ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರದ ನವೀಕೃತ ಯೋಜನೆಗಳ ಕುರಿತು ಸಭೆ ಜರುಗಿತು.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ನವೀಕೃತ ಯೋಜನೆಗಳ ವಿವರವನ್ನು ಪವರ್ ಪಾಯಿಂಟ್ ಪ್ರೆಸೆಂಟೇಷನ್ ಮೂಲಕ ಸಿಎಂ ಬಿಎಸ್ವೈಗೆ ಅಧಿಕಾರಿಗಳು ವಿವರಿಸಿದರು.
ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಪ್ರವಾಸೋದ್ಯಮ ಸಚಿವ ಸಿ.ಟಿ ರವಿ, ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ ಇ.ವಿ.ರಮಣರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
![cm yadiyurappa meeting about new projects](https://etvbharatimages.akamaized.net/etvbharat/prod-images/kn-bng-13-cm-meeting-script-7208080_30092020223439_3009f_1601485479_879.jpg)