡಿಯೂರಪ್ಪ ಇಂದು ಮಹತ್ವದ ಸಭೆ ನಡೆಸಿ ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದರು. ಎಲ್ಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವಾರಕ್ಕೆ ಎರಡು ಬಾರಿ ಜಿಲ್ಲಾಧಿಕಾರಿಗಳೊಂದಿಗೆ ಕೋವಿಡ್ ನಿರ್ವಹಣೆ ಕುರಿತು ಚರ್ಚಿಸಿ, ಸಮಸ್ಯೆಗಳನ್ನು ಬಗೆಹರಿಸಲು ಸೂಚಿಸಿದ್ರು.

author img

By

Published : May 17, 2021, 8:09 PM IST

Updated : May 17, 2021, 9:57 PM IST

meeting
meeting

ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಡಿಸಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ರಾಜ್ಯದಲ್ಲಿ ಕೋವಿಡ್ 19 ನಿರ್ವಹಣೆ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿ, ಜಿ.ಪಂ ಸಿ.ಇ.ಒ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಶಸ್ತ್ರ ಚಿಕಿತ್ಸಕರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ್ರು. ಜಿಲ್ಲೆಗಳಲ್ಲಿ ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಹಳ್ಳಿಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಹಳ್ಳಿಗಳಲ್ಲಿ ಕೋವಿಡ್​​ ನಿಯಂತ್ರಣವೇ ಸರ್ಕಾರದ ಮೊದಲ ಆದ್ಯತೆ ಎಂದ ಸಿಎಂ
ಪರೀಕ್ಷಾ ವರದಿಗಳನ್ನು 24 ಗಂಟೆಯೊಳಗೆ ನೀಡಲು ಕ್ರಮ ವಹಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಹೋಮ್ ಐಸೋಲೇಷನ್ ಪ್ರಕ್ರಿಯೆಯನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಮನೆ ಮನೆ ಭೇಟಿ ಹಾಗೂ ಫೋನ್ ಟ್ರಯಾಜಿಂಗ್ ಮೂಲಕ ಸೋಂಕಿತ ವರ್ಗೀಕರಣವನ್ನು ತ್ವರಿತವಾಗಿ ನಡೆಸಬೇಕು ಎಂದು ಸೂಚನೆ ನೀಡಲಾಗಿದೆ ಎಂದರು. ಲಾಕ್​ಡೌನ್​ ಬಗ್ಗೆ ಇದುವರೆಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಇನ್ನು ಎರಡು ಮೂರು ದಿನಗಳಲ್ಲಿ ಲಾಕ್‌ಡೌನ್ ವಿಸ್ತರಣೆ ಬಗ್ಗೆ ಚರ್ಚೆ ನಡೆಸುತ್ತೇವೆ. ಎಷ್ಟು ದಿನ ವಿಸ್ತರಣೆ ಮಾಡಬೇಕು ಅಂತ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ. ಸದ್ಯ ಮೇ 24 ರವರೆಗೆ ಲಾಕ್‌ಡೌನ್ ಇದೆ. ಉಳಿದಂತೆ ವಿಶೇಷ ಪ್ಯಾಕೇಜ್ ಬಗ್ಗೆಯೂ ಚರ್ಚೆ ನಡೆಸುತ್ತೇವೆ ಎಂದರು.ವಿಡಿಯೋ ಸಂವಾದ ವೇಳೆ ನೀಡಿದ ಸೂಚನೆ ಏನು?:- ಹೋಮ್ ಐಸೊಲೇಷನ್‍ನಲ್ಲಿ ಇರುವವರಿಗೆ ಮೆಡಿಕಲ್ ಕಿಟ್ ಒದಗಿಸಲು ಔಷಧ ಕೊರತೆಯಾದಲ್ಲಿ ಸ್ಥಳೀಯವಾಗಿ ಖರೀದಿಸಿ, ಒದಗಿಸಲು ಸೂಚನೆ.

- ಗ್ರಾಮೀಣ ಮತ್ತು ಅರೆ ನಗರ ಪ್ರದೇಶಗಳಲ್ಲಿ ಕೋವಿಡ್ ನಿರ್ವಹಣೆಗೆ ಭಾರತ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಯಿತು.

- ಹೆಚ್ಚುತ್ತಿರುವ ಸೋಂಕಿತರನ್ನು ರೋಗಲಕ್ಷಣದ ತೀವ್ರತೆಗೆ ಅನುಗುಣವಾಗಿ ಚಿಕಿತ್ಸಾ ವಿಧಾನವನ್ನು ನಿರ್ಧರಿಸುವ ಮೂಲಕ ಸಂಪನ್ಮೂಲಗಳ ಸದ್ಭಳಕೆ ಮಾಡಿಕೊಳ್ಳಬೇಕಾಗಿದೆ. ತುರ್ತು ಚಿಕಿತ್ಸೆ ಅಗತ್ಯವಿರುವವರಿಗೆ ಸಕಾಲದಲ್ಲಿ ಚಿಕಿತ್ಸೆಯನ್ನು ಖಾತರಿ ಪಡಿಸುವಂತೆ ಸೂಚಿಸಲಾಯಿತು.

- ಇದಕ್ಕೆ ಪೂರಕ ವ್ಯವಸ್ಥೆಗಳನ್ನು ನೀವು ಮಾಡಿಕೊಳ್ಳಬೇಕು. ಅಗತ್ಯಕ್ಕೆ ತಕ್ಕಂತೆ ಕೋವಿಡ್ ಕೇರ್ ಸೆಂಟರ್​ಗಳು, ತಾತ್ಕಾಲಿಕ ಆಸ್ಪತ್ರೆಗಳನ್ನು ಸ್ಥಾಪಿಸಲು ಸಹ ಸ್ಥಳ ಗುರುತಿಸಿ, ಅಗತ್ಯ ಸೌಲಭ್ಯ ಒದಗಿಸಲು ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಲಾಯಿತು.

- ಎಲ್ಲ ಜಿಲ್ಲೆಗಳಿಗೆ ಅಗತ್ಯವಿರುವಷ್ಟು ಆಕ್ಸಿಜನ್ ಕಾನ್ಸ್​ನ್​ಟ್ರೇಟರ್​ಗಳನ್ನು ಆರೋಗ್ಯ ಇಲಾಖೆಯಿಂದ ಒದಗಿಸಲಾಗುತ್ತಿದೆ.

- ಆಮ್ಲಜನಕ ಪೂರೈಕೆಯನ್ನು ಮುಂಚಿತವಾಗಿಯೇ ಅಂದಾಜಿಸಿ, ಸಕಾಲದಲ್ಲಿ ಪೂರೈಕೆಯಾಗುವುದನ್ನು ಖಾತರಿ ಪಡಿಸಬೇಕು. ತುರ್ತು ಸಂದರ್ಭಗಳಲ್ಲಿ ನೆರೆಯ ಜಿಲ್ಲೆಗಳೊಂದಿಗೆ ಸಮನ್ವಯ ವಹಿಸಿ, ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಬೇಕು.

- ಚಿಕಿತ್ಸಾ ಸೌಲಭ್ಯ, ಔಷಧ, ಆಮ್ಲಜನಕ ಮತ್ತಿತರ ಸಂಪನ್ಮೂಲಗಳನ್ನು ವಿವೇಚನೆಯಿಂದ ಬಳಕೆ ಮಾಡಿಕೊಂಡು, ಹೆಚ್ಚು ಜನರಿಗೆ ಅನುಕೂಲ ಕಲ್ಪಿಸಬೇಕು. ಹೋಮ್ - ಐಸೋಲೇಷನ್ ನಲ್ಲಿರುವವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ, ಅವರಿಗೆ ಮೆಡಿಸಿನ್‍ಗಳನ್ನು ಸರಿಯಾದ ರೀತಿಯಲ್ಲಿ ಒದಗಿಸಿಬೇಕು ಹಾಗೂ ಅವರ ಆರೋಗ್ಯ ಸ್ಥಿತಿಗಳ ಕುರಿತು ಪ್ರತಿದಿನ ಮಾಹಿತಿ ಪಡೆದುಕೊಳ್ಳಬೇಕು.

- ಪರಿಸ್ಥಿತಿಯ ತೀವ್ರತೆಗೆ ಅನುಗುಣವಾಗಿ ನಿರ್ಬಂಧಗಳನ್ನು ಇನ್ನಷ್ಟು ಕಠಿಣಗೊಳಿಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಯಿತು.

- ವಿವಿಧ ಜಿಲ್ಲೆಗಳಲ್ಲಿ ಪತ್ತೆಯಾಗುತ್ತಿರುವ ಬ್ಲಾಕ್ ಫಂಗಸ್ ಪ್ರಕರಣಗಳ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿಗಳು, ಪ್ರಸ್ತುತ ಬೌರಿಂಗ್ ಆಸ್ಪತ್ರೆಯಲ್ಲಿ ಇದಕ್ಕೆ ಚಿಕಿತ್ಸಾ ಸೌಲಭ್ಯ ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ವಿಭಾಗ ಮಟ್ಟದಲ್ಲಿ ಈ ಸೌಲಭ್ಯ ಕಲ್ಪಿಸಲಾಗುವುದು.

- ಭದ್ರಾವತಿಯ ವಿಐಎಸ್‍ಎಲ್ ನಲ್ಲಿ ಆಮ್ಲಜನಕ ಉತ್ಪಾದನೆ ಹಾಗೂ ಬಾಟ್ಲಿಂಗ್ ಸಾಮರ್ಥ್ಯ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಯಿತು.

- ಗ್ರಾಮೀಣ ಪ್ರದೇಶದಲ್ಲಿ ಹೋಮ್ ಐಸೋಲೇಷನ್​ಗೆ ಸೂಕ್ತ ಸೌಲಭ್ಯ ಇಲ್ಲದ ಕಾರಣ, ಪಿಎಚ್​ಸಿ ಮಟ್ಟದಲ್ಲಿ, ಹೋಬಳಿಗಳಲ್ಲಿ ವಸತಿ ಶಾಲೆ, ಸಮುದಾಯ ಭವನಗಳನ್ನು ಕೋವಿಡ್ ಕೇರ್ ಸೆಂಟರ್​ಗಳನ್ನು ತೆರೆಯಲು ಸೂಚನೆ.

- ಬ್ಲ್ಯಾಕ್ ಫಂಗಸ್ ಹೊಸ ಕಾಯಿಲೆ ಅಲ್ಲ. ಐಸಿಯು, ವೆಂಟಿಲೇಟರ್​ಗಳು, ಹ್ಯುಮಿಡಿಫೈಯರ್ ಬಳಕೆಯಿಂದ ಹೆಚ್ಚಾಗುತ್ತಿದೆ. ಐದು ವಿಭಾಗೀಯ ವೈದ್ಯಕೀಯ ಕಾಲೇಜುಗಳಲ್ಲಿ ಚಿಕಿತ್ಸಾ ವ್ಯವಸ್ಥೆ- ಶಿವಮೊಗ್ಗ, ಕಲಬುರಗಿ, ಮೈಸೂರು, ಹುಬ್ಬಳ್ಳಿ, ಮಂಗಳೂರಿನಲ್ಲಿ ಪ್ರಾರಂಭಿಸಲು ನಿರ್ಧಾರ

- ಟ್ರಯಾಜಿಂಗ್ ಎರಡು ಹಂತದಲ್ಲಿ ಆಗಲೇಬೇಕು. ಪರೀಕ್ಷಾ ವರದಿ ಬಂದು ಎರಡು ಗಂಟೆಯೊಳಗೆ ಹಾಗೂ ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ಆಗಲೇ ಬೇಕು ಎಂದು ಸೂಚಿಸಲಾಯಿತು.

- ಎಲ್ಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವಾರಕ್ಕೆ ಎರಡು ಬಾರಿ ಜಿಲ್ಲಾಧಿಕಾರಿಗಳೊಂದಿಗೆ ಕೋವಿಡ್ ನಿರ್ವಹಣೆ ಕುರಿತು ಚರ್ಚಿಸಿ, ಸಮಸ್ಯೆಗಳನ್ನು ಬಗೆಹರಿಸಲು ಸೂಚನೆ.

- ಲಸಿಕೆ ನೀಡುವ ಕುರಿತಂತೆ ಚರ್ಚೆ ನಡೆದ ಸಂದರ್ಭದಲ್ಲಿ, ಲಭ್ಯವಿರುವ ಲಸಿಕೆಯನ್ನು 45 ವರ್ಷ ಮೇಲ್ಪಟ್ಟ ಎರಡನೇ ಡೋಸ್​ಗೆ ಅರ್ಹ ವ್ಯಕ್ತಿಗಳಿಗೆ ಆದ್ಯತೆಯ ಮೇರೆಗೆ ನೀಡಬೇಕು. ನಂತರ 45 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಮೊದಲ ಡೋಸ್ ನೀಡಬೇಕು ಎಂದು ಸೂಚನೆ.

ಜಿಲ್ಲಾಧಿಕಾರಿಗಳಿಗೆ ಸಿಎಂ ತರಾಟೆ:

ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಸಿಎಂ ಡಿಸಿಗಳನ್ನು ತರಾಟೆಗೆ ತೆಗೆದುಕೊಂಡರು. ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಹಬ್ಬದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದೇ ಈ ಪರಿಸ್ಥಿತಿಗೆ ಕಾರಣವಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್​ ಸೋಂಕು ಹೆಚ್ಚಾಗುತ್ತದೆ ಎಂಬ ಮುನ್ಸೂಚನೆ ನೀಡಿದ್ದರೂ, ಕ್ರಮ ಕೈಗೊಳ್ಳದಿರುವ ಬಗ್ಗೆ ಜಿಲ್ಲಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Last Updated : May 17, 2021, 9:57 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.